News

ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ-ಯೆಲ್ಲೋ ಅಲರ್ಟ್

17 August, 2020 9:27 AM IST By:

ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ, ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಆ.17ರಿಂದ 19ರವರೆಗೆ ಹಾಗೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಆ.17ರಂದು ವ್ಯಾಪಕ ಮಳೆಯಾಗಲಿರುವ (Heavy rain) ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ (yellow alert) ಘೋಷಿಸಲಾಗಿದೆ.

.ಕರಾವಳಿ ಜಿಲ್ಲೆಗಳಲ್ಲಿ ಆ.19ರವರೆಗೆ ಹೆಚ್ಚು ಮಳೆಯಾಗಲಿದೆ. ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.3 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇರು ವುದರಿಂದ ಮೀನುಗಾರರು (Fishers) ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

 ಮಳೆ-ಎಲ್ಲಿ, ಎಷ್ಟು?: ಬೆಳಗಾವಿಯಲ್ಲಿ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಂಪ್ಲಿ 7, ಆಗುಂಬೆ 6, ಹೊಸನಗರ 5, ಬೈಲಹೊಂಗಲ, ಧಾರವಾಡ 4, ಅಂಕೋಲಾ, ಹುನಗುಂದ, ಹುಕ್ಕೇರಿ, ನಿಪ್ಪಾಣಿ, ಚಿಂಚೋಳಿ, ಭಾಗಮಂಡಲ 3, ಉಡುಪಿ, ಕುಂದಾಪುರ, ಕಾರವಾರ, ಪುತ್ತೂರು, ರಾಮದುರ್ಗ, ನರಗುಂದ 2, ಮೂಡುಬಿದರೆ, ಸಾಗರ, ಸಕಲೇಶಪುರ, ಗಂಗಾವತಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.