1. ಸುದ್ದಿಗಳು

ಶಾಲಾ ಕಾಲೇಜು ಆರಂಭವಾಗಿದ್ದರಿಂದ ಮಕ್ಕಳಿಗೆ ಕೋವಿಡ್ ನಿಂದ ಸ್ವಾತಂತ್ರ್ಯ ಸಿಕ್ಕಂತಾಗಿದೆ- ಬಸವರಾಜ ಬೊಮ್ಮಾಯಿ

CM Basavaraj Bommai

ರಾಜ್ಯದಲ್ಲಿ ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ಶೈಕ್ಷಣಿಕ ಚಟುವಟಿಕೆಗಳು ಸೋಮವಾರದಿಂದ ಆರಂಭವಾಗಿದ್ದು, 9 ಮತ್ತು 10ನೇ ತರಗತಿಗಳು ಹಾಗೂ ಪದವಿ ಪೂರ್ವ ತರಗತಿಗಳು ಆರಂಭವಾಗಿವೆ. ಇದರ ಜೊತೆಗೆ ಕೇಂದ್ರ ಸರ್ಕಾರ ಪ್ರಕಟಿಸಿದ ಹೊಸ ಶಿಕ್ಷಣ ನೀತಿಯೂ ರಾಜ್ಯದಲ್ಲಿ ಜಾರಿಯಾಗಲಿದೆ.

ರಾಜ್ಯದಲ್ಲಿ ಶಾಲೆ-ಕಾಲೇಜು ಮತ್ತೆ ಆರಂಭಗೊಂಡಿದ್ದರಿಂದ ಕೋವಿಡ್ ನಿಂದ ಮಕ್ಕಳಿಗೆ ಸ್ವಾತಂತ್ರ್ಯ ಸಿಕ್ಕಂತೆ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಅವರು ಮಲ್ಲೇಶ್ವರ ಬಡಾವಣೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ 9,10 ಮತ್ತು ಪಿಯುಸಿ ಭೌತಿಕ ತರಗತಿಗಳು ಆರಂಭವಾಗಿದ್ದು, 1-8 ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲಹೆ ಕೇಳಿದ್ದೇವೆ. ಕೊವಿಡ್ ಕಡಿಮೆಯಾದರೆ ಗಡಿ ಜಿಲ್ಲೆಗಳಲ್ಲೂ ಶಾಲೆ ಆರಂಭಿಸಲಾಗುವುದು. 1-8 ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲೆಹ ಕೇಳಿದ್ದೇವೆ. ಅವರ ಸಲಹೆ ಆಧರಿಸಿ ಶಾಲೆ ಆರಂಭಿಸುವ ಬಗ್ಗ ಶೀಘ್ರವೇ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

ನಮಗೆ ಮಕ್ಕಳ ಆರೋಗ್ಯ ಮುಖ್ಯ, ಎಲ್ಲರೂ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಂದು ತರಗತಿಗಳುಉ ಆರಂಭವಾಗಿರುವುದರಿಂದ ಮಕ್ಕಳಿಗೆ ಕೋವಿಡ್ ನಿಂದ ಸ್ವಾತಂತ್ರ್ಯ ಸಿಕ್ಕಷ್ಟು ಸಂತಸವಾಗಿದೆ ಎಂದರು.

2021-22ನೇ ಸಾಲಿನ ಶೈಕ್ಷಣಿಕ ವರ್ಷ ಜೂನ್ 15 ರಿಂದ ಆರಂಭವಾಗಿದ್ದರೂ 2ನೇ ಅಲೆಯ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳು ಆರಂಭವಾಗಿರಲಿಲ್ಲ. ತರಗತಿಗಳು ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ.50 ಮಂದಿಗೆ ಅವಕಾಶ ಕಲ್ಪಿಸಬೇಕು.  ಶಾಲೆ ಆರಂಭಗೊಂಡ ಈ ಸಂದರ್ಭದಲ್ಲಿ ಬಹಳ ಸೂಕ್ಷ್ಮವಾಗಿ ಅವಲೋಕಿಸುತ್ತೇವೆ.ಇದು ಯಶಸ್ವಿಯಾಗಬೇಕು. ಕೋವಿಡ್ ಕಡಿಮೆ ಆಗಬೇಕೆಂದು ಆಶಿಸಿದರು.

ಪ್ರಾಥಮಿಕ ಶಾಲೆಗಳನ್ನು ಯಾವ ರೀತಿ ತೆರೆಯಬೇಕು ಎಂಬ ಬಗ್ಗೆ ವರದಿ ಕೊಡಲು ತಜ್ಞರ ಸಮಿತಿಗೆ ಹೇಳಿದ್ದೇವೆ. ಈ ತಿಂಗಳ ಕೊನೆಯಲ್ಲಿ ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸುತ್ತೇವೆ. ಪ್ರಾಥಮಿಕ ಹಂತದಿಂದ ತರಗತಿಗಳನ್ನು ಆರಂಭಿಸುವು ಬಗ್ಗೆ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ತೀರ್ಮಾನಿಸುತ್ತೇವೆ ಎಂದರು.

ಶಿಕ್ಷಕರು ಲಸಿಕೆ ಪಡೆಯುವುದು ಕಡ್ಡಾಯ: ನಾಗೇಶ್

ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರು ಲಸಿಕೆಯನ್ನು ಕಡ್ಡಾಯವಾಗಿ ಪಡೆಯುವಂತೆ ಸೂಚನೆ ನೀಡಲಾಗಿದೆ ಎಂದು ಶಿಕ್ಣಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಇಲ್ಲಿನ ಸಿದ್ದಾರ್ಥ ಮತ್ತು ವಿದ್ಯಾನಿಕೇತನ ಶಾಲೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರಿಗೆ ಲಸಿಕೆ ಹಾಕಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕಿಸಿಕೊಳ್ಳುವ ತನಕ ಶಿಕ್ಷಕರು ಶಾಲೆಗೆ ಬರುವಂತಿಲ್ಲ ಎಂದರು.

ಕಳೆದ ಒಂದೂವರೆ ವರ್ಷದಿಂದ ಅನ್ ಲೈನ್ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಿಲ್ಲ. ಈಗ 9ರಿಂದ 12 ನೇ ತರಗತಿವರೆಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸಲಾಗುತ್ತಿದೆ. ಆದರೆ ಶಾಲೆ ಹಾಜರಾತಿ ಕಡ್ಡಾಯವಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಕಾರ್ಯಪಡೆ ಮತ್ತು ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಮೇರೆಗೆ ಶಾಲೆಗಳನ್ನು ಆರಂಭಿಸಲಾಗುತ್ತದೆ. ನಿಯಮಗಳನ್ನು ಸರಿಯಾಗಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ತಿಳಿದುಕೊಳ್ಳಲು ಈಗಾಗಲೇ ಹಲವು ಶಾಲೆಗಳಿಗೆ ಭೇಟಿ ನೀಡುತ್ತಿರುವುದಾಗಿ ನಾಗೇಶ್ ತಿಳಿಸಿದರು.

Published On: 23 August 2021, 01:00 PM English Summary: high school restarted in karnataka

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.