1. ಸುದ್ದಿಗಳು

ಅಭಿವೃದ್ಧಿ ಮಾಡಬೇಕೆಂದರೆ ಕೃಷಿ, ಶಿಕ್ಷಣ, ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು- ಬಾಲಸುಬ್ರಹ್ಮಣಿಯನ್

ಬೆಂಗಳೂರಿನಿಂದ ಝೂಮ್ ಮೀಟ್ ಮೂಲಕ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ನಡೆಸಿದ ಸಭೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ವಿವಿ ಜೋತ್ಸ್ನಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.

ಯಾವುದೇ ಜಿಲ್ಲೆ ಅಥವಾ ರಾಜ್ಯದ ಅಭಿವೃದ್ಧಿಗೆ ಪ್ರಮುಖ ಕ್ಷೇತ್ರಗಳಾಗಿರುವ  ಕೃಷಿ, ಶಿಕ್ಷಣ ಮತ್ತು ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕೆಂದು ನಿವೃತ್ತ ಹೆಚ್ಚುವರಿ ಮುಖ್ಯಕಾಯದರ್ಶಿ ವಿ.  ಬಾಲಸುಬ್ರಹ್ಮಣಿಯನ್ ಜಿಲ್ಲಾಡಳಿತಕ್ಕೆ ಸಲಹೆ ನೀಡಿದರು.

ಅವರು ಬೆಂಗಳೂರಿನಿಂದ ಝೂಮ್ ಮೀಟ್ ಮೂಲಕ ಸಚಿವರು ನಡೆಸಿದ ಸಭೆಯಲ್ಲಿ  ಸಚಿವ ಮುರುಗೇಶ್ ನಿರಾಣಿ ಅವರ ಕೋರಿಕೆಯಂತೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ವಿ. ಬಾಲಸುಬ್ರಹ್ಮಣಿಯನ್ ಮಾತನಾಡಿ, ಜಿಲ್ಲೆಯ ವಿಭಜನೆಯ ನಂತರ ಕಲಬುರಗಿ ಜಿಲ್ಲೆಯ ನೀರಾವರಿ ಪ್ರಮಾಣ ಶೇ 11% ಕ್ಕೆ ಇಳಿದಿದೆ. ಇದು ಅಭಿವೃದ್ಧಿಯ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಲ್ಲ. ಒಂದು ವರ್ಷದಲ್ಲಿ ಜಿಲ್ಲೆಗೆ 30 ಇಂಚು ಮಳೆಯಾಗುವುದರಿಂದ ಅಂತರ್ಜಲ ಸಂರಕ್ಷಣೆ ಬಗ್ಗೆ ಗಮನ ಹರಿಸಬೇಕು ಎಂದು ನಿರ್ದೇಶನ ನೀಡಿದರು.

ಕಲಬುರಗಿ ಜಿಲ್ಲೆಯು  ಶ್ರೇಯಾಂಕದಲ್ಲಿ 45 ವರ್ಷಗಳ ಹಿಂದೆ ಯಾವ ಸ್ಥಾನದಲ್ಲಿತ್ತೋ ಈಗಲೂ ಅದೇ ಸ್ಥಾನದಲ್ಲಿರುವುದು ಅತ್ಯಂತ ನೋವಿನ ಸಂಗತಿ. ಇದಕ್ಕೆ ಆಡಳಿತ ನಡೆಸಿದ  ಸರಕಾರಗಳು ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಾದ ಯೋಜನೆಗಳನ್ನು ಜಾರಿಮಾಡದೆ ಕೇವಲ ಗುತ್ತಿಗೆದಾರರ ಹಿತಕಾಪಾಡುವ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಕೊಟ್ಟಿದ್ದೆ ಈ ಪ್ರದೇಶ ಹಿಂದುಳಿಯಲು ಪ್ರಮುಖ ಕಾರಣವಾಗಿದೆ ಎಂದು ಅಸಮಾಧಾನ ಹೊರಹಾಕಿದರು.

ಉತ್ತರ ಕರ್ನಾಟಕದಲ್ಲಿ ರೇಷ್ಮೆ ಬೇಸಾಯ ಹಳೆ ಮೈಸೂರು ಪ್ರಾಂತ್ಯಕ್ಕೆ ಹೋಲಿಸಿದರೆ ಶೂನ್ಯ. ಒಂದು ಎಕರೆಯಲ್ಲಿ ರೇಷ್ಮೆ ಬೆಳೆಯಿಂದ 50 ಸಾವಿರ ರೂಪಾಯಿ ಲಾಭ ಪಡೆಯಬಹುದು. ಜಿಲ್ಲೆಯಲ್ಲಿ ಈ ಬೆಳೆಗೆ ಅದ್ಯತೆ ನೀಡಬೇಕು ಎಂದು ಒತ್ತಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ತಮ್ಮ ಕನಸಿನ ಕೂಸಾದ  'ಕಲಬುರಗಿ ವಿಷನ್- 2050' ಕಾರ್ಯಕ್ರಮವನ್ನು ಅನುಷ್ಠಾನ ಮಾಡುವ ಮಹಾತ್ವಕಾಂಕ್ಷೆಯೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿ, “ಕಲಬುರಗಿ ವಿಷನ್-2050” ಯೋಜನೆಯು ಮುಂದಿನ 30 ವರ್ಷಗಳ ಕಾಲ ಜಿಲ್ಲೆಯ ಒಟ್ಟಾರೆ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ಹೇಳಿದರು.

