News

ರಾಜ್ಯದ ಕರಾವಳಿ ಸೇರಿದಂತೆ 24 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ.... ಯೆಲ್ಲೋ ಅಲರ್ಟ್ ಘೋಷಣೆ

06 July, 2021 5:16 PM IST By:

ಕೆಲ ದಿನಗಳಿಂದ ಕ್ಷೀಣಿಸಿದ್ದ ನೈರುತ್ಯ ಮುಂಗಾರು ಮತ್ತೆ ಚುರುಕುಗೊಳ್ಳುವ ಸಾಧ್ಯತೆಯಿದೆ. ಕರಾವಳಿ ಹಾಗೂ ಒಳನಾಡಿನಲ್ಲಿ ಜುಲೈ 8ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರ, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕಲಬುರಗಿ, ಬೀದರ್, ಯಾದಗಿರಿ, ಬಾಗಲಕೋಟೆ, ಧಾರವಾಡ, ವಿಜಯಪುರ ಜಿಲ್ಲೆಗಳಲ್ಲಿ ಜುಲೈ 7ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಜುಲೈ 10ರನವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಗಾಳಿಯ ವೇಗ ಇಲ್ಲದಿರುವುದು ಹಾಗೂ ತೇವಾಂಶದ ಕೊರತೆಯಿಂದಾಗಿ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿತ್ತು.  ಶ್ರೀಲಂಕಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಜುಲೈ 8ರವರೆಗೆ  ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಜುಲೈ 7 ಮತ್ತು 8 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕ್ಷೀಣಗೊಂಡಿರುವ ಮಳೆ ಜುಲೈ 5 ರಿಂದ ಮಳೆಯ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಲ್ಲಿ 7 ಮತ್ತು 8 ರಂದು ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೋಲಾರದಲ್ಲಿ 7 ರಂದು ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜುಲೈ 8 ರಿಂದ ಮುಂಗಾರು ಚುರುಕು ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗುತ್ತಿರುವ ವಾತಾವರಣವನ್ನು ಗಮನಿಸಿದರೆ ಕೆಲ ದಿನಗಳಲ್ಲಿ ಮುಂಗಾರು ಚುರುಕುಗೊಳ್ಳುವ ಲಕ್ಷಣಗಳು ಕಾಣುತ್ತಿವೆ. ದೇಶಧ ದಕ್ಷಿಣ, ಪಶ್ಚಿಮ ಕರಾವಳಿ, ಪೂರ್ವ ಮಧ್ಯ ಭಾಗದಲ್ಲಿ ಜುಲೈ 8 ರಿಂದ ಮಳೆಯಾಗಲಿದೆ ಎಂದು ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ. ರಾಜೀವನ್ ತಿಳಿಸಿದ್ದಾರೆ.

ಜೂನ್ ತಿಂಗಳ ಮೊದಲ ಎಱಡು ಮೂರು ವಾರಗಳವರೆಗೆ ಉತ್ತಮ ಮಳೆಯಾಗಿತ್ತು. ನಂತರ ಮಳೆಯ ಪ್ರಮಾಣ ಕಡಿಮೆಯಾಗಿತ್ತು. ಕರ್ನಾಟಕ, ತಮಿಳುನಾಡು, ಕೇರಳ,ಮಹಾರಾಷ್ಟ್ರ ಸೇರಿದಂತೆ ದಕ್ಷಿಣ ಇನ್ನೂ ಕೆಲವು ರಾಜ್ಯಗಳಲ್ಲಿ ಉತ್ತಮ ಮಳೆಯಾಗಿತ್ತು. ಆದರೆ ಉತ್ತರ ಭಾರತದ ದೆಹಲಿ, ಹರಿಯಾಣ, ಉತ್ತರ ಪ್ರದೇಶದ ಪಶ್ಚಿಮದ ಭಾಗಗಳು, ರಾಜಸ್ಥಾನ ಮತ್ತು ಪಂಜಾಬ ರಾಜ್ಯಗಳಲ್ಲಿ ಮುಂಗಾರು ಪ್ರವೇಶ ಮಾಡಿದ ಬಿಸಿಲಿನ ಸೆಕೆಯೂ ಹೆಚ್ಚಾಗಿದೆ.ಮುಂಗಾರು 8 ರ ನಂತರ ಚುರುಕುಗೊಳ್ಳುವ ಸಾಧ್ಯತೆಯಿರುವುದರಿಂದ ಜುಲೈ 11 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.