News

ಈ ಬಾರಿಯ ಬಜೆಟ್‌ನಲ್ಲಿ ರೈತರಿಗೆ, ಬಡವರಿಗೆ ಅನುಕೂಲ ಕಲ್ಪಿಸುವ ಕೆಲಸವಾಗಲಿದೆ: ಸಿಎಂ

29 January, 2023 3:43 PM IST By: Kalmesh T
In this time's budget, there will be work to facilitate the farmers and the poor: CM

ಈ ವರ್ಷದ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ, ಜನಪರವಾಗಿರುತ್ತದೆ. ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಹೇಳಿದರು.

ಭಾರತೀಯ ಅಂಚೆ ಇಲಾಖೆಯಲ್ಲಿವೆ 40,889 ಭರ್ಜರಿ ಉದ್ಯೋಗಾವಕಾಶ! ಅರ್ಜಿ ಸಲ್ಲಿಕೆಗೆ ಫೆ.16 ಕೊನೆ ದಿನ

ಈ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ತೆಗೆದುಕೊಂಡಾಗ 5 ಸಾವಿರ ಕೋಟಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ.‌

72 ಸಾವಿರ ಕೋಟಿ ಸಾಲ ತೆಗೆದುಕೊಳ್ಳುವ ಅವಕಾಶ ಇದ್ದರೂ ನಾವು ಕೇವಲ 61 ಸಾವಿರ ಕೋಟಿಗೆ ಮಿತಿಗೊಳಿಸಿದ್ದೇವೆ.‌ ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ.  ನಾವು ಈ ವರ್ಷ 61 ಸಾವಿರಕ್ಕೆ ಮಿತಿಗೊಳಿಸಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.

ರಾಜ್ಯದಲ್ಲಿ ಬಿಡುವು ನೀಡಿದ ಮಳೆ, ವಿವಿಧೆಡೆ ಚಳಿ

ಹತ್ತು ಹಲವಾರು ವರ್ಷಗಳಿಂದ ಸರ್ಕಾರಗಳು ಮಾಡಿರುವ ಸಾಲವನ್ನು ತೀರಿಸುವ ಹೊಣೆಗಾರಿಕೆ ನಮ್ಮ ಮೇಲೆ ಇದೆ. ಕೇವಲ 9% ರಾಜ್ಯದ ಅಭಿವೃದ್ಧಿ ಆಗುತ್ತಿದೆ. ಅದರ ಗತಿಯನ್ನಿಟ್ಟುಕೊಂಡು ಸಾಮಾಜಿಕವಾಗಿ ಅಭಿವೃದ್ಧಿ ಮಾಡಿ ಸಮತೋಲನ ಮಾಡಿಕೊಳ್ಳುವ ಅವಶ್ಯಕತೆಯಿದೆ.

ಮುಂದಿನ ಎರಡು, ಮೂರು ವರ್ಷ ಸಮತೋಲನ ಕಾಪಾಡಿಕೊಂಡರೆ ಇನ್ನಷ್ಟು ಆದಾಯ ಬರುವ ನಿರೀಕ್ಷೆಯಿದೆ. ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯವನ್ನು ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ.

Today Gold Rate| ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಇಳಿಕೆ, ಎಷ್ಟಿದೆ ಇಂದಿನ ಚಿನ್ನದ ದರ!

ಈ ವರ್ಷ 8101 ಶಾಲಾ ಕಟ್ಟಡ ನಿರ್ಮಾಣಕ್ಕೆ ಕ್ರಮ ತೆಗೆದುಕೊಂಡಿದ್ದೇವೆ. ಅವೆಲ್ಲವೂ ಮೇ, ಜೂನ್ ವೇಳೆಗೆ ನಿರ್ಮಾಣ ಆಗುತ್ತವೆ. ಅದೇ ವೇಗವನ್ನು ಮುಂದಿನ ದಿನಗಳಲ್ಲಿ ಮುಂದುವರಿಸಿಕೊಂಡು ಹೋಗುತ್ತೇವೆ. ಆರೋಗ್ಯ ಕ್ಷೇತ್ರದಲ್ಲಿ ನಾವು ಪ್ರಗತಿಯಲ್ಲಿ ಹೋಗುತ್ತಿದ್ದೇವೆ.

ನಮ್ಮ ಪ್ರಾತಿನಿಧ್ಯ ಆರೋಗ್ಯ, ಶಿಕ್ಷಣದ ಮತ್ತು ಮೂಲಭೂತ ಸೌಕರ್ಯ ಸೇರಿದಂತೆ ಎಲ್ಲದಕ್ಕೂ ಇರುತ್ತದೆ. ಚುನಾವಣೆಯ ಪ್ರಭಾವ ಬಜೆಟ್ ಮೇಲೆ ಇರುತ್ತದೆ. ನಾವು ಕೋವಿಡ್ ನಂತರದಲ್ಲಿ ಏನು ಆರ್ಥಿಕವಾಗಿ ಮುಂದೆ ಹೋಗುತ್ತಿದ್ದೇವೆ. 

ಅದನ್ನು ಮುಂದುವರೆಸಿಕೊಂಡು ಹೋಗುವುದು ರಾಜ್ಯದ ಅಭಿವೃದ್ಧಿಯ  ದೃಷ್ಟಿಯಿಂದ ಬಹಳ ಮುಖ್ಯ. ಆರ್ಥಿಕ ಶಿಸ್ತು ತಂದು ರಾಜ್ಯದ ಹಿತದೃಷ್ಟಿಯನ್ನು ನಮ್ಮ ಗಮನದಲ್ಲಿಟ್ಟುಕೊಂಡಿದ್ದೇವೆ ಎಂದರು.