News

Heavy Rain ರಾಜ್ಯದ ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಐಎಂಡಿ ವರದಿ

09 January, 2024 2:23 PM IST By: Hitesh
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಬೆಂಗಳೂರು ಸೇರಿದಂತೆ ಆರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಒಟ್ಟು 13 ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗಲಿದೆ

ಎಂದು ಹವಾಮಾನ ಇಲಾಖೆ ರಿಪೋರ್ಟ್‌ ತಿಳಿಸಿದೆ. 

ರಾಜ್ಯದ ವಿವಿಧೆಡೆ ಮಳೆ ಮುಂದುವರಿದಿದೆ. ಮಂಗಳವಾರ ಕರ್ನಾಟಕದ 13 ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ದಕ್ಷಿಣ ಕರ್ನಾಟಕದ 

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಶಿವಮೊಗ್ಗದಲ್ಲಿ ಅಲ್ಲಲ್ಲಿ ಹಗುರ ಮಳೆಯಾಗಲಿದೆ.

ಎಲ್ಲೆಲ್ಲಿ ಚದುರಿದಂತೆ ಮಳೆ

ಇನ್ನು ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ

ಚಾಮರಾಜ ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು

ನಿಮ್ಮೂರಲ್ಲಿ ಮಳೆ ಯಾವಾಗ ಬರುತ್ತೆ? ಫೋನ್‌ನಲ್ಲಿ ತಿಳಿಯಲು ಹೀಗೆ ಮಾಡಿ

ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಚಳಿ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಡುಗು ಮುನ್ನೆಚ್ಚರಿಕೆ ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗಲಿದೆ.

ಹಲವು ಕಡೆ ಚಳಿ ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗಲಿದೆ

ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಎಲ್ಲೆಲ್ಲಿ ಮಳೆಯಾಗಿದೆ ?

ಸೋಮವಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.

ಉಳಿದಂತೆ ಉತ್ತರ ಕರ್ನಾಟಕದಲ್ಲಿ ಚಳಿ ವಾತಾವರಣ ಮುಂದುವರಿದಿದೆ.

ಇನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ 4 ಸೆಂ.ಮೀ ಮಳೆಯಾಗಿದೆ. ಮಣಿ, ಪಣಂಬೂರಿನಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.

ತಾಳಗುಪ್ಪದಲ್ಲಿ 2 ಸೆಂ.ಮೀ ಅಂಕೋಲ, ಕೊಪ್ಪದಲ್ಲಿ ತಲಾ 1 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.

ಇನ್ನು ರಾಜ್ಯದ ಸಮತಟ್ಟದ ಪ್ರದೇಶಗಳಲ್ಲಿ ಅತೀ ಕಡಿಮೆ ಅಂದರೆ 14.5 ಡಿಗ್ರಿ ಸೆಲ್ಸಿಯಸ್‌ ವಿಜಯಪುರದಲ್ಲಿ ದಾಖಲಾಗಿದೆ.

ಗುಡುಗು ಮುನ್ನೆಚ್ಚರಿಕೆ : ಕರಾವಳಿ ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ

ಎಂದು ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ಚಳಿ ಪ್ರಮಾಣ ಹೆಚ್ಚಳ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಗಣನೀಯ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಚಳಿ ಪ್ರಮಾಣವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗಿರಲಿದೆ.

ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ ?

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಭಾರೀ ಮಳೆಯಾಗಲಿದೆ.

ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿವೆ.

ಇನ್ನು ಗರಿಷ್ಠ ಉಷ್ಣಾಂಶವು 27 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶವು 18 ಡಿಗ್ರಿ ಸೆಲ್ಸಿಯಸ್‌ ಇರಲಿದೆ

ಎಂದು ಹವಾಮಾನ ಇಲಾಖೆ ರಿಪೋರ್ಟ್‌ ತಿಳಿಸಿದೆ. 

ದೇಶದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ, ಚಳಿ

ದೇಶದ ವಿವಿಧ ರಾಜ್ಯಗಳಲ್ಲಿ ಹವಾಮಾನ ವೈಪರೀತ್ಯದ ವರದಿ ಬರುತ್ತಿದೆ. ದಕ್ಷಿಣದ ರಾಜ್ಯಗಳಲ್ಲಿ ಭಾರೀ

ಮಳೆಯಾಗುತ್ತಿದ್ದರೆ, ಉತ್ತರ ಭಾರತದ ರಾಜ್ಯಗಳಲ್ಲಿ ಚಳಿ ವಿಪರೀತವಾಗಿದೆ.  

ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳದಲ್ಲಿ ದಟ್ಟ ಮಂಜು ಉಂಟಾಗುವ ಸಾಧ್ಯತೆ ಇದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ

ಮುಂದಿನ ಎರಡು ದಿನಗಳ ಕಾಲ ದಟ್ಟ ಮಂಜು ಮುಂದುವರೆಯಲಿದೆ ಎಂದಿದೆ ಹವಾಮಾನ ಇಲಾಖೆ ವರದಿ. 

ವಾಯುಭಾರ ಕುಸಿತ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮುಂದಿನ 3ರಿಂದ 4 ದಿನಗಳಲ್ಲಿ

ಕೇರಳ, ತಮಿಳುನಾಡು, ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತಮಿಳುನಾಡಿನಲ್ಲೂ ಧಾರಾಕಾರ ಮಳೆಯಾಗುತ್ತಿದೆ. ಅಲ್ಲದೇ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಇನ್ನೊಂದೆಡೆ ಜಾರ್ಖಂಡ್‌ನಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಅದೇ ರೀತಿ, ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ದೆಹಲಿ ಸೇರಿದಂತೆ ಇತರ ಕೆಲವು ರಾಜ್ಯಗಳಲ್ಲಿ ತೀವ್ರ ಚಳಿಗಾಲದ ಎಚ್ಚರಿಕೆ ನೀಡಲಾಗಿದೆ.

ರಾಜಸ್ಥಾನದಲ್ಲಿ ದೇಶದಲ್ಲೇ ಅತ್ಯಂತ ಕಡಿಮೆ ತಾಪಮಾನ ದಾಖಲಾಗಿದೆ.

ದೇಶದ ಪೂರ್ವ ಮತ್ತು ಮಧ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಚಳಿ ಹೆಚ್ಚಿದೆ.

ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

ಮುಂದಿನ ಐದು ದಿನಗಳ ಕಾಲ ಮೂರು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ

ರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಕೆಲವೆಡೆ ಭಾರೀ ಮಳೆಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ, ಇಲ್ಲಿ ಅಲರ್ಟ್ ಕೂಡ ನೀಡಲಾಗಿದೆ.

ಕೆಲವು ರಾಜ್ಯಗಳಲ್ಲಿ ಶಾಲೆಗಳಿಗೆ ರಜೆ

ಕೆಲವು ರಾಜ್ಯಗಳಲ್ಲಿ ಚಳಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ರಜೆಯ ಅವಧಿಯನ್ನು ಜನವರಿ 13 ರವರೆಗೆ ವಿಸ್ತರಿಸಲಾಗಿದೆ.

ಮಳೆ (ಚಿತ್ರಕೃಪೆ: ಪಿಕ್ಸೆಲ್‌)

ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳದಂತೆಯೇ ದಟ್ಟವಾದ ಮಂಜು ಕವಿದಿದೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ

ಮುಂದಿನ ಎರಡು ದಿನಗಳ ಕಾಲ ದಟ್ಟ ಮಂಜು ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ರಿಪೋರ್ಟ್‌ ತಿಳಿಸಿದೆ.