ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳಲ್ಲಿ ಓಮಿಕ್ರಾನ್ ವೈರಸ್ ಸೋಂಕಿನ ಲಕ್ಷಣಗಳು ಪತ್ತೆ
ವಿಶ್ವದ ನಾನಾ ದೇಶಗಳಲ್ಲಿ ಮತ್ತೊಮ್ಮೆ ಕೊರೊನಾ ಅಲೆಯ ಆತಂಕ ಸೃಷ್ಟಿ ಮಾಡಿರುವ ಹಾಗೂ ಇಡೀ ಜಗತ್ತಿನಲ್ಲೇ ತಲ್ಲಣ ಸೃಷ್ಟಿಸಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭಾರತಕ್ಕೆ ಕಾಲಿರಿಸೇಬಿಟ್ಟಿದೆ. ಅದೂ ಕೂಡ, ಕರ್ನಾಟಕದಲ್ಲಿ ಎಂಬುದು ಆತಂಕವನ್ನು ಹೆಚ್ಚಿದೆ.
ಹೌದು, ದೇಶದ ಮೊದಲ ಓಮಿಕ್ರಾನ್ ರೂಪಾಂತರಿ ಪ್ರಕರಣ ಬೆಂಗಳೂರಿನಲ್ಲಿ ಪತ್ತೆಯಾಗಿದೆ. ಗುರುವಾರ ಬೆಂಗಳೂರಿನಲ್ಲಿ ಇಬ್ಬರು ವ್ಯಕ್ತಿಗಳಿಗೆ ಓಮಿಕ್ರಾನ್ ಇರುವುದು ದೃಢಪಟ್ಟಿದೆ. ಇವರಿಬ್ಬರೂ ಕೆಲ ದಿನಗಳ ಹಿಂದೆ ದಕ್ಷಿಣ ಆಫ್ರಿಕಾದಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದರು. ಆಗ ಇವರ ಸ್ಯಾಬ್ ಟೆಸ್ಟ್ ಮಾಡಿ ಕ್ವಾರೆಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿತ್ತು. 66 ಮತ್ತು 46 ವರ್ಷ ವಯಸ್ಸಿನ ಈ ಇಬ್ಬರೂ ಬೆಂಗಳೂರಿನ ನಿವಾಸಿಗಳು ಎಂದು ಮೂಲಗಳು ತಿಳಿಸಿವೆ.
ನಂತರ ಈ ಇಬ್ಬರ ಸ್ಯಾಬ್ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಈ ಇಬ್ಬರಲ್ಲೂ ಓಮಿಕ್ರಾನ್ ಲಕ್ಷಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಇಬ್ಬರು ಸೋಂಕಿತರ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಈ ಪೈಕಿ ಒಬ್ಬ ಸೋಂಕಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಬ್ಬ ವ್ಯಕ್ತಿ ವಿದೇಶಕ್ಕೆ ಹೋಗಿದ್ದಾರೆ ಎನ್ನಲಾಗಿದೆ. ಆದರೆ ಪಾಸಿಟಿವ್ ವರದಿ ಬಂದ ನಂತರ ಆ ವ್ಯಕಕ್ತಿ ವಿದೇಶಕ್ಕೆ ಪ್ರಯಾಣ ಬೆಳೇಸಿದ್ದು ಹೇಗೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಇದುವರೆಗೆ ಜಗತ್ತಿನಾದ್ಯಂತ 29 ದೇಶಗಳಲ್ಲಿ ಓಮಿಕ್ರಾನ್ ರೂಪಾಂತರಿ ತಳಿಯ 373 ಪಕ್ರಕರಣಗಳು ಪತ್ತೆಯಾಗಿವೆ. ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಅಪಾಯಕಾರಿ ಅಲ್ಲ: ಸಿಎಂ
ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿರುವ ಕುರಿತು ಗುರುವಾರ ನವದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ‘ರಾಜ್ಯದಲ್ಲಿ ಪತ್ತೆಯಾಗಿರುವ ಓಮಿಕ್ರಾನ್ ಅಷ್ಟೇನೂ ಅಪಾಯಕಾರಿ ಅಲ್ಲ. ಈ ರೂಪಾಂತರಿ ವೈರಸ್‌ನ ಪರಿಣಾಮ ತಡೆಗಟ್ಟುವ ಬಗ್ಗೆ ತಜ್ಞರ ಜತೆ ಚರ್ಚಿಸಿದ್ದೇನೆ. ತಜ್ಞರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದು, ಅಗತ್ಯ ಬಿದ್ದರೆ ಕೊರೊನಾ ಮಾರ್ಗಸೂಚಿಗಳನ್ನು ಬದಲಾಯಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.
ಅಗತ್ಯ ಮುನ್ನೆಚ್ಚರಿಕೆ
‘ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ತಳಿಯಾಗಿರುವ ಓಮಿಕ್ರಾನ್ ಆತಂಕ ಸೃಷ್ಟಿಸಿರುವುದು ನಿಜ. ಆದರೆ ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್‌ಗಳನ್ನು ಮುಚ್ಚುವ ಯಾವುದೇ ಆಲೋಚನೆ ಇಲ್ಲ. ಆದರೂ, ಈ ಸೋಂಕು ಹರಡದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದ್ದಾರೆ. ‘ಇದರೊಂದಿಗೆ ಮಾಲ್ ಮತ್ತು ಚಿತ್ರö್ಮಮದಿರದಂತಹ ಜನನಿಭಿಡ ಪ್ರದೇಶಗಳಿಗೆ ಹೋಗುವ ಸಾರ್ವಜನಿಕರು ಹೆಚ್ಚು ಜಾಗೃತೆ ವಹಿಸಬೇಕು. ಸಸಾಧ್ಯವಾದಷ್ಟು ಹೆಚ್ಚು ಜನ ಸೇರುವ ಸ್ಥಳಗಳಿಂದ ದೂರ ಇರಬೇಕು ಹಾಗೂ ಜನರನನ್ನು ಸೇರಿಸಿ ಸಭಭೆ, ಸಮಾರಂಭ ಮಾಡಬಾರದು ಎಂದು ಮನವಿ ಮಾಡಿದ್ದಾರೆ. ಹಾಗೇ ಮಾಲ್ ಮತ್ತು ಚಿತ್ರಮಂದಿರಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡುವ ಆಲೋಚನೆ ರಾಜ್ಯ ಸರ್ಕಾರದ ಮುಂದಿದೆ’ ಎಂದು ಸಚಿವರು ತಿಳಿಸಿದ್ದಾರೆ.
‘ಓಮಿಕ್ರಾನ್ ವೈರಾಣುವಿನಿಂದ ಜೀವಕ್ಕೇನೂ ಅಪಾಯವಿಲ್ಲ ಎಂದು ತಜ್ಞರು ಈಗಾಗಲೆ ಹೇಳಿದ್ದಾರೆ. ಆದರೆ ಇದುವರೆಗೂ ಒಂದೂ ಡೋಸ್ ಲಸಿಕೆ ಪಡೆಯದೇ ಇರುವವರು ಲಸಿಕೆಯನ್ನು ಹಾಕಿಸಿಕೊಳ್ಳಬೇಕು. ಮುಂಜಾಗ್ರತೆ ಹಾಗೂ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಸರಕಾರ ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದರೆ, ಜನತೆ ಈ ಬಗ್ಗೆ ಅನನಗತ್ಯವಾಗಿ ಹೆದರುವ, ಭಯಭೀತರಾಗುವ ಅಗತ್ಯವಿಲ್ಲ’ ಎಂದು ಡಾ.ಅಶ್ವತ್ಥ ನಾರಾಯಣ ಹೇಳಿದರು.
‘ಜನಸಂಧಣಿ ಹೆಚ್ಚಾಗಿರುವ ಚಿತ್ರಮಂದಿರ, ಹೋಟೆಲ್, ಮಾಲ್ ರೀತಿಯ ಸ್ಥಳಗಳು ಸೇರಿದಂತೆ ಎಲ್ಲಿಗೇ ಹೋಗುವುದಿದ್ದರು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಹೋಗಬೇಕು. ಸದ್ಯಕ್ಕೆ ರಾಜ್ಯದಲ್ಲಿ 2 ಪ್ರಕರಣಗಳು ಪತ್ತೆಯಾಗಿದ್ದು, ಇವರ ಪರೀಕ್ಷಾ ವರದಿಗಳನ್ನು ಜಿನೋಮ್ ಸೀಕ್ವೆನ್ಸ್ಗೆ ಕಳಿಸಲಾಗಿದೆ. ಸಂಬAಧಿಸಿದ ವ್ಯಕ್ತಿಗಳನ್ನು ಪ್ರತ್ಯೇಕ ವಾಸದಲ್ಲಿಡಲಾಗಿದೆ. ಅಂತಿಮ ಫಲಿತಾಂಶ ನೆಗೆಟೀವ್ ಆಗಿ ಬಂದರೆ ಮಾತ್ರ ಇವರನ್ನು ಮನೆಗೆ ಕಳಿಸಿ ಕೊಡಲಾಗುವುದು. ಇದರೊಂದಿಗೆ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿರುವ 11 ದೇಶಗಳ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು.
ಆರೋಗ್ಯ ಇಲಾಖೆ ಹೇಳಿದ್ದೇನು?
ಆರೋಗ್ಯ ಸಚಿವಾಲಯ ಸ್ಥಾಪಿಸಿದ 37 ಪ್ರಯೋಗಾಲಯಗಳ ಒಕ್ಕೂಟದ ಜೀನೋಮ್ ಅನುಕ್ರಮ ಪ್ರಯತ್ನದ ಮೂಲಕ ಲಭ್ಯವಾದ ವರದಿಯ ಪ್ರಕಾರ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಕರ್ನಾಟಕದ ಇಬ್ಬರು ಪುರುಷರಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ಭಾರತದಲ್ಲಿ ಮೊದಲು ದೃಢಪಟ್ಟ ಎರಡು ಪ್ರಕರಣಗಳು ಇವಾಗಿವೆ. 45 ವರ್ಷ ಹಾಗೂ 66 ವರ್ಷದ ವ್ಯಕ್ತಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಎರಡೂ ಓಮಿಕ್ರಾನ್ ಪ್ರಕರಣಗಳ ಪ್ರಾಥಮಿಕ, ದ್ವಿತೀಯಕ ಸಂಪರ್ಕಗಳನ್ನು ಪತ್ತೆಹಚ್ಚಲಾಗಿದೆ ಮತ್ತು ಪರೀಕ್ಷಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಹಾಗೇ, ಈ ಬಗ್ಗೆ ಸಾರ್ವಜನಿಕರು ಭಯಭೀತರಾಗದಂತೆ ಮನವಿ ಮಾಡಿಕೊಂಡಿರುವ ಕೇಂದ್ರ, ಕೊರೋನಾ ತಡೆಗಟ್ಟಲು ಅನುಸರಿಸಬೇಕಾದ ಅಗತ್ಯ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದೆ.
ಪ್ರಕರಣ ಸಂಖ್ಯೆ ಏರಿಕೆ
ಪ್ರಪಂಚದಾದ್ಯAತ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಲ್ಲಿ ಯುರೋಪ್ ವಿಶ್ವದ ಶೇ.70ರಷ್ಟು ಪ್ರಕರಣಗಳನ್ನು ವರದಿ ಮಾಡಿದೆ. ನವೆಂಬರ್ 28ಕ್ಕೆ ಕೊನೆಗೊಂಡ ವಾರದಲ್ಲಿ, ಯುರೋಪಿಯನ್ ದೇಶಗಳಲ್ಲಿ 2.75 ಲಕ್ಷಕ್ಕೂ ಅಧಿಕ ಹೊಸ ಪ್ರಕರಣಗಳು ಮತ್ತು 31,000ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.