ರಾಜ್ಯದ ವಿವಿಧ ಭಾಗದಲ್ಲಿ ಬುಧವಾರ ಹಾಗೂ ಗುರುವಾರ ಸಾಧಾರಣ ಮಳೆ ಮುಂದುವರಿಯಲಿದೆ. ಅಲ್ಲದೇ …
ಕಳೆದ 24 ಗಂಟೆಯ ಅವಧಿಯಲ್ಲಿ ನೈರುತ್ಯ ಮುಂಗಾರು ರಾಜ್ಯದ ಬಹುತೇಕ ಪ್ರದೇಶದಲ್ಲಿ ದುರ್ಬಲವಾಗಿತ್ತು.
ಆದರೆ, ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿರುವುದು ವರದಿ ಆಗಿದೆ.
ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್‌ನಲ್ಲಿ 4 ಸೆಂ.ಮೀ, ಕದ್ರಾದಲ್ಲಿ 3 ಸೆಂ.ಮೀ ಮಳೆಯಾಗಿದೆ.
ಉಡುಪಿಯ ಸಿದ್ದಾಪುರ, ಶಿರಾಲಿ, ಲೋಂಡಾದಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ. ಅಲ್ಲದೇ ಮಂಚಿಕೆರೆ,
ಮಂಗಳೂರು ವಿಮಾನ ನಿಲ್ದಾಣ, ಧರ್ಮಸ್ಥಳದಲ್ಲಿ, ಉಡುಪಿ, ಕಾರ್ಕಳ, ಮುನಿರಾಬಾದ್
ಹಾಗೂ ಶಿಢ್ಲಘಟ್ಟದಲ್ಲಿ ತಲಾ ಒಂದು ಸೆಂ.ಮೀ ಮಳೆಯಾಗಿರುವುದು ವರದಿ ಆಗಿದೆ.
ಮುಂದಿನ 24 ಗಂಟೆಯ ಅವಧಿ: ಮುಂದಿನ 24 ಗಂಟೆಯ ಅವಧಿಯಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ;
ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಗಂಟೆ: ಕರಾವಳಿಯ ಬಹುತೇಕ ಕಡೆಗಳಲ್ಲಿ; ಒಳನಾಡಿನ ಕೆಲವು ಕಡೆಗಳಲ್ಲಿ
ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿರುಗಾಳಿ ಮುನ್ನೆಚ್ಚರಿಕೆ: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ಮುಂದಿನ 24 ಗಂಟೆ: ಬೆಂಗಳೂರು ನಗರದಲ್ಲಿ ಮುಂದಿನ 24 ಗಂಟೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು,
ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ.
ಕೆಲವು ಪ್ರದೇಶದಲ್ಲಿ ಭಾರೀ ಗಾಳಿ ಬೀಸಲಿದೆ. ಗರಿಷ್ಠ ಉಷ್ಣಾಂಶವು 29 ಮತ್ತು ಕನಿಷ್ಠ ಉಷ್ಣಾಂಶವು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉಳಿದಂತೆ ಹವಾಮಾನದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.
visual credit: pexels