ಈ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತ ವರ್ಗದ ಕುಲಕಸುಬುದಾರರಿಗೆ ತರಬೇತಿ ನೀಡಿ, (2021-22 ನೇ ಸಾಲಿಗೆ ಮಾತ್ರ) ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಗೊಳಿಸುವ ಸಲುವಾಗಿ, ನಿಗಮದಿಂದ ಶೇ. 4 ರ ಬಡ್ಡಿದರದಲ್ಲಿ ರೂ. 50,000/-ದವರೆಗೆ ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ.
ಇದರಲ್ಲಿ, ಶೇ. 50ರಷ್ಟು ಸಾಲವನ್ನು 36 ತಿಂಗಳಿನಲ್ಲಿ ಫಲಾನುಭವಿಯು ಮರುಪಾವತಿ ಮಾಡಿದಲ್ಲಿ, ಉಳಿದ ಶೇ. 50ರಷ್ಟು ಹಣವನ್ನು ‘ಬ್ಯಾಕ್‌ಎಂಡ್ ಸಹಾಯಧನ’ವನ್ನಾಗಿ ಪರಿಗಣಿಸಲಾಗುತ್ತದೆ. ಫಲಾನುಭವಿಯು ತಾನು ಪಡೆದ ಸಾಲವನ್ನು 36 ತಿಂಗಳೊಳಗಾಗಿ ಮರುಪಾವತಿ ಮಾಡಲು ವಿಫಲರಾದಲ್ಲಿ ಶೇ. 50ರಷ್ಟು ಬ್ಯಾಕ್‌ಎಂಡ್ ಸಹಾಯಧನವನ್ನು ಸಹ ಸಾಲವೆಂದು ಪರಿಗಣಿಸಲಾಗುತ್ತದೆ.
ಅರ್ಹತೆಗಳು
ಅರ್ಜಿದಾರರು ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಧಾರ್ಮಿಕ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.
ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರರ ವಯಸ್ಸು 18 ರಿಂದ 45 ವರ್ಷಗಳ ನಡುವೆ ಇರಬೇಕು.
ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 4,50,000/- ಗಿಂತ ಕಡಿಮೆ ಇರಬೇಕು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು.
ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.
'ಈ' ಬೆಳೆಗೆ ಕೇವಲ 2 ಲಕ್ಷ ರೂಪಾಯಿ ಖರ್ಚು ಮಾಡಿ 1 ಕೋಟಿ ವರೆಗೆ ಬಂಪರ್ ಆದಾಯ
ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಪ್ರಮಾಣಪತ್ರ
ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಆದಾಯ ಪ್ರಮಾಣಪತ್ರ
ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
ಸ್ವಯಂ ಘೋಷಣೆ ಪತ್ರ
ಖಾತರಿ ನೀಡುವವರ ಸ್ವಯಂ ಘೋಷಣೆ ಪತ್ರ
ಅರಿವು ವಿದ್ಯಾಭ್ಯಾಸ ಸಾಲ ಯೋಜನೆ
ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET ಮುಖಾಂತರ) ಎಂ.ಬಿ.ಬಿ.ಎಸ್/ ಬಿ.ಡಿ.ಎಸ್/ ಆಯುಷ್/ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET ಮುಖಾಂತರ) ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ಬ್ಯಾಚುಲರ್ ಆಫ್ ಇಂಜಿನಿಯರಿಂಗ್/ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 30,000/- ಗಳು (ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ).
ಎಲ್ಲಾ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯ ರೂ. 8,00,000/- ಗಿಂತ ಕಡಿಮೆ ಇರಬೇಕು.. ವಿದ್ಯಾರ್ಥಿಯು ಪಡೆದ ಸಾಲವನ್ನು ಕೋರ್ಸ್ ಮುಗಿದ 1 ವರ್ಷದ ನಂತರ 48 ತಿಂಗಳ ಅವಧಿಯಲ್ಲಿ 2% ಬಡ್ಡಿದರದೊಂದಿಗೆ ಮರುಪಾವತಿ ಮಾಡಬೇಕು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET ಮುಖಾಂತರ) ಎಂ.ಬಿ.ಬಿ.ಎಸ್ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 2,00,000/- ವನ್ನು ನೀಡಲಾಗುತ್ತದೆ (ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ).
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (CET/NEET ಮುಖಾಂತರ) ಬಿ.ಡಿ.ಎಸ್ ಹಾಗೂ ಆಯುಷ್ ಪದವಿ ಕೋರ್ಸ್ ಗಳಿಗೆ, ಸರ್ಕಾರಿ ಕೋಟಾದಲ್ಲಿ ಸರ್ಕಾರಿ/ಖಾಸಗಿ ಕಾಲೇಜು ಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗರಿಷ್ಠ ರೂ. 30,000/- ಗಳು (ಹೊಸ ಮತ್ತು ನವೀಕರಣ ವಿದ್ಯಾರ್ಥಿಗಳಿಗೆ).
Share your comments