1. ಸುದ್ದಿಗಳು

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ; ಶಾಲಾ-ಕಾಲೇಜುಗಳಿಗೆ ರಜೆ!

Kalmesh T
Kalmesh T
Heavy rains in Karnataka: Holidays for schools and colleges!

ಕರ್ನಾಟಕ ರಾಜ್ಯದಲ್ಲಿ ಭಾರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿರಿ: ಗುಡ್‌ನ್ಯೂಸ್‌: ಇಲ್ಲಿದೆ ರೈತರ ಮಕ್ಕಳಿಗೆ 50% ಮೀಸಲಾತಿ; ಏನಿದು ಗೊತ್ತೆ?

ಕರ್ನಾಟಕದ ವಿವಿದ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕರ್ನಾಟಕದ ಹಲವೆಡೆ ಬಿಡದೇ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ, ಶಿವಮೊಗ್ಗ ಕೊಡುಗು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ.

ಇದರ ಮಧ್ಯೆ ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಹಳ್ಳ-ಕೊಳ್ಳಗಳು ಭರ್ತಿಯಾಗಿ ತುಂಬಿ ಹರಿಯುತ್ತಿವೆ.

2022 ರಲ್ಲಿ 144.67 ಲಕ್ಷ ಟನ್‌ ಆಹಾರ ಧಾನ್ಯ ಉತ್ಪಾದನಾ ಗುರಿ!

ಇನ್ನು ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ರಾಜ್ಯದ ವಿವಿಧ ಜಲಾಶಯಗಳ ನೀರಿನ ಮಟ್ಟವೂ ಹೆಚ್ಚುತ್ತಿದೆ. ನದಿಗಳ ಒಳಹರಿವಿನ ಪ್ರಮಾಣ ಪ್ರವಾಹ ಮಟ್ಟದಲ್ಲಿ ಹರಿಯುತ್ತಿವೆ.

ಮುಂದಿನ 24 ಗಂಟೆಗಳಲ್ಲಿ ಹವಾಮಾನ ಚಟುವಟಿಕೆ ಸಾಧ್ಯತೆ

ಮುಂದಿನ 24 ಗಂಟೆಗಳಲ್ಲಿ, ಕೊಂಕಣ ಮತ್ತು ಗೋವಾ ಕರಾವಳಿ ಕರ್ನಾಟಕ ಮತ್ತು ಗುಜರಾತ್‌ನ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ಮಧ್ಯಪ್ರದೇಶ, ವಿದರ್ಭ, ಉತ್ತರ ಮಧ್ಯ ಮಹಾರಾಷ್ಟ್ರ, ಗುಜರಾತ್‌ನ ಉಳಿದ ಭಾಗಗಳು, ದಕ್ಷಿಣ ರಾಜಸ್ಥಾನ, ಕೇರಳ ಮತ್ತು ಒಡಿಶಾದ ಕೆಲವು ಭಾಗಗಳು, ಛತ್ತೀಸ್‌ಗಢ,

ಬ್ರೇಕಿಂಗ್‌; 276 ಕಳಪೆ ಬೀಜ ವಿತರಣೆ ಪ್ರಕರಣ ದಾಖಲು, 416 ಪರವಾನಗಿ ರದ್ದು!

ತೆಲಂಗಾಣ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಲಘುವಾಗಿ ಸಾಧಾರಣ ಮಳೆಯಾಗಬಹುದು.

ಹವಾಮಾನ ಇಲಾಖೆ (IMD) ಕರ್ನಾಟಕ, ಗುಜರಾತ್, ಒಡಿಶಾ, ಜಾರ್ಖಂಡ್, ಮುಂಬೈ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಹಲವು ಸ್ಥಳಗಳಲ್ಲಿ ಭಾರೀ ಮತ್ತು ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದೆ.

Published On: 07 July 2022, 12:07 PM English Summary: Heavy rains in Karnataka: Holidays for schools and colleges!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.