1. ಸುದ್ದಿಗಳು

ಕಾಳಿ ನದಿ ಜಾಕ್‌ವೆಲ್‌ ನಿರ್ಮಾಣಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

Kalmesh T
Kalmesh T
High Court to block construction of Kali River Jacquel

ಉತ್ತರ ಕನ್ನಡ (Uttara Kannada) ಜಿಲ್ಲೆಯ ಕಾಳಿ ನದಿ ಜಲಾಯನ ಪ್ರದೇಶದಲ್ಲಿ ಕೈಗೊಂಡಿರುವ ಜಾಕ್‌ವೆಲ್‌ (ತೂಬು) ನಿರ್ಮಾಣ ಕಾಮಗಾರಿಗೆ ತಡೆ ನೀಡಲು ಹೈಕೋರ್ಟ್‌(High Court) ನಿರಾಕರಿಸಿದೆ. ಕಾಳಿ ಬ್ರಿಗೇಡ್‌ ಸಂಘಟನೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠವು ಕಾಮಗಾರಿಯನ್ನು ತಡೆಹಿಡಿಯಲು ನಿರಾಕರಿಸಿತು.

ನದಿ ಸಮೀಪದ ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ಜಾಕ್‌ವೆಲ್‌ ನಿರ್ಮಾಣ ಯೋಜನೆ ಕೈಗೊಳ್ಳಲಾಗಿದೆ. ಆದ್ದರಿಂದ ಕಾಮಗಾರಿಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಇದನ್ನು ಓದಿರಿ: ಗುಡ್‌ ನ್ಯೂಸ್‌: ಹೈನುಗಾರರಿಗೆ ಕ್ರೆಡಿಟ್‌ ಕಾರ್ಡ್‌! ದೇಶದಲ್ಲೆ ಮೊದಲು

Navy Recruitment : 12ನೇ ತರಗತಿ ಪಾಸ್ ಆದವರಿಗೆ ನೇಮಕಾತಿ..69,000 ವರೆಗೆ ಸಂಬಳ

ಜಾಕ್‌ವೆಲ್‌ ನಿರ್ಮಾಣದಿಂದ ನದಿ ಜಲಾಯನ ಪ್ರದೇಶ ಮತ್ತು ಸ್ಥಳೀಯ ಪರಿಸರ ಹಾಳಾಗುತ್ತದೆ ಎಂಬುದಾಗಿ ಅರ್ಜಿದಾರರು ಆಕ್ಷೇಪಿಸಿದ್ದಾರೆ. ಹಾಗಾಗಿ, ಅರ್ಜಿದಾರರು ತಮ್ಮ ಕುಂದು-ಕೊರತೆ ಬಗ್ಗೆ ರಾಜ್ಯ ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಇಲಾಖೆ(Forest Department) ಪ್ರಧಾನ ಕಾರ್ಯದರ್ಶಿ ಅಥವಾ ಇತರೆ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಮನವಿಪತ್ರ ಸಲ್ಲಿಸಬಹುದು ಎಂದು ನ್ಯಾಯಪೀಠ ಸೂಚಿಸಿದೆ.

ಜಲವಿವಾದಗಳಿಗೆ ಕಾಯ್ದೆ ತಿದ್ದುಪಡಿ ಪರಿಹಾರ ಎಂದ ಸಿಎಂ

ಬೆಂಗಳೂರು: ಅಂತಾರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ. ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕೀಯ ಲಾಭದ ಬಗ್ಗೆ ಯೋಚಿಸುವ ಬದಲು ಹೆಚ್ಚು ಜನರಿಗೆ ನೀರು ಲಭ್ಯವಾಗುವಂತೆ ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟಿದ್ದಾರೆ.

ಎಚ್ಚರಿಕೆ: ಕರ್ನಾಟಕದಲ್ಲಿ ಭಾರೀ ಮಳೆ! ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಮಾ.6 ರಂದು ವಿಧಾನಸೌಧದಲ್ಲಿ ನಡೆದ ‘ಜಲ ಜೀವನ್‌ ಮಿಷನ್‌’ (Jal Jeevan Mission) ಹಾಗೂ ‘ಸ್ವಚ್ಛ ಭಾರತ್‌ ಮಿಷನ್‌’ (Swach Bharath Mission) ಯೋಜನೆಗಳ ಕುರಿತ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನದಿ ಪಾತ್ರಗಳ ನಿರ್ವಹಣೆ ಹಾಗೂ ಜಲವಿವಾದ ಕಾಯ್ದೆ ತಿದ್ದುಪಡಿಯಿಂದ ಮಾತ್ರ ಜಲ ವಿವಾದಗಳನ್ನು ಬಗೆಹರಿಸಲು ಸಾಧ್ಯ. ಜನರಿಗೆ ನೀರು ಒದಗಿಸುವುದು ಸರ್ಕಾರದ ಕರ್ತವ್ಯ. ನೀರಿನ ವಿಚಾರದಲ್ಲಿ ಎಲ್ಲರೂ ಒಮ್ಮತದಿಂದ ಕಾರ್ಯ ನಿರ್ವಹಿಸಬೇಕು. ನೀರು ಸರಬರಾಜಿನ ಮೂಲಕ ಸುಸ್ಥಿರ ಜೀವನೋಪಾಯ ಕಲ್ಪಿಸಲು ಸಾಧ್ಯ ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರ ಗುರಿ. ಪ್ರಧಾನಿಯವರ ಗುರಿ ಈಡೇರಿಸುವ ನಿಟ್ಟಿನಲ್ಲಿ ಒಟ್ಟಾಗಿ ಶ್ರಮಿಸೋಣ ಎಂದು ಕರೆ ನೀಡಿದರು.

