News

ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕು: ಹಲವೆಡೆ ಭಾರಿ ಮಳೆ

09 June, 2020 2:41 PM IST By:

ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ನೈರುತ್ಯ ಮುಂಗಾರು ಮಾರುತ  ಪ್ರವೇಶಿಸಿದ್ದು, ಭಾನುವಾರ ಮತ್ತು ಸೋಮವಾರ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ. ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ, ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ  ಧಾರಾಕಾರ ಮಳೆ ಸುರಿದಿದೆ.

ಸೋಮವಾರ ರಾಜ್ಯದ ಕರಾವಳಿ ಭಾಗ, ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕದ ಹಲವೆಡೆ ಭಾರಿ ಮಳೆ ಸುರಿದಿದೆ. ಉತ್ತರ ಕನ್ನಡ ಜಿಲ್ಲೆಯ ಆಂಕೋಲಾ ಮತ್ತು ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಧಾರಾಕಾರ ಮಳೆ ಸುರಿದಿದೆ.

ಎಲ್ಲೆಲ್ಲಿ ಮಳೆ.? ಸೋಮವಾರ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ, ಶಿವಮೊಗ್ಗ ಜಿಲ್ಲೆಯ ಹೊಸನಗರ, ಬೆಂಗಳೂರು ಗ್ರಾಮಾಂತರ, ದೇವನಹಳ್ಳಿ, ಮಂಡ್ಯ, ಕನಕಪುರ, ರಾಮನಗರದಲ್ಲಿ ಉತ್ತಮ ಮಳೆಯಾಗಿದೆ.

ಕರಾವಳಿ  ಪ್ರದೇಶದಲ್ಲಿ ಹೆಚ್ಚು ಮಳೆ ಸಾಧ್ಯತೆ? ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಮತ್ತು ಉತ್ತರ ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.