1. ಸುದ್ದಿಗಳು

ನಾಳೆಯಿಂದ ಇಂದ್ರಧನುಷ್ ಉಚಿತ ಲಸಿಕೆ

Ramlingam
Ramlingam

ಮಕ್ಕಳು ಹಾಗೂ ಗರ್ಭಿಣಿಯರಿಗೆ ಏಳು ಬಗೆಯ ರೋಗಗಳು ಬಾರದಂತೆ ತಡೆಯಲು ಇದೇ 22ರಿಂದ ಮಾರ್ಚ್ 22 ರವರೆಗೆ ಇಂದ್ರಧನುಷ್ ಲಸಿಕೆ ಅಭಿಯಾನ ನಡೆಯಲಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.

ಅವರು ಬೆಂಗಳೂರಿನ ವಿಧಾನಸೌಧದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎರಡು ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ ಬೆಂಗಳೂರು, ಬಿಬಿಎಂಪಿ ವ್ಯಾಪ್ತಿ, ಬಳ್ಳಾರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಈ ಲಸಿಕೆ ನೀಡಲಾಗುವುದು’ ಎಂದರು.

‘ಕೇಂದ್ರ ಸರ್ಕಾರ ಇಂದ್ರಧನುಷ್ 3.0 ಅಭಿಯಾನ ಅನುಷ್ಠಾನಗೊಳಿಸಿದೆ. ಅದರಂತೆ 22, 23, 24 ಮತ್ತು 26 ರಂದು ಉಚಿತ ಲಸಿಕಾ ಅಭಿಯಾನ ನಡೆಯಲಿದೆ.ಈವರೆಗೆ ತಲುಪಲಾಗದ ಪ್ರದೇಶಗಳನ್ನು ಗುರಿಯಾಗಿಟ್ಟು, ವಲಸಿಗರನ್ನು ಹೊಂದಿದ ಸ್ಲಂ, ಇಟ್ಟಿಗೆ ಸುಡುವ ಜಾಗ, ಅಲೆಮಾರಿಗಳು ವಾಸಿಸುವ ಸ್ಥಳ, ಕಟ್ಟಡ ನಿರ್ಮಾಣ ಸ್ಥಳ ಮತ್ತಿತರ ಕಡೆಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುವುದು. ಡಿಫ್ತೀರಿಯಾ, ವೂಫಿಂಗ್ ಕಾಫ್, ಟೆಟಾನಸ್, ಟ್ಯುಬರ್ ಕ್ಯುಲೋಸಿಸ್, ಪೋಲಿಯೋ, ಮಿಸಲ್ಸ್, ಹೆಪಟೈಟಸ್‌ಗೆ -ಬಿಗೆ ಈ ಲಸಿಕೆ ನೀಡಲಾಗುತ್ತದೆ’ ಎಂದೂ ಹೇಳಿದರು.

ಬಡವರು, ಕೊಳೆಗೇರಿಗಳಲ್ಲಿ ವಾಸಿಸುವ ಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ. ಕ್ಷಯ, ಧನುರ್ವಾಯು, ಗಂಟಲಮಾರಿ, ಪೋಲಿಯೋ, ಹಿಬ್, ದಡಾರ, ನಾಯಿಕೆಮ್ಮು ಸೇರಿದಂತೆ ಹಲವು ಕಾಯಿಲೆಗಳಿಗೆ ಲಸಿಕೆ ನೀಡಲಾಗುತ್ತದೆ.

Share your comments

Latest feeds

More News
Krishi Jagran Kannada Magazine Subscription Online Subscription
Krishi Jagran Kannada Subscription

CopyRight - 2021 Krishi Jagran Media Group. All Rights Reserved.