ಈ ಸ್ಮಾರ್ಟ್‌ಫೋನ್‌ಗಳಲ್ಲಿ ಇನ್ಮುಂದೆ Whatsapp ಕಾರ್ಯನಿರ್ವ ಹಿಸಲ್ಲ..! ಕಾರಣವೇನು.

ನೀರಿನ ದುರ್ಬಳಕೆ ತಡೆಗೆ ಕ್ರಮ: ನೀರಾವರಿಯಲ್ಲಿ ದಕ್ಷತೆ ತರಲು ಪ್ರಯತ್ನಿಸಬೇಕು. ಸಾಕಷ್ಟುನೀರು ಹರಿಯುವ ಮಾರ್ಗಗಳಲ್ಲಿ ನೀರಿನ ದುರುಪಯೋಗ ಆಗುತ್ತಿದೆ. ರಾಷ್ಟ್ರ ಮಟ್ಟದಲ್ಲಿರುವ ನಮ್ಮ ಕಾಲುವೆಗಳಲ್ಲಿನ ನೀರಿನ ಹರಿವು ಸಾಮರ್ಥ್ಯ ಹಾಗೂ ನೀರು ಹರಿಸುತ್ತಿರುವ ಸಾಮರ್ಥ್ಯದಲ್ಲಿ ಅಜಗಜಾಂತರ ಅಂತರವಿದೆ. ಇವುಗಳನ್ನು ಸರಿಪಡಿಸಿದರೆ ಹೆಚ್ಚಿನ ನೀರು ಲಭ್ಯವಾಗಲಿದೆ ಎಂದು ಸಲಹೆ ನೀಡಿದರು.

ಜಲಜೀವನ್‌ ಮಿಷನ್‌ಗೆ ಕಾಲಮಿತಿ:

ಕರ್ನಾಟಕದಲ್ಲಿ ಜಲ ಜೀವನ್‌ ಮಿಷನ್‌ ಯೋಜನೆಯನ್ನು ಅನುಷ್ಠಾನ ಮಾಡಲು ಅವಿರತವಾಗಿ ಶ್ರಮಿಸಲಾಗುವುದು. ರಾಜ್ಯದಲ್ಲಿ 97.91 ಲಕ್ಷ ಗ್ರಾಮೀಣ ಮನೆಗಳಿವೆ. ಮೊದಲ ಹಂತದಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿ ಅಳವಡಿಸಲು ಯೋಜಿಸಲಾಗಿದ್ದು, 18 ಲಕ್ಷ ಮನೆಗಳಿಗೆ ಅಳವಡಿಕೆಯಾಗಿದೆ. ಕೆಲವೇ ದಿನಗಳಲ್ಲಿ ಮೊದಲ ಹಂತದ ಗುರಿ ತಲುಪುತ್ತೇವೆ. ಬಾಕಿ ಮನೆಗಳಿಗೆ ನೀರೊದಗಿಸಲು ಮುಂದಿನ ಬಜೆಟ್‌ನಲ್ಲಿ ಅನುದಾನ ನೀಡಲಾಗುವುದು. ಈ ಮೂಲಕ ಕಾಲಮಿತಿಯಲ್ಲಿ ಗುರಿ ತಲುಪಲಾಗುವುದು ಎಂದು ಹೇಳಿದರು.

ಮತ್ತಷ್ಟು ಓದಿರಿ: ಇನ್ಮುಂದೆ Aadhaar-Pan Link ಫ್ರೀ ಇಲ್ಲ..ಸ್ವಲ್ಪ ಯಾಮಾರಿದ್ರೆ 1 ಸಾವಿರ Fine..!

Published On: 02 April 2022, 11:57 AM English Summary: High Court to block construction of Kali River Jacquel

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.