2021-22ನೇ ಸಾಲಿನ ಐಬಿಪಿಎಸ್ ಒಟ್ಟು 1558 ಕ್ಲರಿಕಲ್ ಕೇಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IBPS Clerk 2020 ನೇಮಕಾತಿಗೆ ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ibps.in ಗೆ ಭೇಟಿ ನೀಡಬಹುದು.
ಐಬಿಪಿಎಸ್ ಕ್ಲರ್ಕ್ ಹುದ್ದೆಗಳಿಗೆ ಸೆಪ್ಟೆಂಬರ್ 02 ರಿಂದ 23 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದೇ ದಿನಾಂಕಗಳ ಒಳಗೆ ಅಪ್ಲಿಕೇಶನ್ ಶುಲ್ಕವನ್ನು ಅಭ್ಯರ್ಥಿಗಳು ಪಾವತಿ ಮಾಡಬೇಕಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ
ಯಾವ್ಯಾವ ಬ್ಯಾಂಕ್‌ಗಳು?
ಈ ನೇಮಕಾತಿ ಪ್ರಕ್ರಿಯೆಯಲ್ಲಿ ಬ್ಯಾಂಕ್ ಆಫ್ ಬರೋಡಾ, ಕೆನೆರಾ ಬ್ಯಾಂಕ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಯುಸಿಒ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಇಂಡಿಯನ್ ಬ್ಯಾಂಕ್, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಇರುತ್ತವೆ.
ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?
ಪ್ರಿಲಿಮಿನರಿ ಪರೀಕ್ಷೆ, ಮೈನ್ಸ್ ಪರೀಕ್ಷೆ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರಿಲಿಮಿನರಿ ಪರೀಕ್ಷೆಯು 100 ಅಂಕಗಳನ್ನು ಹೊಂದಿದ್ದು 1 ಗಂಟೆ ಅವಧಿಯದ್ದಾಗಿದೆ. ಮೈನ್ಸ್ ಪರೀಕ್ಷೆಯು 200 ಅಂಕಗಳನ್ನು ಹೊಂದಿದ್ದು, 2ಗಂಟೆ 40 ನಿಮಿಷಗಳ ಅವಧಿಯದ್ದಾಗಿದೆ. ಈ ಪರೀಕ್ಷೆ 24.01.2021ರಂದು ಮೂಲಕ ನಡೆಯಲಿದೆ. ಆಬ್ಜೆಕ್ಟಿವ್ ಪರೀಕ್ಷೆಯು 200 ಅಂಕಗಳ 200 ಪ್ರಶ್ನೆಗಳನ್ನು ಒಳಗೊಂಡಿದ್ದು, ತಲಾ 50 ಪ್ರಶ್ನೆಗಳ 4 ವಿಭಾಗಗಳನ್ನು ಒಳಗೊಂಡಿರುತ್ತವೆ.
ಮಾಸಿಕ ವೇತನ: 20,000- 39,992
ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಟ 20 ವರ್ಷ, ಗರಿಷ್ಟ 28 ವರ್ಷ ವಯೋಮಿತಿ ಮೀರಿರಬಾರದು.
ಅರ್ಜಿ ಸಲ್ಲಿಸಲು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ, ಮಾಜಿ ಸೈನಿಕ ಅಭ್ಯರ್ಥಿಗೆ 8 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಹತೆಗಳು:
ಭಾರತ ಸರಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವು ದಾದರೂ ಪದವಿ ಪಡೆದಿರಬೇಕು. ಅಧಿಕೃತ ಅಂಕ ಪಟ್ಟಿ ಅಥವಾ ಪದವಿ ಸರ್ಟಿಫಿಕೆಟ್ ಕಡ್ಡಾಯ. ಅಥವಾ ಕೇಂದ್ರ ಸರ್ಕಾರದಿಂದ ಅಂಗೀಕೃತವಾಗಿರುವ ಸಂಸ್ಥೆ/ಕಾಲೇಜುಗಳಲ್ಲಿ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಹಾಗೂ https://www.ibps.in/ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದು.