News

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

25 May, 2023 11:46 AM IST By: Maltesh
IMD Bengaluru has forecast stormy rain in some districts of the state

26 ನೇ ಮೇ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ

ಮುಂದಿನ 24 ಘಂಟೆಗಳು ರಾಜ್ಯದ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು: ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ.

ಗುಡುಗು ಮುನ್ನೆಚ್ಚರಿಕೆ: ಮುಂದಿನ 24 ಘಂಟೆಗಳು ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಗಾಳಿಯ ವೇಗವು ಒಳನಾಡಿನಲ್ಲಿ ಘಂಟೆಗೆ 40 ರಿಂದ 50 ಕಿ.ಮೀ. ಮತ್ತು ಕರಾವಳಿಯಲ್ಲಿ 30 ರಿಂದ 40 ಕಿ.ಮೀ ಇರುವ ಸಾಧ್ಯತೆ ಇದೆ. ಮುಂದಿನ 48 ಘಂಟೆಗಳು ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶದ ಮುನ್ಸೂಚನೆ:

ಮುಂದಿನ 48 ಘಂಟೆಗಳು: ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.  ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

26 ನೇ ಮೇ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತು ಸುತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಸಲ ಬಲವಾದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 40 ರಿಂದ 50 ಕಿ.ಮೀ. ಇರುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯ ವೇಳೆಗೆ ಒಂದೆರಡು ಸಲ ಬಲವಾದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ. ಇರುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 31 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.

ಮೂಲ: ಆಯ್‌ಎಂಡಿ ಬೆಂಗಳೂರು