ಈಗಾಗಲೇ ರಾಜ್ಯದಲ್ಲಿ ಕಳೆದ ಒಂದುವಾರದಿಂದ ಮಳೆ ಆಗುತ್ತಿದ್ದು, ಮೋಚಾ ಚಂಡಮಾರುತದ ಪ್ರಭಾವದಿಂದ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಇನ್ನು ಕಳೆದ 24 ಗಂಟೆಗಳಲ್ಲಿ ರಾಜ್ಯದ ಅತೀ ಗರಿಷ್ಠ ಉಷ್ಣಾಂಶ 36.4 ಡಿಗ್ರಿ ಸೆಲ್ಸಿಯಸ್ ಕಾರವಾರದಲ್ಲಿ ದಾಖಲಾಗಿದೆ.
ಮೇ 6ರ ವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ
ಮೇ 6ರ ವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ಯಾದಗಿರಿ, ಬೀದರ್, ವಿಜಯಪುರ
ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು
ಇನ್ನು ರಾಜ್ಯದಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಿಂಚು ಗುಡುಗು ಸಹಿತ ಮಳೆ ಆಗಲಿದೆ.
ಅಲ್ಲದೇ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್, ವಿಜಯಪುರ,
ಬಾಗಲಕೋಟೆ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಗುಡುಗು ಮುನ್ನೆಚ್ಚರಿಕೆ
ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚು- ಗುಡುಗು ಸಾಧ್ಯತೆ ಇದೆ.
ಭಾರೀ ಮಳೆ: ಭಾರೀ ಮಳೆ ಸಾಧ್ಯತೆ ಇಲ್ಲ.
ಮೀನುಗಾರರಿಗೆ ಎಚ್ಚರಿಕೆ: ಭಾರೀ ಮಳೆಯಾಗುವ ಸಾಧ್ಯತೆ ಶುಕ್ರವಾರ ಹಾಗೂ ಶನಿವಾರ ಇಲ್ಲದೆ ಇರುವುದರಿಂದ ಮೀನುಗಾರರಿಗೆ ಯಾವುದೇ ಮುನ್ಸೂಚನೆ ನೀಡಿಲ್ಲ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆ
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆ ಆಗುವ ಬಹಳಷ್ಟು ಸಾಧ್ಯತೆ ಇದೆ.
ಅಲ್ಲದೇ ಗರಿಷ್ಠ ಉಷ್ಣಾಂಶವು 30 ಮತ್ತು ಕನಿಷ್ಠ ಉಷ್ಣಾಂಶವು 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮಳೆ ಪ್ರಮಾಣ ಸೆಂ.ಮೀನಲ್ಲಿ: ಬೆಂಗಳೂರಿನ ಕೆಎಸ್‌ಎನ್‌ಡಿಎಂಸಿಯಲ್ಲಿ 5 ಸೆಂ.ಮೀ ಮಳೆ ಆಗಿದೆ. ಮಾಲೂರು, ಜಿಕೆವಿಕೆಯಲ್ಲಿ ತಲಾ 4 ಸೆಂ.ಮೀ,
ಸೈದಾಪುರ, ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ತಲಾ 3 ಸೆಂ.ಮೀ ಮಳೆ ಆಗಿದೆ. ಮುಧೋಳ, ಹಲಸೂರು, ಬೆಂಗಳೂರು ನಗರ, ಗೋಪಲನಗರ ಎಆರ್‌ಜಿಯಲ್ಲಿ ತಲಾ ಒಂದು ಸೆಂ.ಮೀ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ಮೇ 8ರಂದು ಮೋಚಾ ಚಂಡಮಾರುತ ಅಪ್ಪಳಿಸಲಿದ್ದು, ಕರ್ನಾಟಕ ಸೇರಿದಂತೆ (South India) ದಕ್ಷಿಣ ಭಾರತದ ರಾಜ್ಯಗಳಲ್ಲಿ
ಭಾರೀ ಮಳೆ (HeavyRain) ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.