News

Modi 6ಜಿ ತಂತ್ರಜ್ಞಾನದಲ್ಲಿ ಭಾರತ ಮುಂಚೂಣಿ: ಮೋದಿ

28 October, 2023 2:56 PM IST By: Hitesh
India at the forefront of 6G technology: Modi

ಇಂದಿನ ಪ್ರಮುಖ ಐದು ಸುದ್ದಿಗಳ ಚುಟುಕು ಇಲ್ಲಿದೆ.

1. ದೇಶದಲ್ಲಿ 51 ಸಾವಿರ ಜನರಿಗೆ ನೇಮಕಾತಿ ಪತ್ರ

2. 6ಜಿ ತಂತ್ರಜ್ಞಾನದಲ್ಲಿ ಭಾರತ ಮುಂಚೂಣಿ: ಮೋದಿ

3. ಹಮೂನ್‌ ಚಂಡಮಾರುತ ರಾಜ್ಯದಲ್ಲಿ ಭಾರೀ ಮಳೆ: ಎಚ್ಚರಿಕೆ

4. ಧಾರವಾಡ ಕೃಷಿ ವಿಶ್ವವಿದ್ಯಾಲಯಕ್ಕೆ ಮಜುಂದಾರ್-ಶಾ

5. ಏಳನೇ ವೇತನ ಆಯೋಗ, ಹಳೇ ಪಿಂಚಣಿ ಶೀಘ್ರ ಜಾರಿ: ಸರ್ಕಾರ

ಸುದ್ದಿಗಳ ವಿವರ ಈ ರೀತಿ ಇದೆ.

1. ದೇಶದ 37 ಸ್ಥಳಗಳಲ್ಲಿ ಶನಿವಾರ ರೋಜ್‌ಗಾರ್ ಮೇಳವನ್ನು ಆಯೋಜಿಸಲಾಗಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 51 ಸಾವಿರಕ್ಕೂ ಹೆಚ್ಚು

ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಲಿದ್ದಾರೆ. ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು

ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ನೇಮಕಾತಿಗಳು ನಡೆಯುತ್ತಿವೆ. 

ರೈಲ್ವೆ ಸಚಿವಾಲಯ, ಗೃಹ ಸಚಿವಾಲಯ, ಅಂಚೆ ಇಲಾಖೆ, ಕಂದಾಯ ಮತ್ತು ಉನ್ನತ ಶಿಕ್ಷಣ ಸೇರಿದಂತೆ ವಿವಿಧ ಸಚಿವಾಲಯ

ಹಾಗೂ ಇಲಾಖೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿದೆ.
-----------------------
2. 6ಜಿ ತಂತ್ರಜ್ಞಾನದಲ್ಲಿ ಭಾರತ ಮುಂಚೂಣಿಯಲ್ಲಿ ಸಾಗುತ್ತಿದೆ  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೆಹಲಿ ಭಾರತ್ ಮಂಟಪದಲ್ಲಿ ಶುಕ್ರವಾರ 7ನೇ ಸುತ್ತಿನ ಭಾರತೀಯ ಮೊಬೈಲ್ ಸಮಾವೇಶ-2023ನ್ನು ಉದ್ಘಾಟಿಸಿ ಅವರು ಮಾತನಾಡಿದರು.
-----------------------
3. ರಾಜ್ಯದಲ್ಲಿ ಭಾನುವಾರದಿಂದ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರು ಹಮೂನ್‌ ಚಂಡ ಮಾರುತದ ಪ್ರಭಾವದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

ಅಕ್ಟೋಬರ್‌ 29ರಿಂದ ನವೆಂಬರ್‌ 1ರ ವರಗೆ ಭಾರೀ ಮಳೆಯಾಗಲಿದೆ. ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿಯ ದಕ್ಷಿಣ ಕನ್ನಡ

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೇ ಹಮೂನ್‌ ಚಂಡ ಮಾರುತದಿಂದಾಗಿ ಬೆಂಗಳೂರು ನಗರ....

, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಕೋಲಾರ, ಶಿವಮೊಗ್ಗ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ

ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಶನಿವಾರ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ

ಕೂಡಿದ ಸಾಧಾರಣ ಮಳೆಯಾಗಲಿದೆ. ರಾಜ್ಯದ  ಹಲವು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ

ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

-----------------------
4. ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಪರಿವೀಕ್ಷಣೆ ನಡೆಸುವಂತೆ ಬಯೋಕಾನ್ ಮುಖ್ಯಸ್ಥೆ

ಕಿರಣ್ ಮಜುಂದಾರ್-ಶಾ ಅವರನ್ನು ಆಹ್ವಾನಿಸಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಮಜುಂದಾರ್-ಶಾ ಅವರನ್ನು ಭೇಟಿ

ಮಾಡಿರುವ ಸಂತೋಷ್‌ ಲಾಡ್‌ ಅವರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ.
----------------------- 

ಏಳನೇ ವೇತನ ಆಯೋಗ ಹಾಗೂ ಹಳೇ ಪಿಂಚಣಿ ಜಾರಿಗೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.

ರಾಜ್ಯದ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಏಳನೇ ವೇತನ ಆಯೋಗ ರಚನೆ ಮಾಡಲಾಗಿದೆ.

ನವೆಂಬರ್‌ ಒಳಗಾಗಿ ವರದಿಯನ್ನು ಮಂಡಿಸುವಂತೆ ವೇತನ ಆಯೋಗಕ್ಕೆ ಸೂಚಿಸಲಾಗಿದ್ದು, ವರದಿ ಬಂದ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂದಿದ್ದಾರೆ. ಇನ್ನು ಹಳೆಯ ಪಿಂಚಣಿ ಜಾರಿಗೆ ಸರ್ಕಾರ ಬದ್ಧವಾಗಿದೆ.

ವರದಿ ನೀಡಲು ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.