ಭಾರತವು 2047ರ ಸ್ವಾತಂತ್ರ್ಯ ಶತಮಾನೋತ್ಸವದ ವೇಳೆಗೆ ವಿಶ್ವ ಗುರುವಾಗಿ ಹೊರಹೊಮ್ಮಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆನ್‌ಲೈನ್‌ನಲ್ಲೇ ಬೆಳೆಗಳ ಖರೀದಿ ಮತ್ತು ವಿತರಣೆ!
ರಾಮಕೃಷ್ಣ ಬೀಚ್‌ನಲ್ಲಿ ಹಮ್ಮಿಕೊಂಡಿದ್ದ ನೌಕಾಪಡೆ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಗೀತ, ಕ್ರೀಡೆ, ಸಂಸ್ಕೃತಿ
ಹಾಗೂ ಸೇನೆಯ ಸಾಮರ್ಥ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿಯೂ ಭಾರತೀಯರು ಅಗಾಧ ಸಾಮರ್ಥ್ಯ ಪ್ರದರ್ಶಿಸಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
PMFBY | ಬೆಳೆ ಹಾನಿ: ರೈತರಿಗೆ ಫಸಲ್ ಭೀಮಾ ಯೋಜನೆಯಡಿ ₹1,25,662 ಕೋಟಿ ಪಾವತಿ! |Crop Insurance
ಈ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವುದರಿಂದ ಭಾರತ ಅಗ್ರಗಣ್ಯ ದೇಶವಾಗಿ ಹೊರಹೊಮ್ಮಿದೆ ಎಂದು ಹೇಳಿದರು.
ಭಾರತವು ಅಗಾಧವಾದ ಸಾಧನೆಯನ್ನು ಮಾಡಿದರೂ, ಇಷ್ಟೊಂದು ಸಾಧನೆ ಮಾಡಿದ್ದರೂ,
ಕೆಲ ವಿಷಯಗಳಲ್ಲಿ ಏರ್ಪಟ್ಟಿರುವ ಕಂದಕಗಳನ್ನು ನಾವು ತೆಗೆದುಹಾಕಬೇಕಾಗಿದೆ.
Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!
ಈ ಧ್ಯೇಯದೊಂದಿಗೆ ದೇಶದ ಪ್ರತಿಯೊಬ್ಬ ಪ್ರಜೆ ಮುನ್ನಡೆಯಬೇಕು. ಆಗ ಮಾತ್ರ ಅಭಿವೃದ್ಧಿ ಹೊಂದಿದ, ನವಭಾರತ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದರು.
ದೇಶದ ಅಭಿವೃದ್ಧಿಯಲ್ಲಿ ಸಾಗರಗಳು ಪ್ರಮುಖ ಪಾತ್ರ ವಹಿಸುತ್ತವೆ. ಹಾಗಾಗಿ, ಕಡಲ ಗಡಿಗಳನ್ನು ರಕ್ಷಿಸುವ ಮಹತ್ತರ ಜವಾಬ್ದಾರಿ ನೌಕಾಪಡೆ ಮೇಲಿದೆ ಎಂದಿದ್ದಾರೆ.
ಇನ್ನು ಭಾರತದ ನೌಕಾಪಡೆಗೆ ಆತ್ಮನಿರ್ಭರತೆಯೇ ಚಾಲನಾ ಶಕ್ತಿ. ಹೊಸ ಹಾಗೂ ಅಭಿವೃದ್ಧಿ ಹೊಂದಿದ ಭಾರತ
ಕಟ್ಟುವ ಕನಸನ್ನು ನನಸು ಮಾಡುವುದಕ್ಕೆ ಅಗತ್ಯವಿರುವ ಶಕ್ತಿ ಸಾಮರ್ಥ್ಯದೊಂದಿಗೆ ನೌಕಾಪಡೆಯೂ ಹೆಜ್ಜೆ ಹಾಕುತ್ತದೆ ಎಂಬ ವಿಶ್ವಾಸ ಇದೆ ಎಂದು ಅವರು ಹೇಳಿದ್ದಾರೆ.
Share your comments