News

ಕರಾವಳಿಯಲ್ಲಿ ನಾಲ್ಕು ದಿನ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

14 August, 2021 10:20 AM IST By:
rain

ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 17 ರವರೆಗೆ  ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ಕ್ಷೀಣಿಸಿದ್ದ ಮಳೆ ಆಗಸ್ಟ್ 12 ರಿಂದ ಸ್ವಲ್ಪ ಚುರುಕಾಗಿದೆ. ಆಗಸ್ಟ್ 16 ರವರೆಗೆ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರ ನೈಋತ್ಯ ಮುಂಗಾರು ಒಳನಾಡಿನಲ್ಲಿ ಸಾಮಾನ್ಯ ಹಾಗೂ ಕರಾವಳಿಯಲ್ಲಿ ದುರ್ಬಲವಾಗಿತ್ತು. ಆದರೆ ಕರಾವಳಿಯ ಬಹುತೇಕ ಕಡೆ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಆಗಸ್ಟ್ 17 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಹುತೇಕ ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲೂ ಈ ವಾರ ಮಳೆಯ ಆರ್ಭಟ ಹೆಚ್ಚಾಗಲಿದೆ. ಇಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಆಗಸ್ಟ್ 14 ರಂದು  ಮಳೆಯಾಗಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿ ಮುಂದಿನ ಎಱಡು ದಿನ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ನಗರದಲ್ಲಿ ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನಲ್ಲಿ ಮಳೆಯ ನಿರೀಕ್ಷೆ

ಬೆಳಗಾವಿ, ಬೀದರ್, ಧಾರವಾಡ, ಗಸಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಶುಕ್ರವಾರ ಹೊಸಪೇಟೆ ನಗರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಬಿರುಸಿನ ಮಳೆಯಾಗಿದೆ. ಮಧ್ಯಾಹ್ನ ಮೂರೂವರೆಯಿಂದ ಆರಂಭವಾದ ಮಳೆ ಸಂಜೆ 5.30ರವರೆಗೂ ಸುರಿದಿದೆ, ಬೆಳಗ್ಗೆಯಿಂದಲ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು.ವಿಜಯಪುರದ ತಾಳಿಕೋಟೆಯಲ್ಲಿ 4 ಸೆಂಟಿ ಮೀಟರ್, ಉಡುಪಿಯ ಕೋಟ, ಉತ್ತರ ಕನ್ನಡದ ಶಿರಾಲಿ, ಹೊನ್ನಾವರ, ಕುಷ್ಟಗಿ, ತುಮರಿ, ಮೈಸೂರಿನ ಸರಗೂರು ಮತ್ತು ಕೊಪ್ಪಳದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 2 ಸೆಂ.ಮೀ, ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 2 ಸೆಂ.ಮೀ. ಮಳೆಯಾಗಿದೆ.