ರೈತಬಾಂಧವರಿಗೆ ಸಂತಸದ ಸುದ್ದಿ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾದ ಹಣದ ಸ್ಟೇಟಸ್ ನೋಡಲು ರೈತರು ಈಗ ಮನೆಯಲ್ಲಿಯೇ ಕುಳಿತು ನೋಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ... ಇಲ್ಲಿದೆ ಮಾಹಿತಿ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 9ನೇ ಕಂತಿನ ಹಣ ಈಗಾಗಲೇ ರೈತರ ಖಾತೆಗೆ ಜಮೆಯಾಗಿದೆ. ಈ ಯೋಜನೆಯಡಿ 10 ಕೋಟಿಗೂ ಹೆಚ್ಚು ರೈತರು ಈಗಾಗಲೇ ನೋಂದಣಿ ಮಾಡಿಸಿಕೊಂಡು ಲಾಭ ಪಡೆಯುತ್ತಿದ್ದಾರೆ. ಆದರೆ ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಬ್ಯಾಂಕಿಗೆ ಹೋಗಬೇಕಿಲ್ಲ. ಮೊಬೈಲಿನಲ್ಲಿಯೇ ಚೆಕ್ ಮಾಡಿಕೊಳ್ಳಬಹುದು.
ಈ ಮುಂದಿ ಲಿಂಕ್ ಕ್ಲಿಕ್ ಮಾಡಿ ನಿಮ್ಮ ಸ್ಟೇಟಸ್ ತಿಳಿದುಕೊಳ್ಳಬಹುದು. https://pmkisan.gov.in/beneficiarystatus.aspx ಅಥವಾ ಗೂಗಲ್ ನಲ್ಲಿ pm kisan status ಅಂತ ಟೈಪ್ ಮಾಡಿ Beneficiary status-pm kisan ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ನಂಬರ್, ಅಥವಾ ಬ್ಯಾಂಕ್ ಅಕೌಂಟ್ ಅಥವಾ ಮೊಬೈಲ್ ನಂಬರ್ ಈ ಮೂರರಲ್ಲಿ ಯಾವುದಾದರೊಂದನ್ನು ಆಯ್ಕೆ ಮಾಡಿಕೊಳ್ಳಬೇಕು.
ಉದಾಹರಣೆ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಂಡರೆ ನಿಮ್ಮ ಮೊಬೈಲ್ ನಂಬರ್ ಟೈಪ್ ಮಾಡಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಎಷ್ಟು ಕಂತಿನ ಹಣ ಜಮೆಯಾಗಿರುವ ಹಣದ ಸ್ಟೇಟಸ್ ಕ್ಷಣಾರ್ಧದಲ್ಲಿ ತಿಳಿದುಕೊಳ್ಳಬಹುದು.
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯಲ್ಲಿ ಸರ್ಕಾರವು ಸಣ್ಣ ಮತ್ತು ಮಧ್ಯಮವರ್ಗದ ರೈತರಿಗೆ ವರ್ಷಕ್ಕೆ 6,000 ರೂಗಳನ್ನು ತಮ್ಮ ಖಾತೆಗಳಲ್ಲಿ ವರ್ಗಾಯಿಸುತ್ತದೆ. ಸರ್ಕಾರದಿಂದ ರೈತರಿಗೆ ಈ ಹಣಕಾಸಿನ ನೆರವು ಮೂರು ಕಂತುಗಳಲ್ಲಿ ಪ್ರತಿಕಂತಿಗೆ 2000 ರೂಪಾಯಿಯಂತೆ ಬರುತ್ತದೆ. ಯೋಜನೆಯಡಿ 2000 ರ ಮೊದಲ ಕಂತು ಏಪ್ರಿಲ್ 1 ರಿಂದ ಜುಲೈ 31 ರವರೆಗೆ ಬರುತ್ತದೆ. ಎರಡನೇ ಕಂತು ಆಗಸ್ಟ್ 1 ರಿಂದ ನವೆಂಬರ್ 30 ರವರೆಗೆ ಮತ್ತು ಮೂರನೇ ಕಂತು ಡಿಸೆಂಬರ್1 ರಿಂದ ಮಾರ್ಚ್ 31 ರವರೊಳಗೆ ಬರುತ್ತದೆ.
ಕೇಂದ್ರ ಸರ್ಕಾರ ವಾರ್ಷಿಕವಾಗಿ ಘೋಷಿಸಿದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ 6,000 ರೂಪಾಯಿ ಸಹಾಯ ಧನ ನಿಮ್ಮ ಖಾತೆಯಲ್ಲಿ ಜಮಾವಾಗಿದೆಯೇ ಎಂಬುದನ್ನು ನೋಡಿಕೊಳ್ಳಲು ಬ್ಯಾಂಕಿಗೆ ಹೋಗುವ ಅವಶ್ಯಕತೆಯಿಲ್ಲ. ನೋಂದಣಿ ಮಾಡಿಸಿಕೊಂಡ ರೈತರು ಇನ್ನುಮುಂದೆ ಮನೆಯಲ್ಲಿಯೇ ಕುಳಿತು ನೋಡಿಕೊಳ್ಳಬಹುದು. ಅಕೌಂಟಿಗೆ ಹಣ ಜಮೆಯಾಗದಿದ್ದರೆ ಅಕೌಂಟಿಗೆ ಜಮೆಯಾಗಲು ಯಾವ ಸ್ಥಿತಿಯಲ್ಲಿದೆ ಎಂಬುದನ್ನು ಮೇಲಿನ ಲಿಂಕ್ ಮೂಲಕ ಪರಿಶೀಲಿಸಬಹುದು.
ಒಂದು ವೇಳೆ ನಿಮ್ಮ ಖಾತೆಗೆ ಹಣ ಜಮೆಯಾಗದಿದ್ದರೆ ಈ ಕೆಳಗೆ ಸಹಾಯವಾಣಿ ನಂಬರಿಗೆ ಸಂಪರ್ಕಿಸಿ. ಟೋಲ್ ಫ್ರೀ ನಂಬರ್ : 18001155266, ಪಿಎಂ ಕಿಸಾನ್ ಹೆಲ್ಪ್ ಲೈನ್ ನಂಬರ್ : 155261, ಪಿಎಂ ಕಿಸಾನ್ ಲ್ಯಾಂಡಲೈನ್ ನಂಬರ್ : 011—23381092, 23382401, PM Kisan helpline: 0120-6025109, 011-24300606 ಅಥವಾ ಈ Email ID: pmkisan-ict@gov.in ಗೆ ಮೇಲ್ ಮಾಡಬಹುದು.