ರಾಜ್ಯ ಕರಾವಳಿ ಭಾಗದಲ್ಲಿ ಸಾಧಾರಣ ಮಳೆ ಮುಂದುವರಿದಿದೆ.
ಇನ್ನು ಗುರುವಾರ ನೈರುತ್ಯ ಮುಂಗಾರು ಒಳನಾಡಿನಲ್ಲಿ ದುರ್ಬಲವಾಗಿತ್ತು.
ಕರಾವಳಿಯಲ್ಲಿ ವ್ಯಾಪಕವಾಗಿ; ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವುದು ವರದಿ ಆಗಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ಸಾಧಾರಣ ಮಳೆ ಆಗುತ್ತಿದೆ.
ಕಳೆದ 24 ಗಂಟೆಯ ಅವಧಿಯಲ್ಲಿ ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ), ಉಡುಪಿ 3 ಮಂಗಳೂರು
(ದಕ್ಷಿಣ ಕನ್ನಡ ಜಿಲ್ಲೆ), ಕಾರ್ಕಳ, ಕೊಲ್ಲೂರು (ಎರಡೂ ಉಡುಪಿ ಜಿಲ್ಲೆ),
ಗೋಕರ್ಣ (ಉತ್ತರ ಕನ್ನಡ ಜಿಲ್ಲೆ), ಕೊಪ್ಪ (ಚಿಕ್ಕಮಗಳೂರು ಜಿಲ್ಲೆ), ಸಕಲೇಶಪುರ (ಹಾಸನ ಜಿಲ್ಲೆ), ಬೆಳ್ಳೂರು (ಮಂಡ್ಯ ಜಿಲ್ಲೆ), ಬೆಂಗಳೂರು ನಗರ
ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್ (ಬೆಂಗಳೂರು ನಗರ ಜಿಲ್ಲೆ) ತಲಾ 2; ಪಣಂಬೂರು, ಧರ್ಮಸ್ಥಳ, ಪುತ್ತೂರು, ಸುಳ್ಯ (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ)
ಗೇರುಸೊಪ್ಪ, ಕುಮಟಾ (ಎರಡೂ ಉತ್ತರ ಕನ್ನಡ ಜಿಲ್ಲೆ), ಮುರಗೋಡು (ಬೆಳಗಾವಿ ಜಿಲ್ಲೆ), ಮುದಗಲ್ (ರಾಯಚೂರು ಜಿಲ್ಲೆ),
ಸೋಮವಾರಪೇಟೆ (ಕೊಡಗು ಜಿಲ್ಲೆ), ಮಂಡಗದ್ದೆ (ಶಿವಮೊಗ್ಗ ಜಿಲ್ಲೆ), ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ,
ಆನೇಕಲ್ (ಬೆಂಗಳೂರು ನಗರ ಜಿಲ್ಲೆ), ಹೆಬ್ಬರು (ತುಮಕೂರು ಜಿಲ್ಲೆ), ಕನಕಪುರ (ರಾಮನಗರ ಜಿಲ್ಲೆ) ತಲಾ 1 ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.
16 ನೇ ಸೆಪ್ಟೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ
ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ; ಉತ್ತರ ಹಾಗೂ ದಕ್ಷಿಣ ಒಳನಾಡಿನ
ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ದಕ್ಷಿಣ ಒಳನಾಡಿನ
ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ
ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು:ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದ್ದು ಬಿರುಗಾಳಿಯ ವೇಗವು ಘಂಟೆಗೆ 30-40
ಕಿ.ಮೀ. ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
16 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತಮುತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.
ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಕೆಲವೊಮ್ಮೆ ಬಲವಾದ ಮೇ ಗಾಳಿ ಬೀಸುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.
ಸಂಜೆ/ರಾತ್ರಿಯ ವೇಳೆಗೆ ಒಂದೆರಡು ಬಾರಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಕೆಲವೊಮ್ಮೆ ಬಲವಾದ ಮೇ ಗಾಳಿ ಬೀಸುವ ಸಾಧ್ಯತೆ ಇದೆ.
ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ
ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
Photo Courtesy: Pexels
Share your comments