News

ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ-ಆರೇಂಜ್ ಅಲರ್ಟ್

14 September, 2020 7:59 AM IST By:

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ.14ರಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳವಾರ ಬೆಳಗಿನವರೆಗೆ 48 ಗಂಟೆಗಳ ಅವಧಿಯಲ್ಲಿ ಕರಾವಳಿಯ ಎಲ್ಲೆಡೆ ಹಾಗೂ ಒಳನಾಡಿನ ಹಲವೆಡೆ ಮಳೆಯಾಗಲಿದೆ. ಹಾಗಾಗಿ ಸೆ. 14 ರಂದು ಆರೇಂಜ್ ಅಲರ್ಟ್, ಸೆ. 15 ರಿಂದ 18 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.  

ಉತ್ತರ ಒಳನಾಡಿನ ಬೀದರ್, ಕಲಬುರಗಿ ಹಾಗೂ ಯಾದಗಿರಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸೆ.15 ರಿಂದ ಮಳೆ ತಗ್ಗಲಿದೆ.

ಕರಾವಳಿ ಜಿಲ್ಲೆಗಳಲ್ಲಿ ಸೆ.18 ರವರೆಗೆ ಭಾರಿ ಮಳೆಯಾಗಲಿದೆ. ಸಮುದ್ರದಲ್ಲಿ ಎತ್ತರದ ಅಲೆಗಳು ಏಳುತ್ತಿವೆ. ಈ ಭಾಗದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.