1. ಸುದ್ದಿಗಳು

ನಾಳೆ ಮತ ಏಣಿಕೆ : 34 ಮತಕೇಂದ್ರಗಳಿಗೆ ಭಾರೀ ಭದ್ರತೆ

Maltesh
Maltesh
Heavy security for 34 polling stations

ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ಗೆ ಒಂದು ದಿನದ ಭೇಟಿ ನೀಡಲಿದ್ದಾರೆ. ಭೇಟಿಯ ವೇಳೆ ಪ್ರಧಾನಿ ಗುಜರಾತ್‌ನ ಗಾಂಧಿನಗರದಲ್ಲಿ 4400 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಇಂದು ಬೆಳಗ್ಗೆ ಗಾಂಧಿನಗರದಲ್ಲಿ ನಡೆಯಲಿರುವ ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಒಕ್ಕೂಟದ 29 ನೇ ದ್ವೈವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿರುವ ಪ್ರಧಾನಿ, ನಂತರ, ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 2450 ಕೋಟಿ ರೂಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಕಳೆದ ೧೦ ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ಜರುಗಲಿದೆ. ಇದಕ್ಕಾಗಿ ಚುನಾವಣಾ ಆಯೋಗ ಈಗಾಗಲೇ ಸಕಲ ಸಿದ್ಧತೆ ಕೈಗೊಂಡಿದೆ.  ಈ ಬಾರಿಯ ಚುನಾವಣೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಶೇಕಡ ೭೨.೮೧ ರಷ್ಟು ಮತದಾನವಾಗಿದೆ ಎಂದು ಆಯೋಗ ತಿಳಿಸಿದೆ. ೨೦೧೮ರ ಚುನಾವಣೆಯಲ್ಲಿ ಶೇಕಡ ೫೬.೯೨ರಷ್ಟು ಮತದಾನವಾಗಿತ್ತು. ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳ ಎಲ್ಲ  ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದ್ದು, ಸ್ಟ್ರಾಂಗ್ ರೂಂಗಳಲ್ಲಿ ೩ ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳು ಸ್ಟ್ರಾಂಗ್ ರೂಂ ಕೇಂದ್ರಗಳಿಗೆ ಭೇಟಿ ನೀಡಿ ಸುರಕ್ಷತೆಯನ್ನು ಪರಿಶೀಲಿಸಿದರು. ನಾಳೆ ೩೪ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ನಾಳೆಯೇ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.

ಇದೇ ತಿಂಗಳ ೨೮ ರಂದು ಬೆಳಗ್ಗೆ ೧೧ ಗಂಟೆಗೆ ಆಕಾಶವಾಣಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶ ಮತ್ತು ವಿದೇಶದ ಜನರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲಿದ್ದಾರೆ.

ಇದು ಮನ್‌ ಕಿ ಬಾತ್‌ ಕಾರ್ಯಕ್ರಮದ ೧೦೧ ಸಂಚಿಕೆಯಾಗಿದೆ. ಮನ್ ಕಿ ಬಾತ್ ನ ಮುಂಬರುವ ಸಂಚಿಕೆಯಲ್ಲಿ ತಾವು ಮಾತನಾಡಬೇಕಾದ ವಿಷಯಗಳ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಪ್ರಧಾನಿ ಜನರಿಂದ ಅಭಿಪ್ರಾಯಗಳನ್ನು ಆಹ್ವಾನಿಸಿದ್ದಾರೆ. ಜನರು ತಮ್ಮ ಅಭಿಪ್ರಾಯಗಳನ್ನು ನಮೋ ಅಪ್ಲಿಕೇಶನ್ ಅಥವಾ ಮೈಗೌ ಓಪನ್ ವೇದಿಕೆಯಲ್ಲಿ ಹಂಚಿಕೊಳ್ಳಬಹುದು. ಆಸಕ್ತರು ಟೋಲ್ ಫ್ರೀ ಸಂಖ್ಯೆ ೧೮೦೦-೧೧-೭೮೦೦ ಗೆ ಡಯಲ್ ಮಾಡಬಹುದು ಮತ್ತು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಧಾನಿಗೆ ತಮ್ಮ ಸಂದೇಶವನ್ನು ದಾಖಲಿಸಬಹುದು.

ಮುಂದಿನ 24 ಘಂಟೆಗಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

Published On: 12 May 2023, 03:35 PM English Summary: Heavy security for 34 polling stations

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.