ರಾಜ್ಯದಲ್ಲಿ ಗುರುವಾರ ಬಹುತೇಕ ಒಣಹವೆ ಮುಂದುವರಿದಿದೆ.
ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗಮನಾರ್ಹವಾಗಿ ಇಳಿಕೆ ಆಗಿದ್ದು, 2.1 ಡಿಗ್ರಿ ಸೆಲ್ಸಿಯಸ್ ಹಾಗೂ 4 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಕರಾವಳಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ -2ರಿಂದ +2 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
PMKisanUpdate ಪಿ.ಎಂ ಕಿಸಾನ್ ಹಣ ಇದೇ ದಿನ ನಿಮ್ಮ ಖಾತೆಗೆ ಬರಲಿದೆ!
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಮನಾರ್ಹವಾಗಿ ಏರಿಕೆ ಕಂಡುಬಂದಿದ್ದು, ಇಲ್ಲಿ 2.1 ಡಿಗ್ರಿ ಸೆಲ್ಸಿಯಸ್‌ನಿಂದ 4 ಡಿಗ್ರಿ ಸೆಲ್ಸಿಯಸ್‌ನ ವರೆಗೆ ಇರಲಿದೆ.
ರಾಜ್ಯಾದ್ಯಂತ ಒಣಹವೆ ಮುಂದುವರಿದಿದೆ. ಯಾವುದೇ ಭಾಗದಲ್ಲಿ ಮಳೆ ಆಗಿರುವುದು ವರದಿ ಆಗಿಲ್ಲ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11.6 ಡಿಗ್ರಿ ಸೆಲ್ಸಿಯಸ್ ಬಾಗಲಕೋಟೆಯಲ್ಲಿ ದಾಖಲಾಗಿದೆ.
Children Missing Case 9,018 ಮಕ್ಕಳು ರಾಜ್ಯದಲ್ಲಿ ನಾಪತ್ತೆ: ಆತಂಕಕ್ಕೆ ಕಾರಣವಾದ ಅಂಕಿ- ಅಂಶ!
ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಬಹುತೇಕ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಮುಂದಿನ 48ಗಂಟೆಗಳ ಅವಧಿಯಲ್ಲಿಯೂ ರಾಜ್ಯದಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಉಳಿದಂತೆ ಯಾವುದೇ ಭಾಗದಲ್ಲಿ ಮಳೆ ಆಗುವ ಸಾಧ್ಯತೆಗಳಿಲ್ಲ. ಹೀಗಾಗಿ, ಮೀನುಗಾರರಿಗೆ ಯಾವುದೇ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
Aadhar Card -Sim Card Link ಸಿಮ್ ಕಾರ್ಡ್‌ಗೂ ಆಧಾರ್ ಕಾರ್ಡ್ ಜೋಡಣೆ: ಕಾರಣ ಏನು ಗೊತ್ತೆ ?
ಗರಿಷ್ಠ ಉಷ್ಣಾಂಶವು ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.
ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿರುತ್ತದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಗಳಿರುತ್ತವೆ.
ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರಲಿದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತವೆ.
ಗರಿಷ್ಠ ಉಷ್ಣಾಂಶವು 32 ಮತ್ತು ಕನಿಷ್ಠ ಉಷ್ಣಾಂಶವು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಗಳಿರುತ್ತವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಣದುಬ್ಬರ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್ ಮಾಡ್ತಿದೆ ಕೇಂದ್ರ; ಪೆಟ್ರೋಲ್, ಡಿಸೇಲ್ ದರ ಇಳಿಕೆ ?!