ದೇಶದಲ್ಲಿ ಕೊರೋನಾ ಸೋಂಕು ದಿನನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈಲು ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಸಂಚರಿಸುವ ಸಮಯದಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂಪಾಯಿ ದಂಡವಿಧಿಸಲು ಭಾರತೀಯ ರೈಲ್ವೆ ಮುಂದಾಗಿದೆ.
ರೈಲುಗಳಲ್ಲಿ ಪ್ರಯಾಣಿಸುವಾಗ ಮತ್ತು ರೈಲ್ವೆ ನಿಲ್ದಾಣದ ಆವರಣದಲ್ಲಿ ಮಾಸ್ಕ್ ಧರಿಸದವರಿಗೆ 500 ರೂಪಾಯಿಯವರೆಗೆ ದಂಡ ವಿಧಿಸಲು ಇಲಾಖೆ ನಿರ್ಧರಿಸಿದೆ. ಮಾಸ್ಕ್ ಧರಿಸುವ ಆದೇಶವನ್ನು ಮುಂದಿನ ಆದೇಶದವರೆಗೆ 6 ತಿಂಗಳವರೆಗೆ ಜಾರಿಗೆ ತರಲು ರೈಲ್ವೆ ಇಲಾಖೆ ನಿರ್ಧರಿಸಿದೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ರೈಲುಗಳಲ್ಲಿ ಪ್ರಯಾಣಿಸುವಾಗ ಮತ್ತು ರೈಲ್ವೆ ನಿಲ್ದಾಣದ ಆವರಣದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಇಲ್ಲದಿದ್ದರೆ ಕ್ರಮ ಅನಿವಾರ್ಯ ಎನ್ನುವ ಎಚ್ಚರಿಕೆಯನ್ನೂ ನೀಡಲಾಗಿದೆ.
ರೈಲ್ವೆಯಲ್ಲಿ ಪ್ರಯಾಣಿಸುವವರು, ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಒಯ್ಯಬೇಕಾಗಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿ ಮತ್ತು ಶಿಷ್ಟಾಚಾರಗಳನ್ನು ಪಾಲಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.
ಮಾಸ್ಕ್ ಧರಿಸುವ ಆದೇಶವನ್ನ ಮುಂದಿನ ಆದೇಶದವರೆಗೆ ಜಾರಿಗೆ ತರಲು ನಿರ್ಧರಿಸಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚೆಗೆ ಹೊರಡಿಸಿರುವ ಕೋವಿಡ್-19 ಮಾರ್ಗಸೂಚಿ ಮತ್ತು ಶಿಷ್ಟಾಚಾರಗಳನ್ನ ಪಾಲಿಸುವಂತೆ ಪ್ರಯಾಣಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಕೋವಿಡ್-19 ಸಾಂಕ್ರಾಮಿಕ ಮತ್ತು ಸಂಬಂಧಪಟ್ಟ ಸ್ವಚ್ಛತೆಗೆ ಸಂಬಂಧಿಸಿದಂತೆ ರೈಲ್ವೆಗಳಲ್ಲಿ ಬೇಯಿಸಿದ ಆಹಾರದ ಬದಲಿಗೆ ಸಿದ್ಧಪಡಿಸಿದ ಪ್ಯಾಕೇಜ್ ಮಾಡಿದ ಆಹಾರ ನೀಡಲು ಮಾರ್ಗಸೂಚಿ ಹೊರಡಿಸಲಾಗಿದೆ. ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಮತ್ತು ಟೇಕ್ ಎವೆ ಕಿಟ್ ವಸ್ತುಗಳು ಮಾರಾಟಕ್ಕೆ ಸಿಗುವಂತೆ ಮಾಡಲಾಗಿದೆ, ರೈಲ್ವೆ ಸ್ಟೇಷನ್ ಗಳಲ್ಲಿ ಬಹೂಪಯೋಗಿ ಸ್ಟಾಲ್ ಗಳನ್ನು ಇಡಲಾಗಿದೆ.
ಪ್ರಸ್ತುತ ದೇಶದಲ್ಲಿ ಸುಮಾರು 1402 ವಿಶೇಷ ರೈಲುಗಳ ಸಂಚಾರ ಮಾಡುತ್ತಿದ್ದು, ಈ ಪೈಕಿ ಒಟ್ಟು 5 ಸಾವಿರದ 381 ಉಪ ನಗರ ರೈಲು ಸೇವೆಗಳು ಮತ್ತು 830 ಪ್ರಯಾಣಿಕ ರೈಲುಗಳು ಸಂಚರಿಸುತ್ತಿವೆ
Share your comments