1. ಸುದ್ದಿಗಳು

ಸಿಹಿ ಸುದ್ದಿ: ಈ ದಾಖಲೆಗಳನ್ನ ಸಲ್ಲಿಸಿದ್ರೆ ಸಾಕು 72 ಗಂಟೆಯಲ್ಲಿ ಮನೆ ಬಾಗಿಲಿಗೆ ಬರುತ್ತೆ ಪೆನ್ಷನ್‌..!

Maltesh
Maltesh
ಸಾಂದರ್ಭಿಕ ಚಿತ್ರ

ಸಾಮಾಜಿಕ ಭದ್ರತಾ ಯೋಜನೆಯಡಿ ಕೇವಲ 72 ಗಂಟೆಗಳಲ್ಲಿ ಮನೆಬಾಗಿಲಿಗೆ ಪಿಂಚಣಿ ತಲುಪಿಸುವ ವ್ಯವಸ್ಯೆಗೆ ಸರ್ಕಾರ ಇತ್ತೀಚಿಗೆ ಚಾಲನೆ ನೀಡಿದೆ. ದೇಶದಲ್ಲಿಯೇ ಮೊದಲ ಬಾರಿ ಎಂಬಂತೆ  ದೂರವಾಣಿ ಮೂಲಕವೇ ಪಿಂಚಣಿಯ ಸ್ವೀಕಾರಕ್ಕಾಗಿ ಕೋರಿಕೆ ಸಲ್ಲಿಸಿದ ನಂತರ 72 ಗಂಟೆಯಲ್ಲಿ ನವೋದಯ ಮೊಬೈಲ್‌ ಆ್ಯಪ್‌ ಆಧರಿಸಿ ಪಿಂಚಣಿ ಮಂಜೂರಾತಿ ಮಾಡುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹಲೋ ಕಂದಾಯ ಸಚಿವರ ಸಹಾಯವಾಣಿ 155245 ಸಂಖ್ಯೆಗೆ ಕರೆ ಮಾಡುವ ಮೂಲಕ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದಾಗಿದೆ. ದೂರವಾಣಿ ಮೂಲಕವೇ ಪಂಚಣಿ ಕೋರಿಕೆ ಸ್ವೀಕರಿಸಿ 72 ಗಂಟೆಯಲ್ಲಿ ಮಂಜೂರಾತಿ ಮಾಡುವ ವಿನೂತನ ಕಾರ್ಯಕ್ರಮ ಇದಾಗಿದೆ.ಸಾಮಾಜಿಕ ಭದ್ರತಾ ಯೋಜನೆಯಡಿ ಕಾನೂನುಬಾಹಿರವಾಗಿ ಪಿಂಚಣಿ ಪಡೆಯುತ್ತಿದ್ದ 3.58 ಲಕ್ಷ ಅನರ್ಹ ಪಿಂಚಣಿದಾರರನ್ನು ಪತ್ತೆ ಹಚ್ಚಲಾಗಿದೆ.

ಕುಟುಂಬದ ವಾರ್ಷಿಕ ಆದಾಯ 32 ಸಾವಿರರೂ.ಗಿಂತ ಕಡಿಮೆ ಇರುವ ವ್ಯದ್ಯರು, ವಿಶೇಷಚೇತನರು, ವಿಧವೆಯರು, ಅವಿವಾಹಿತ ವಿಚ್ಛೇದಿತ ಮಹಿಳೆಯರಿಗೆ ಮಾಸಿಕ ಪಿಂಚಣಿ ಸೌಲಭ್ಯಕ್ಕೆ ದೂರವಾಣಿ ಮೂಲಕ ಕೋರಿಕೆ ಸಲ್ಲಿಸಬಹುದಾಗಿದೆ.

Non-veg ಪ್ರಿಯರಿಗೆ Shock! ದರ ಹೆಚ್ಚಿಸಿದ ಕುಕ್ಕುಟೋದ್ಯಮ

ಭಾರತದ ಹೊಸ ಮೈಲಿಗಲ್ಲು! 400 Billion Dollar ಸಾಧನೆ

ಯಾವ ದಾಖಲೆಗಳು ಬೇಕು..?

ಕಡ್ಡಾಯವಾಗಿ ಆಧಾರ್ ಕಾರ್ಡ್, ಬ್ಯಾಂಕ್/ಅಂಚೆ ಖಾತೆ ವಿವರದ ಪ್ರತಿ, ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿ(ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ ಅಥವಾ ಸರ್ಕಾರ ವಿತರಿಸಿದ ಗುರುತಿನ ಚೀಟಿ

ಪಿಂಚಣಿ ಯೋಜನೆಗಳಲ್ಲಿ ಅರ್ಹತೆ ಇಲ್ಲದಿರುವವರು ಪಡೆಯುತ್ತಿರುವುದು ಗಮನಕ್ಕೆ ಬಂದ ಬಳಿಕ ಪತ್ತೆ ಮಾಡಿ ಸೌಲಭ್ಯಗಳನ್ನು ರದ್ದುಪಡಿಸಲಾಗಿದೆ. ಶ್ರೀಮಂತರು, ಉದ್ಯೋಗಿಗಳು ಅಕ್ರಮವಾಗಿ ಪಿಂಚಣಿ ಪಡೆಯುತ್ತಿರುವುದು ಗೊತ್ತಾಗಿದೆ. ಮೃತಪಟ್ಟವರ ಹೆಸರಲ್ಲಿ ಹಲವು ವರ್ಷಗಳಿಂದ ಪಿಂಚಣಿ ಪಾವತಿಯಾಗುತ್ತಿರುವುದು ಬೆಳಕಿಗೆ ಬಂದಿದೆ. ಅನರ್ಹರನ್ನು ರದ್ದು ಮಾಡಿದ್ದರಿಂದ ಸರ್ಕಾರ ಬೊಕ್ಕಸಕ್ಕೆ 430 ಕೋಟಿ ರು. ಉಳಿತಾಯವಾಗಲಿದೆ ಎಂದು ಹೇಳಿದರು.

