News

ರಾಜ್ಯದ 7 ಜಿಲ್ಲೆಗಳಲ್ಲಿ ಸೆ. 23 ರವರೆಗೆ ರೆಡ್ ಅಲರ್ಟ್’ ಮುಂದುವರಿಕೆ

21 September, 2020 8:14 AM IST By:

 ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ದ.ಕ., ಉಡುಪಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಸೆಪ್ಟೆಂಬರ್ 21 ರಿಂದ 23 ರವರೆಗೆ  ದಿನ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ 204.5 ಮಿ.ಮೀಟರಿಗೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗವುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ.

ಈ ಜಿಲ್ಲೆಗಳಲ್ಲಿ ಸೆ.21 ರವರೆಗೆ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೆ.23 ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಗಾಳಿ ವೇಗ ಹೆಚ್ಚಿರುವ ಸಾಧ್ಯತೆಯಿದೆ. ಕಡಲಿನ ಅಬ್ಬರ ಜಾಸ್ತಿ ಇರುವುದರಿಂದ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

ಕೇರಳದ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್:

ಕೇರಳದ ಹಲವು ಭಾಗಗಳಲ್ಲಿ ಭಾನುವಾರ ಮಳೆ ಸುರಿದಿದೆ. ಮುಂಜಾಗ್ರತಾ ಕ್ರಮವಾಗಿ ಕಾಸರಗೋಡು, ಕಣ್ಣೂರು, ಮಲಪ್ಪುರಂ ಹಾಗೂ ಇಡುಕ್ಕಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್‌ ಅಲರ್ಟ್ ಘೋಷಿಸಿದೆ.

ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ವಯನಾಡ್ ಸೇರಿ ಸುತ್ತಮುತ್ತಲಿನ ಆರು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಹಾಗೂ ತಿರುವನಂತಪುರಂ ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರೆಡ್ ಹಾಗೂ ಆರೇಂಜ್ ಅಲರ್ಟ್ ಘೋಷಿಸಿರುವ ಜಿಲ್ಲೆಗಳಲ್ಲಿ ರಾಷ್ಟ್ರೀಯ ಎನ್.ಡಿ.ಆರ್.ಎಪ್ ತಂಡಗಳನ್ನು ನಿಯೋಜಿಸಲಾಗಿದೆ.