ಕಲಬುರಗಿ, ಹಿಂದುಳಿದ  ಜಿಲ್ಲೆ ಎಂಬ ಟ್ಯಾಗ್ ಅನ್ನು ತೊಡೆದುಹಾಕಿ ಜಿಲ್ಲೆಯನ್ನು ಅಭಿವೃದ್ಧಿಪಡಿಸುವ ಬಗ್ಗೆ ತಮ್ಮ ಚಿಂತನೆಗಳು ಹಾಗೂ  ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಳ್ಳಬೇಕೆAದು ತಜ್ಞರು ಮತ್ತು ನಿವೃತ್ತ ಅಧಿಕಾರಿಗಳಲ್ಲಿ ವಿನಮ್ರವಾಗಿ ಮನವಿ ಮಾಡಿದರು. ಇತರ ಇಲಾಖೆಗಳಿಗೆ 30 ವರ್ಷಗಳ (2050) ಸಮಯವನ್ನು ನೀಡಲಾಗಿದ್ದರೆ, ಜಿಲ್ಲೆಯ ಶಿಕ್ಷಣ ಇಲಾಖೆಯ ಅಭಿವೃದ್ಧಿಗೆ ಕೇವಲ 10 ವರ್ಷಗಳ ಗುರಿ ನೀಡಿದರು. ಶಿಕ್ಷಣಕ್ಕೆ ದೀರ್ಘಾವಧಿಯ ಅಭಿವೃದ್ಧಿ ಯೋಜನೆಗಿಂತ ಇನ್ನೂ ಬೇಗ ಅಭಿವೃದ್ಧಿ ಕಾಣಬೇಕಿದೆ. ಹೀಗಾಗಿ ಅಭಿವೃದ್ಧಿಗೆ ಕೇವಲ 10 ವರ್ಷಗಳ ಸಮಯವನ್ನು ನೀಡಲಾಗುವುದು ಎಂದು  ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.

ರಾಜ್ಯ ಸರಕಾರದ ಯೋಜನಾ ವಿಭಾಗದ ಮುಖ್ಯಸ್ಥರಾದ ಐಎಎಸ್ ಅಧಿಕಾರಿ ಡಾ. ಶಾಲಿನಿ ರಜನೀಶ್ ಅವರು ಮಾತನಾಡಿ, ಕೇಂದ್ರ ಸರ್ಕಾರದ ನೆರವಿನೊಂದಿಗೆ ಎಲ್ಲಾ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿಗೆ ವಿದ್ಯಾರ್ಥಿಗಳು ಒಡ್ಡಿಕೊಳ್ಳಬೇಕು, ಇದರಿಂದ ನಾವು ಕಾರ್ಯಪಡೆಗಳನ್ನು ಸಿದ್ಧಪಡಿಸಬಹುದು. ಆಧುನಿಕ ಪ್ರಪಂಚದ ಸವಾಲುಗಳನ್ನು ಎದುರಿಸಲು. ಕಲಬುರಗಿಯಲ್ಲಿ ಸಾಮಾಜಿಕ ಮೂಲಸೌಕರ್ಯಗಳನ್ನು ಸುಧಾರಿಸಲು ಇದು ಸಾಕಷ್ಟು ಅನುಕೂಲವಾಗಲಿದೆ ಎಂದು ಸಲಹೆ  ನೀಡಿದರು.

ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಿಂದ ವಿಡಿಯೋ ಸಂವಾದದಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮಾರಾವ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಶ್ ಶಶಿ, ಡಿಸಿಪಿ ಶ್ರೀನಿವಾಸಲು, ಗುಲ್ಬರ್ಗಾ ವಿದ್ಯುತ್ ಸರಬರಾಜು ನಿಯಮಿತ ( ಜೆಸ್ಕಾಂ) ದ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಶಂಕರಣ್ಣ ವಣಿಕ್ಯಾಳ ಹಾಗೂ ಸಂಬಂಧಪಟ್ಟ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

Published On: 14 June 2021, 10:06 PM English Summary: If agriculture is given priority, it will develop

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.