News

ರಾಜ್ಯದಲ್ಲಿ ಮಂಗಳವಾರ ಹವಾಮಾನ ಹೇಗಿದೆ, ಇಲ್ಲಿದೆ ವಿವರ ?

19 September, 2023 11:38 AM IST By: Hitesh
How is the weather in the state on Tuesday, here are the details?

ರಾಜ್ಯದ ಹಲವು ಭಾಗದಲ್ಲಿ ಹವಾಮಾನ ಸಾಧಾರಣವಾಗಿದೆ. ಆದರೆ, ಕೆಲವು ಭಾಗದಲ್ಲಿ ಚದುರಿದಂತೆ ಮಳೆಯಾಗುತ್ತಿರುವುದು ವರದಿ ಆಗಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ ನೋಡುವುದಾದರೆ, ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು.

ಕರಾವಳಿಯಲ್ಲಿ ವ್ಯಾಪಕವಾಗಿ; ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ) ಕೋಟ (ಉಡುಪಿ ಜಿಲ್ಲೆ) 5; ಕೊಟ್ಟಿಗೆಹಾರ(ಚಿಕ್ಕಮಗಳೂರು ಜಿಲ್ಲೆ) 4; ಕಾರವಾರ (ಉತ್ತರ ಕನ್ನಡಜಿಲ್ಲೆ),

ಉಡುಪಿ ತಲಾ 3; ಮಂಚಿಕೆರೆ, ಅಂಕೂಲ (ಎರಡೂ ಉತ್ತರ ಕನ್ನಡ ಜಿಲ್ಲೆ), ಕಾರ್ಕಳ (ಉಡುಪಿ ಜಿಲ್ಲೆ), ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ),

ಹೊಸಕೋಟೆ, ದೇವನಹಳ್ಳಿ (ಎರಡೂ ಬೆಂಗಳೂರು ಗ್ರಾಮಾಂತರ ಜಿಲ್ಲೆ), ಚಿಕ್ಕಬಳ್ಳಾಪುರ, ಮಾಲೂರು (ಕೋಲಾರ ಜಿಲ್ಲೆ) ತಲಾ 2;

ಧರ್ಮಸ್ಥಳ (ದಕ್ಷಿಣ ಕನ್ನಡ ಜಿಲ್ಲೆ), ಗೇರುಸೊಪ್ಪ, ಯೆಲ್ಲಾಪುರ (ಎರಡೂ ಉತ್ತರ ಕನ್ನಡ ಜಿಲ್ಲೆ),

ಲೊಂಡ(ಬೆಳಗಾವಿ ಜಿಲ್ಲೆ), ಬೆಳಗಾವಿ ನಗರ, ಬಾಗಲಕೋಟೆ, ಬಾಗಲ ಕೂಟೆ ಅಗೋ, ಕೂಡಲಸಂಗಮ (ಬಾಗಲಕೋಟೆ ಜಿಲ್ಲೆ), ಭಾಗಮಂಡಲ

(ಕೊಡಗು ಜಿಲ್ಲೆ), ಜಯಝುರ, ಶೃಂಗೇರಿ ಹೆಚ್.ಎಂ. ಎಸ್, ಕಳಸ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ), ಪೊನ್ನಂಪೇಟೆ ಪಿ.ಡಬ್ಲೂ .ಡಿ

(ಕೊಡಗು ಜಿಲ್ಲೆ), ಗೌರಿಬಿದನೂರು (ಚಿಕ್ಕಬಳ್ಳಾಪುರ ಜಿಲ್ಲೆ), ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ),

ಬೆಂಗಳೂರು ನಗರ, ಬಿ.ದುರ್ಗ (ಚಿತ್ರದುರ್ಗ ಜಿಲ್ಲೆ)ದಲ್ಲಿ ತಲಾ ಒಂದು ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.  

ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ

ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆ/ಗುಡುಗುಸಹಿತ

ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಹಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/

ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ

|ಗುಡುಗು/ಬಿರುಗಾಳಿಯ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ರಾಜ್ಯದ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ.

ಒಳನಾಡಿನಲ್ಲಿ ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ.

|ಮೀನುಗಾರರಿಗೆ ಎಚ್ಚರಿಕೆ: ಇಲ್ಲ

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

20 ನೇ ಸೆಪ್ಟೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.

ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ.

ಮಳೆ/ಗುಡುಗು ಸಹಿತ ಮಳೆಯಾಗುವ

ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್

ಇರುವ ಬಹಳಷ್ಟು ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.  

ಚಿತ್ರಕೃಪೆ: Pexels