ಪ್ರಸಕ್ತ ವರ್ಷ ರಾಜ್ಯ ಚುನಾವಣೆ ಹಾಗೂ ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದ್ದು, ಎರಡೂ ಚುನಾವಣೆಗಳಿಗೆ ಭಾರತೀಯ ಚುನಾವಣಾ ಆಯೋಗ ಸದ್ದಿಲ್ಲದೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡು, ಕೇರಳದಲ್ಲಿ ಭಾರೀ ಮಳೆ, ರಾಜ್ಯದಲ್ಲಿ ಹವಾಮಾನ ಹೇಗಿದೆ ?
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ 7 ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳು ಮತ್ತು ವಿವಿಪ್ಯಾಟ್‌ಗಳ ಉಗ್ರಾಣಕ್ಕಾಗಿ ಸುಸಜ್ಜಿತ ಕಟ್ಟಡವನ್ನು ಪಿಲ್ಲಹಳ್ಳಿ ಗ್ರಾಮದಲ್ಲಿ ನಿರ್ಮಾಣ ಮಾಡಲಾಗಿದೆ.
ಈ ಉಗ್ರಾಣವನ್ನು ಜಿಲ್ಲಾ ಚುನಾವಣಾ ಅಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಗುರುವಾರ ಉದ್ಘಾಟಿಸಿದರು.
Kisan Credit Card: ಕಿಸಾನ್ ಕ್ರೆಡಿಟ್ ಕಾರ್ಡ್ ಎಂದರೇನು, ಯಾರೆಲ್ಲ ಇದಕ್ಕೆ ಅರ್ಹರು ಇಲ್ಲಿದೆ ಸಂಪೂರ್ಣ ಮಾಹಿತಿ!
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ 7 ವಿಧಾನಸಭಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳು(Electronic voting machine) ಮತ್ತು ವಿವಿಪ್ಯಾಟ್(Voter-verified paper audit trail)ಗಳ ಉಗ್ರಾಣಕ್ಕಾಗಿ ಸರ್ವೇ ಸಂಖ್ಯೆ. 77 ಪಿಲ್ಲಹಳ್ಳಿ ಗ್ರಾಮ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ ತಾ. ವ್ಯಾಪ್ತಿಯಲ್ಲಿ 2 ಎಕರೆ ಪ್ರದೇಶದಲ್ಲಿ ಕಟ್ಟಡವನ್ನು ನಿರ್ಮಿಸಲಾಗಿದೆ.
ಬಜೆಟ್ 2023: ಮಹಿಳೆಯರಿಗೆ ಉಳಿತಾಯ ಖಾತೆಯ ಮೂಲಕ 7.5% ಬಡ್ಡಿ!
ಜಿಲ್ಲಾ ಚುನಾವಣಾ ಅಧಿಕಾರಿ-ಬೆಂಗಳೂರು ರವರ ವ್ಯಾಪ್ತಿಯಲ್ಲಿ 4 ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳು(ಬೆಂಗಳೂರು ನಗರ, ಕೇಂದ್ರ, ಉತ್ತರ ಹಾಗೂ ದಕ್ಷಿಣ) ಬರಲಿದ್ದು, 4 ಉಗ್ರಾಣಗಳ ಪೈಕಿ ಪಿಲ್ಲಹಳ್ಳಿ ಗ್ರಾಮದಲ್ಲಿ ಹೊಸದಾಗಿ ಬೆಂಗಳೂರು ನಗರ ಜಿಲ್ಲೆಯ ಉಗ್ರಾಣವನ್ನು ಸ್ಥಾಪಿಸಲಾಗಿದೆ ಎಂದು ತುಷಾರ್‌ಗಿರಿನಾಥ್ ತಿಳಿಸಿದರು.
ಈ ಹಿಂದೆ ನಗರದಲ್ಲೇ ಉಗ್ರಾಣಗಳ ವ್ಯವಸ್ಥೆಯಿತ್ತು. ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಹಾಗೂ ನಿರ್ದೇಶನದಂತೆ ಇವಿಎಂ ಹಾಗೂ ವಿವಿಪ್ಯಾಟ್ ಗಳ ಉಗ್ರಾಣಗಳನ್ನು ಪ್ರತ್ಯೇಕವಾಗಿ ಸ್ಥಾಪಿಸಲಾಗುತ್ತಿದ್ದು, ಅದರ ಸಲುವಾಗಿ ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಉಗ್ರಾಣವನ್ನು ಸ್ಥಾಪಿಸಲಾಗಿದೆ.
ಇದಲ್ಲದೆ ಇದೇ ಸ್ಥಳದಲ್ಲಿ ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣದ ಉಗ್ರಾಣಗಳ ಕಟ್ಟಡ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಮುಂದಿನ ಲೋಕಸಭಾ ಚುನಾವಣೆಯ ವೇಳೆಗೆ ಉಗ್ರಾಣಗಳ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಸೇವೆಗೆ ಬಳಸಿಕೊಳ್ಳಲಾಗುವುದೆಂದು ತಿಳಿಸಿದರು.
