ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಆಗಲಿದ್ದು, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ನೀಡಲಾಗಿದೆ.
ಕರಾವಳಿ ಪ್ರದೇಶದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ
ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ದಾವಣಗೆರೆ
ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಹಾಗೂ ತುಮಕೂರು ಸೇರಿದಂತೆ ವಿವಿಧ
ಭಾಗದಲ್ಲಿ ಇದೇ ನವೆಂಬರ್ 7 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ ಉತ್ತರ ಒಳನಾಡಿನ ಒಂದೆರಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ವಿವಿಧ ಭಾಗದಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.
ಇನ್ನು ಗುರುವಾರ ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ ನಲ್ಲಿ): ಮಾನ್ವಿ (ರಾಯಚೂರು ಜಿಲ್ಲೆ), ಸಾಲಿಗ್ರಾಮ (ಮೈಸೂರು ಜಿಲ್ಲೆ) ತಲಾ 4 ಸೆಂ.ಮೀ ಮಳೆಯಾಗಿರುವುದು ವರದಿಯಾಗಿದೆ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 16.6 ಡಿ.ಸೆ. ವಿಜಯಪುರ ದಲ್ಲಿ ದಾಖಲಾಗಿದೆ.
ಮುಂದಿನ 24 ಗಂಟೆಗಳು: ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಕರಾವಳಿಯ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ಮುಂದಿನ 48 ಘಂಟೆಗಳು:
ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು
ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.
ರಾಜ್ಯದಾದ್ಯಂತ ಹಲವು ಕಡೆಗಳಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ
ಗುಡುಗು ಮುನ್ನೆಚರಿಕೆ:
ಮುಂದಿನ 24 ಘಂಟೆಗಳು: ಕರಾವಳಿ ಹಾಗು ದಕ್ಷಿಣ ಒಳನಾಡಿನಲ್ಲಿ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ;
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
ಬೆಂಗಳೂರಿನಲ್ಲಿ ಹವಾಮಾನ ಹೇಗಿರಲಿದೆ ?
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಮತ್ತು ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ
ಹಗುರ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ.
ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ/ರಾತ್ರಿಯ ವೇಳೆಗೆ ಕೆಲವು ಕಡೆಗಳಲ್ಲಿ
ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ.
ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಎಂದು ಹವಾಮಾನ ಇಲಾಖೆ ತಿಳಿಸಿದೆ.