1. ಸುದ್ದಿಗಳು

ಜುಲೈ 25 ರಿಂದ ಭಾರೀ ಮಳೆ ಸಾಧ್ಯತೆ: ಚಿಕ್ಕಮಗಳೂರ, ಹಾಸನ ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

Rainy-Climate

ರಾಜ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮುಂಗಾರು ದುರ್ಬಲವಾಗಿತ್ತು. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಉತ್ತಮವಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಯಲ್ಲಿ ಚೇತರಿಕೆ ಕಂಡಿದೆ. ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಜುಲೈ 25 ರಿಂದ 28ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದರಿಂದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು (ಗ್ರಾಂ), ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರ, ರಾಮನಗರ ಹಾಗೂ ತುಮಕೂರ ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ.ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ಯಾದಗಿರಿ ಕೊಪ್ಪಳ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊದಿಗೆ ಬಿಸಿಲು ಇದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ

ಉತ್ತಮ ಮಳೆ:

ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ಉತ್ತಮ ಮಳೆಯಾಗಿದೆ. ಭೀಮಾ ತೀರದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ನದಿಗೆ  ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

Published On: 25 June 2020, 09:13 AM English Summary: Heavy rains likely from July 25: Orange alert in Chikmagalur, Hassan Kodagu and Shimoga districts

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.