News

ರಾಜ್ಯದಲ್ಲಿ ಮುಂಗಾರು ಚುರುಕು- ಜುಲೈ 5 ರವರೆಗೆ ಉತ್ತಮ ಮಳೆ ಸಾಧ್ಯತೆ

03 July, 2020 9:33 AM IST By:

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಜುಲೈ 5 ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

 ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿಗೆ ಜು.5ರವರೆಗೆ ಆರೆಂಜ್‌ ಅಲರ್ಟ್‌ ಹಾಗೂ ನಂತರ 2 ದಿನ ಯೆಲ್ಲೊ ಅಲರ್ಟ್‌ ಘೋಷಣೆ ಮಾಡಿದೆ. ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಿಲಿಗೆ ಇಳಿಯದಂತೆ ಇಲಾಖೆ ಸೂಚಿಸಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಜು.5ರವರೆಗೆ ಯೆಲ್ಲೋ ಅಲರ್ಟ್‌ ಇದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಜು.5ರವರೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುರುವಾರ ಉತ್ತಮ ಮಳೆಯಾಗಲಿದೆ. ಇದೇ ರೀತಿ ಮುಂದಿನ 5 ದಿನವರೆಗೆ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿದಿದ್ದು, ಕೆಲವು ಪ್ರದೇಶಗಲಲ್ಲಿ ಗಾಳಿಯ ಅಬ್ಬರವೂ ಇತ್ತು. ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವಣವಿದ್ದು ಅಲ್ಲಲ್ಲಿ ಚದುರಿದ ಮಳೆಯಾಗಿದೆ.