ರಾಜ್ಯದಲ್ಲಿ ಬಹುತೇಕ ಒಣಹವೆ ಮುಂದುವರಿದ್ದಿದ್ದು, ಕೆಲವು ಭಾಗದಲ್ಲಿ ಕನಿಷ್ಠ ತಾಪಮಾನ ಕಾಣಿಸಿಕಾಂಡಿದೆ.
ತರಕಾರಿಯಿಂದ ಧಾನ್ಯದವರೆಗೆ ಸೋಮವಾರದ ಮಾರುಕಟ್ಟೆ ದರ ವಿವರ
ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವುದು ವರದಿ ಆಗಿಲ್ಲ.
ಗರಿಷ್ಠ ಉಷ್ಣಾಂಶವು ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.
ಚೀನಾದಿಂದ ಭಾರತದ ಮೇಲೂ ಬಲೂನ್ ಗೂಢಚಾರಿಕೆ: ವರದಿ
ಇನ್ನು ಮುಂದಿನ 24 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ ಕರಾವಳಿ ಮತ್ತು
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿವೆ.
ಉಳಿದಂತೆ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಇಲ್ಲ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11.6ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 7ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ 6 ಸಾವಿರ ಕೋಟಿ ಮೀಸಲು -ಸಿಎಂ
ಮುಂದಿನ 48ಗಂಟೆಗಳ ಅವಧಿಯಲ್ಲಿಯೂ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದೆ.
ಉಳಿದಂತೆ ಯಾವುದೇ ಭಾಗದಲ್ಲಿ ಮಳೆ ಆಗುವ ಸಾಧ್ಯತೆಗಳಿಲ್ಲ. ಹೀಗಾಗಿ, ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶ ಇರಲಿದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ.
ಗರಿಷ್ಠ ಉಷ್ಣಾಂಶವು 31 ಮತ್ತು ಕನಿಷ್ಠ ಉಷ್ಣಾಂಶವು 17 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.