News

ರಾಜ್ಯದಲ್ಲಿ ಮಳೆಯ ಮುನ್ಸೂಚನೆ ಹೇಗಿದೆ? ನಾಳೆ ಮಳೆ ?

03 August, 2023 12:03 PM IST By: Maltesh
Here is the state rainfall forecast till morning of 04th August 2023.

ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. 

ಬಿರುಗಾಳಿ ಮುನ್ನೆಚ್ಚರಿಕೆ: ಮುಂದಿನ 48 ಘಂಟೆಗಳು ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಘಂಟೆಗೆ 40-50 ಕಿ.ಮೀ. ಇರುವ ಸಾಧ್ಯತೆ ಇದೆ. ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.04 ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಇಂದು ಬೆಳಿಗ್ಗೆ 08:30 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ; ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