News

ರಾಜ್ಯದಲ್ಲಿ ಮುಂಗುರು ಚುರುಕು- ಕಲ್ಯಾಣ ಕರ್ನಾಟಕದಲ್ಲಿಯೂ ಭಾರೀ ಮಳೆ ಸಾಧ್ಯತೆ

29 June, 2020 12:32 PM IST By:

ರಾಜ್ಯದಲ್ಲಿ ನೈಋುತ್ಯ ಮುಂಗಾರು ಚುರುಕಾಗಿದ್ದು, ಜು.3 ರವರೆಗೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ  ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಗೆ ಜು.1 ರವರೆಗೆ ಯೆಲ್ಲೋ ಅಲರ್ಟ್‌ ಮತ್ತು ಜು.3 ರವರೆಗೆ ಆರೇಂಜ್‌ ಅಲರ್ಟ್‌ ನೀಡಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೆ ಜು.1 ರವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್‌, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಜುಲೈ 1ರಂದು ಹೆಚ್ಚು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.