1. ಸುದ್ದಿಗಳು

ನಿಷೇಧದ ನಡುವೆಯೂ ಭಾರತದಿಂದ 18 ಲಕ್ಷ ಟನ್‌ ಗೋಧಿ ರಫ್ತು..!

Kalmesh T
Kalmesh T
India exports 18 lakh tonnes of wheat despite ban

ದೇಶದಲ್ಲಿ ಹೆಚ್ಚಿದ್ದ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣದ ನಿಟ್ಟಿನಲ್ಲಿ ಗೋಧಿ ರಫ್ತನ್ನು ನಿಷೇಧಿಸಲಾಗಿತ್ತು. ಆದರೆ, ಈ ನಡುವೆಯೂ ಭಾರತದಿಂದ 18 ಲಕ್ಷ ಟನ್‌ ಗೋಧಿ ರಫ್ತು ಆಗಿದೆ ಎಂದು ವರದಿಗಳು ಹೇಳಿವೆ.

ಇದನ್ನೂ ಓದಿರಿ: 40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದ ಪ್ರತಿ ತಿಂಗಳು ದೊರೆಯಲಿದೆ ₹1000 ..! ಅರ್ಜಿ ಸಲ್ಲಿಸುವುದು ಹೇಗೆ ಗೊತ್ತೆ?

ದೇಶದಲ್ಲಿ ಬೆಲೆ ಏರಿಕೆ ತಡೆಯುವ ಸಲುವಾಗಿ ಕೇಂದ್ರ ಸರ್ಕಾರ ಮೇ 13ರಂದು ಗೋಧಿ ರಫ್ತನ್ನು ನಿಷೇಧಿಸಿತ್ತು. ಆ ಬಳಿಕ ಇಲ್ಲಿಯವರೆಗೆ 18 ಲಕ್ಷ ಟನ್ ಗೋಧಿ ರಫ್ತು ಮಾಡಲಾಗಿದೆ ಈ ಕುರಿತು ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದಾರೆ.

'ಜಾಗತಿಕ ಆಹಾರ ಭದ್ರತೆಗಾಗಿ ಒಗ್ಗೂಡುವಿಕೆ' ಎಂಬ ವಿಷಯದಲ್ಲಿ ಜರ್ಮನಿಯ ಬರ್ಲಿನ್‌ನಲ್ಲಿ ನಡೆದ ಸಚಿವರ ಸಮಾವೇಶದಲ್ಲಿ ಅವರು ಮಾತನಾಡಿದರು.

ಈ ಯೋಜನೆಯಡಿ ಬೋರ್‌ವೆಲ್‌ ಕೊರೆಸಲು ಸರ್ಕಾರವೇ ನೀಡಲಿದೆ ಹಣ! ಅರ್ಜಿ ಸಲ್ಲಿಕೆ ಹೇಗೆ ಗೊತ್ತೆ?

ಮಾನವೀಯತೆಯ ಆಧಾರದಲ್ಲಿ ಅಫ್ಘಾನಿಸ್ತಾನಕ್ಕೆ 50,000 ಟನ್ ಗೋಧಿ ಕಳುಹಿಸಿಕೊಡಲು ನಿರ್ಧರಿಸಲಾಗಿತ್ತು. ಈ ಪೈಕಿ 33,000 ಟನ್ ಗೋಧಿಯನ್ನು ಈಗಾಗಲೇ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

'138 ಕೋಟಿ ಜನರನ್ನು ಪೋಷಿಸಬೇಕಾದ ಮಹತ್ವದ ಜವಾಬ್ದಾರಿ ನಡುವೆಯೂ ಭಾರತವು ಸದಾ ಜಾಗತಿಕ ಅಗತ್ಯತೆಗಳನ್ನು ಗಣನೆಗೆ ತೆಗೆದುಕೊಂಡಿದೆ' ಎಂದು ಅವರು ಹೇಳಿದ್ದಾರೆ.

ಗುಡ್‌ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ಆರಂಭಿಸುವುದಾಗಿ ಹೈಕೋರ್ಟ್‌ಗೆ ಸರ್ಕಾರ ಮನವಿ! 50 ಕೋಟಿ ಅನುದಾನ ಮೀಸಲು..

Published On: 27 June 2022, 10:32 AM English Summary: India exports 18 lakh tonnes of wheat despite ban

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.