ಮುಂಬರುವ ಸಾರ್ವತ್ರಿಕ ಚುನಾವಣೆಯ ಸಂಬಂಧ ಈಗಾಗಲೇ ಇವಿಎಂಗಳು ಬಂದಿದ್ದು, ಉಗ್ರಾಣದಲ್ಲಿ ಶೇಖರಿಸಿಡಲಾಗಿದೆ. ವಿವಿಪ್ಯಾಟ್‌ಗಳು ಬರಬೇಕಿದ್ದು, ಅವು ಬಂದ ನಂತರ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಫೆ. 10 ರಿಂದ 19 ರೊಳಗಾಗಿ ದಿನಾಂಕವನ್ನು ನಿಗದಿಪಡಿಸಿಕೊಂಡು ಫಸ್ಟ್ ಲೆವೆಲ್ ಚೆಕ್ಕಿಂಗ್ ಮಾಡಲಾಗುವುದು ಎಂದರು.
ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದೇನು,ಬಜೆಟ್ ಹೈಲೆಟ್ಸ್ ಇಲ್ಲಿದೆ!
ಬೆಂಗಳೂರು ನಗರ ಅಪರ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಯಾದ ಕೆ.ಎ.ದಯಾನಂದ್ ಮಾತನಾಡಿ, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಗೆ 7 ವಿಧಾನ ಸಭಾ ಕ್ಷೇತ್ರಗಳು ಬರಲಿದ್ದು, ಒಟ್ಟು 3083 ಮತಗಟ್ಟೆಗಳು ಬರಲಿವೆ.
ಈ ಪೈಕಿ ಶೇ. 125 ಇವಿಎಂ ಈಗಾಗಲೇ ಸ್ವೀಕೃತವಾಗಿದ್ದು, ಉಗ್ರಾಣದಲ್ಲಿ ಶೇಖರಿಸಿಡಲಾಗಿದೆ. ಶೇ. 135 ವಿವಿಪ್ಯಾಟ್ ಸ್ವೀಕೃತವಾಗಬೇಕಿದ್ದು, ಇದೇ 6ನೇ ತಾರೀಖು ಬರಲಿವೆ. ಈ ವೇಳೆಗೆ ಉಗ್ರಾಣದ ಸುತ್ತಲೂ ಕಾಂಪೌಂಡ್ ಗೋಡೆ ನಿರ್ಮಿಸಲಾಗಿದೆ.
ಇದೇ ಸ್ಥಳದಲ್ಲಿ ಫಸ್ಟ್ ಲೆವೆಲ್ ಚೆಕ್ಕಿಂಗ್ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರ ವ್ಯಾಪ್ತಿಗೆ ಯಲಹಂಕ, ಯಶವಂತಪುರ, ಬ್ಯಾಟರಾಯನಪುರ, ಮಹದೇವಪುರ, ದಾಸರಹಳ್ಳಿ, ಆನೇಕಲ್ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳು ಬರಲಿವೆ. ಉಗ್ರಾಣದ ಸ್ಥಳದಲ್ಲಿ ಅಗತ್ಯ ಸಿ.ಸಿ.ಟಿ.ವಿ ಪೊಲೀಸ್ ಭದ್ರತಾ ಸಿಬ್ಬಂದಿಯ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಈಗಾಗಲೇ ಬಂದಿರುವ ಇವಿಎಂಗಳನ್ನು ಹಳೆಯ ಉಗ್ರಾಣದಲ್ಲಿ ಶೇಖರಿಸಿಟ್ಟಿದ್ದು, ಅದನ್ನು ಇಲ್ಲಿಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದರು.
ಇವಿಎಂ ಮತ್ತು ವಿ.ವಿಪ್ಯಾಟ್ ಗಳ ಉಗ್ರಾಣಗಳ ಮಾಹಿತಿ
- ಬೆಂಗಳೂರು ಉತ್ತರ ಮತ್ತು ಬೆಂಗಳೂರು ದಕ್ಷಿಣ: ವಲಯ ಜಂಟಿ ಆಯುಕ್ತರ ಕಛೇರಿ(ದಕ್ಷಿಣ), 2ನೇ ಬ್ಲಾಕ್, ಜಯನಗರ.
- ಬೆಂಗಳೂರು ಕೇಂದ್ರ: ಅಂಬೇಡ್ಕರ್ ಕ್ರೀಡಾಂಗಣ, ಬಸವೇಶ್ವರ ನಗರ.
- ಬೆಂಗಳೂರು ನಗರ ಜಿಲ್ಲೆ: ಪಿಲ್ಲಹಳ್ಳಿ ಗ್ರಾಮ, ದಾಸನಪುರ ಹೋಬಳಿ, ಬೆಂಗಳೂರು ಉತ್ತರ ತಾ.
ಬೆಂಗಳೂರು ನಗರ ಜಿಲ್ಲೆಯ ಉಗ್ರಾಣ ಕಟ್ಟಡದ ವಿವರ
- ಕಟ್ಟಡದ ವಿಸ್ತೀರ್ಣ: 8731.74ಚ.ಮೀ
- ಕಟ್ಟಡದ ಒಟ್ಟು ವೆಚ್ಚ: 5.10 ಕೋಟಿ ರೂಪಾಯಿ
Share your comments