ನಾಗರಿಕರು ಶುಲ್ಕರಹಿತ ಸಹಾಯವಾಣಿ ಸಂಖ್ಯೆ 155245 ಕ್ಕೆ ಉಚಿತವಾಗಿ ದೂರವಾಣಿ ಕರೆ ಮಾಡುವ ಮೂಲಕ ಕಡ್ಯಾಯವಾಗಿ ತಮ್ಮ ಆಧಾರ್ ಸಂಖ್ಯೆಯನ್ನು ತಿಳಿಸಬೇಕು. ಗ್ರಾಮಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆಬಾಗಿಲಿಗೆ ಹೋಗಿ ನವೋದಯ ಮೊಬೈಲ್ ಆಪ್ ಮೂಲಕ ಅರ್ಜಿದಾರರಿಂದ ಮಾಹಿತಿ ಹಾಗೂ ದಾಖಲಾತಿಗಳನ್ನು ಸಂಗ್ರಹಿಸಲಿದ್ಯಾರ.

ಮಹಿಳೆಯರಿಗೆ Good News! ಖರ್ಚಿಲ್ಲದೆ ಪಡೆಯಿರಿ Tailoring ಮಷಿನ್

PM Kisan Yojana! 11 ನೇ ಕಂತು ಶೀಘ್ರದಲ್ಲಿಯೇ Release!

ಅರ್ಹರಿಗೆ 72 ಗಂಟೆಗಳ ಒಳಗೆ ನಾಡಕಚೇರಿ ಉಪ ತಹಶೀಲ್ಯಾರರಿಂದ ಪಿಂಚಣಿಗೆ ಅನುಮೋದನೆ ನೀಡಲಾಗುತ್ತದೆ. ಫಲಾನುಭವಿಗಳ ಮನಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶ ವಿತರಣೆ ಮಾಡಲಾಗುವುದು.

ಲಕ್ಷ ಬೋಗಸ್ ಪತ್ತೆ

ಪಿಂಚಣಿ ವ್ಯವಸ್ಥೆಯಡಿ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕಲರು, ವಿಧವೆಯರು, ಅವಿವಾಹಿತ ಅಥವಾ ವಿಚ್ಛೇಧಿತ ಮಹಿಳೆಯರು, ತೃತೀಯ ಲಿಂಗದವರು, ಆಸಿಡ್ ದಾಳಿಗೆ ಒಳಗಾದ ಮಹಿಳೆಯರು ಮತ್ತು ಎಂಡೋಸಲ್ಫಾನ್ ಸಂತ್ರಸ್ತರಿಗೆ ಸಾಮಾಜಿಕ ಭದ್ರತೆ ಒದಗಿಸಲು ಪ್ರತಿ ತಿಂಗಳು ಪಿಂಚಣಿ ನೀಡಲಾಗುತ್ತಿದೆ. ಇದಕ್ಕಾಗಿ ಸರ್ಕಾರ ಈ ವರ್ಷ ೯೪೮೩.೫೧ ಕೋಟಿ ರೂ. ಅನುದಾನ ಮೀಸಲಿರಿಸಿದೆ ಎಂದು ಅವರು ಹೇಳಿದರು.

ವೀಕೆಂಡ್‌ನಲ್ಲಿ ಚಿನ್ನ ಖರೀದಿಗೆ ಹೋಗ್ತಿದ್ದೀರಾ..?ಹಾಗಾದ್ರೆ ಈ ಸುದ್ದಿಯನ್ನ ಒಮ್ಮೆ ನೋಡ್ಬಿಡಿ

Zero Budget Natural Farming! #ರಾಸಾಯನಿಕ ಮುಕ್ತ ಕೃಷಿ! ಕೇಂದ್ರ ಸರ್ಕಾರದಿಂದ ದೊಡ್ಡ ಸಹಾಯ?

ರಾಜ್ಯದಲ್ಲಿ ಈ ವರ್ಷ ೩.೫ ಲಕ್ಷ ಬೋಗಸ್ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಇದರಿಂದ ವಾರ್ಷಿಕ ೪೩೦ ಕೋಟಿ ರೂ.ಗಳು ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗಿದೆ ಎಂದರು.ನವೋದಯ ಮೊಬೈಲ್ ಆಪ್ ಮೂಲಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಸಮಗ್ರ ವಾರ್ಷಿಕ ಪರಿಶೀಲನಾ ಕಾರ್ಯವನ್ನು ನಡೆಸಲಾಗುತ್ತಿದ್ದು, ಮರಣ ಹೊಂದಿರುವವರಿಗೆ ಪಿಂಚಣಿ ರದ್ದು ಸೇರಿದಂತೆ ಇಲ್ಲಿಯವರೆಗೂ ೩.೫೮ ಲಕ್ಷ ಅನರ್ಹರನ್ನು ಗುರುತಿಸಿ ಪಿಂಚಣಿಯನ್ನು ರದ್ದು ಮಾಡಲಾಗಿದೆ ಎಂದುಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

Published On: 25 May 2022, 10:47 AM English Summary: Hello Kanday Sachivare toll free number for pension

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.