News

Heavy Rain ರಾಜ್ಯದ ಕರಾವಳಿ, ಉತ್ತರ ಕನ್ನಡದಲ್ಲಿ ಭಾರೀ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ!

28 June, 2023 10:42 AM IST By: Hitesh
Heavy rains in state coast, Uttara Kannada; Yellow alert announcement!

ರಾಜ್ಯದಲ್ಲಿ ಮುಂಗಾರು ಚುರುಕು ಪಡೆದುಕೊಂಡಿರುವ ಬೆನ್ನಲ್ಲೇ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಭಾಗದಲ್ಲಿ

ಜೂನ್‌ 28ರಿಂದ ಜುಲೈ 1ರ ವರೆಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

ಕರಾವಳಿಯ ಭಾಗವನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು.

ಕರಾವಳಿಯ ಬಹುತೇಕ ಕಡೆಗಳಲ್ಲಿ; ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ

ಮಳೆಯಾಗಿರುವುದು ವರದಿ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಸೆಂ.ಮೀನಲ್ಲಿ ಮಳೆ: ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಬೀದರ್‌ನ ಬಸವಕಲ್ಯಾಣದಲ್ಲಿ 5 ಸೆಂ.ಮೀ,

ಮಂಗಳೂರು, ಕೋಟ, ಕುಂದಾಪುರ, ಅಂಕೋಲಾ, ಕ್ಯಾಸಲ್‌ ರಾಕ್‌, ಕೊಟ್ಟಿಗೆಹಾರದಲ್ಲಿ ತಲಾ 3 ಸೆಂ. ಮೀ ಮಳೆಯಾಗಿರುವುದು ವರದಿ ಆಗಿದೆ.

ಇನ್ನು ಉಳಿದಂತೆ ಉಡುಪಿ, ಕಾರ್ಕಳ, ಕಾರವಾರ, ಗುಂಜಿಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಪುತ್ತೂರು,

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಕಡೆ) ಸಿದ್ದಾಪುರ ಹೊನ್ನಾವರ, ಗೋಕರ್ಣ, ಬೇಲಿಕೇರಿ ಕಲಘಟಗಿ,

ಹಲಬರ್ಗಾ ಹಾಗೂ ನಿಟ್ಟೂರು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಿರುವುದು ವರದಿ ಆಗಿದೆ.

ಮುಂದಿನ 24 ಗಂಟೆ: ಕರಾವಳಿಯ ಬಹುತೇಕ ಭಾಗದಲ್ಲಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ  ಹಾಗೂ ಉತ್ತರ ಒಳನಾಡಿನ

ಒಂದೆರಡು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 48 ಗಂಟೆ: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ

ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ. 

ಭಾರೀ ಮಳೆ ಮುನ್ನೆಚ್ಚರಿಕೆ

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚುಗುಡುಗು ಸಾಧ್ಯತೆ ಇದೆ.

ಮೀನುಗಾರರಿಗೆ ಎಚ್ಚರಿಕೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯ ಗಂಟೆಗೆ 40ರಿಂದ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ

ಬೀಸುವ ವಾತಾವರಣವಿರುತ್ತದೆ. ಹೀಗಾಗಿ, ಈ ಸಂದರ್ಭದಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ

ಬೆಂಗಳೂರು ನಗರ ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,

ಕೆಲವು ಪ್ರದೇಶಗಳಲ್ಲಿ ಮಿಂಚುಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಇನ್ನು ಗರಿಷ್ಠ ಉಷ್ಣಾಂಶವು 29 ಡಿಗ್ರಿ ಸೆಲ್ಸಿಯಸ್‌

ಹಾಗೂ ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ. 

Image Courtesy: Pexels