News

ಕರಾವಳಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಸೆಪ್ಟೆಂಬರ್ 6ರವರೆಗೆ ಭಾರಿ ಮಳೆ ಸಾಧ್ಯತೆ- ಯೆಲ್ಲೋ ಅಲರ್ಟ್ ಘೋಷಣೆ

03 September, 2021 11:15 AM IST By:

ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸೆಪ್ಟೆಂಬರ್ 6 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈಗಾಗಲೇ ಬೆಂಗಳೂರು, ಸೇರಿದಂತೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಮಲೆನಾಡಿನಲ್ಲಿ ಮಳೆಯಾಗುತ್ತಿರುವುದು ವರದಿಯಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಹಾಗೂ ಉತ್ತರ ಕರ್ನಾಟಕ ಜಿಲ್ಲೆಗಳಾದ ಬೀದರ್‌, ಕಲಬುರಗಿ ಮತ್ತು ವಿಜಯಪುರ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಿಗೆ ಸೆಪ್ಟೆಂಬರ್‌ 5ರಂದು ಭಾರಿ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್‌ ಘೋಷಣೆ ಮಾಡಲಾಗಿದೆ.

ಅದೇ ರೀತಿಯಾಗಿ ಸೆಪ್ಟೆಂಬರ್‌ 6ರಂದು ಕರಾವಳಿ ಮತ್ತು ಮಲೆನಾಡಿನ ಎಲ್ಲ ಜಿಲ್ಲೆಗಳಿಗೆ ಹಾಗೂ ಬೀದರ್‌, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದಿರಂದ ಯೆಲ್ಲೋ ಆಲರ್ಟ್‌ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ಹೇಳಿದೆ.

ಉಡುಪಿ, ಉತ್ತರ ಕನ್ನಡ, ದಕ್ಷಿಣಕನ್ಡಡ, ಕೊಡಗು, ಶಿವಮೊಗ್ಗ, ಹಾಸನ, ರಾಮನಗರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ,  ಉತ್ತರ ಕರ್ನಾಟಕದ ಹಾಗೂ ಹೈದ್ರಾಬಾದ್ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 6 ರವರೆಗೆ ಗುಡುಗು ಮಿಂಚಿನ ಸಮೇತ ಮಳೆಯಾಗಲಿದೆ. ರಾಜ್ಯದ ಕೆಲ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಸರ್ಕಾರ ಈಗಾಗಲೇ ಎಚ್ಚರಿಕೆಯ ಕ್ರಮಗಳನ್ನು ಅನುಸರಿಸಲು ಸೂಚನೆ ನೀಡಿದೆ. ರಾಜ್ಯದ

ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯ ಕಾರಣದಿಂದಾಗಿ ಕೊರತೆ ಪ್ರಮಾಣ ನೀಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾ ನಿರ್ದೇಶಕರು ಬುಧವಾರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ

ಬೆಂಗಳೂರು ನಗರದಲ್ಲಿ ಗುರುವಾರ ಸಂಜೆಯಿಂದ ರಾತ್ರಿಯವರೆಗೆ ಮಳೆ ಅಬ್ಬರ ಜೋರಾಗಿತ್ತು. ಬಹುತೇಕ ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯಿತು. ಹರಿಯುವ ನೀರಿನಲ್ಲಿ ವಾಹನಗಳು ನಿಧಾನಗತಿಯಲ್ಲಿ ಸಂಚರಿಸಿದ್ದರಿಂದ ಸಂಚಾರ ದಟ್ಟಣೆಯೂ ಉಂಟಾಯಿತು.

ಮೆಜಿಸ್ಟಿಕ್, ಗಾಂಧಿನಗರ, ಹೆಬ್ಬಾಳ, ಆರ್.ಟಿ. ನಗರ, ಸಂಜಯನಗರ, ಶಿವಾಜಿನಗರ, ಅಕೋಶಕನಗರ, ಬೈಯಪ್ಪನಹಳ್ಳಿ, ರಾಮಮೂರ್ತಿನಗರ, ಬಾಣಸವಾಡಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಮಳೆಯಾಗಿದೆ.

ಅಮೇರಿಕಾದಲ್ಲಿ ಇಡಾ' ಚಂಡಮಾರುತಕ್ಕೆ ನಲುಗಿದ ನ್ಯೂಯಾರ್ಕ್

ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಇಡಾ ಚಂಡಮಾರುತ ಅನಾಹುತದಿಂದಾಗಿ ನಾಗರಿಕರು ತತ್ತರಿಸಿದ್ದಾರೆ. ಗುರುವಾರ ರಾತ್ರಿಯಿಡೀ ಸುರಿದ ಭಾರಿ ಮಳೆಯಾಗಿದ್ದರಿಂದ ಪ್ರವಾಹ ಉಂಟಾಗಿ ಕನಿಷ್ಟ 44 ಮಂದಿ ಬಲಿಯಾಗಿದ್ದಾರೆ. ಕಟ್ಟಡಗಳ ಅವಶೇಷಗಳೇ ಹೆಚ್ಚಿನ ಜನರನ್ನು ಬಲಿಪಡೆದುಕೊಂಡಿವೆ. ಕೆಲವರು ಕಟ್ಟಡಗಳ ಉರುಳಿವೆ.