News

ಯುವಜನತೆಗೆ ಸಿಹಿಸುದ್ದಿ: ಉನ್ನತ ವ್ಯಾಸಂಗ ಮಾಡಬಯಸುವ ಯುವಕರಿಗೆ ಇಲ್ಲಿದೆ ಸರ್ಕಾರದಿಂದ 15 ಲಕ್ಷ ಸಾಲ!

24 September, 2022 12:29 PM IST By: Kalmesh T
Here is a 15 lakh loan from the government for the youth

2022-23ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ(ನವೀಕರಣ) ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆಗಳಲ್ಲಿ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ.

ಗುಡ್‌ನ್ಯೂಸ್‌: ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನ, ₹ 3.50ಲಕ್ಷ ಸಹಾಯಧನ!

2022-23ರ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಿ.ಇ.ಟಿ. ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಬಯಸುವ ದಿನಾಂಕ: 06-09-2022 ರಿಂದ20-10-2022ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್‌ನಲ್ಲಿ ಸಲ್ಲಿಸಬಹುದಾಗಿರುತ್ತದೆ.

ಅರಿವು ಶೈಕ್ಷಣಿಕ ಸಾಲ ಯೋಜನೆ(ನವೀಕರಣ) ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಆರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ,

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ವಿದ್ಯಾರ್ಥಿಗಳು ಈಗಾಗಲೇ ಸದರಿ ನಿಗಮಗಳಲ್ಲಿ ಅರಿವು ಶೈಕ್ಷಣಿಕ ಸಾಲ `ಯೋಜನೆಯಲ್ಲಿ ಸಾಲ ಪಡೆದಿರುವ ವಿದ್ಯಾರ್ಥಿಗಳು ಉಳಿದ 03 ಮತ್ತು 14 ಕಂತುಗಳ ಸಾಲ ಬಿಡುಗಡೆಗಾಗಿ ದಿನಾಂಕ:06-09-2022 ರಿಂದ ದಿನಾಂಕ:20-10-2022ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಸರ್ಕಾರದಿಂದ ಗುಡ್‌ನ್ಯೂಸ್‌: ಇನ್ಮುಂದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆಯಲು RTOಗೆ ಹೋಗಬೇಕಿಲ್ಲ!

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಬಡ್ಡಿರಹಿತ ಸಾಲ ಯೋಜನೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ (1)ಇಂಜಿನಿಯರಿಂಗ್ & ಟೆಕ್ನಾಲಜಿ, (2)ಮ್ಯಾನೇಜ್ಮೆಂಟ್ & ಕಾಮರ್ಸ್, (3)ಸೈನ್ಸ್ & ಟೆಕ್ನಾಲಜಿ, (4)ಅಗ್ರಿಕಲ್ಟರ್ & ಅಲೈಡ್ ಸೈನ್ಸ್/ಟೆಕ್ನಾಲಜಿ, (5)ಮೆಡಿಸಿನ್ ಮತ್ತು (6)ಹ್ಯುಮ್ಯಾನಿಟೀಸ್ & ಸೊಶಿಯಲ್ ಸೈನ್ಸಸ್(ಈ 06 ಕೋರ್ಸ್ಗಳ, ಕ್ಷೇತ್ರಗಳಿಗೆ(Category) ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸಲಾಗುತ್ತದೆ).

ಈ ಕೋರ್ಸ್‌ಗಳಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಾರ್ಷಿಕ ಗರಿಷ್ಠ ರೂ.5 ಲಕ್ಷಗಳಂತೆ ಮೂರು ವರ್ಷಗಳ ಅವಧಿಗೆ ಗರಿಷ್ಠ ರೂ.15.00ಲಕ್ಷಗಳ ಸಾಲವನ್ನು ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಬಯಸುವ ವಿದ್ಯಾರ್ಥಿಗಳು ದಿನಾಂಕ:06-09-2022 ರಿಂದ20-10-2022ರವರೆಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್ನಲ್ಲಿ ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸುವ ಮೊದಲು ಗಮನಿಸಬೇಕಾದ ಅಂಶಗಳು

ವಿದ್ಯಾರ್ಥಿಗಳು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆಯೇ ವಿದ್ಯಾರ್ಥಿಗಳ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್‌ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.

ICAR ನ KRITAGYA ಕಾರ್ಯಾಗಾರ; ₹5 ಲಕ್ಷ ಗೆಲ್ಲುವ ಭರ್ಜರಿ ಅವಕಾಶ! ಯಾರು ಅರ್ಹರು? ಅರ್ಜಿ ಸಲ್ಲಿಕೆ ಹೇಗೆ ತಿಳಿಯಿರಿ..

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಮೇಲ್ಕಂಡ ಯೋಜನೆಗಳಲ್ಲಿ ವಿದ್ಯಾರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ  https://www.dbcdc.karnataka.gov.in  ವೆಬ್ಸೈಟ್ ನಲ್ಲಿ ಸಂಪರ್ಕಿಸಿ ಅಥವಾ ಸಂಬಂಧಪಟ್ಟ ನಿಗಮದ ವೆಬ್ಸೈಟ್ನ್ನು ಅಥವಾ ನಿಗಮದ ದೂರವಾಣಿ/ಸಹಾಯವಾಣಿ ಸಂಖ್ಯೆ 080-22374832 ಮತ್ತು 9606066389 ಅಥವಾ 8824300400 ಸಂಪರ್ಕಿಸುವುದು.