News

ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವಣ್ಣನವರ ಪ್ರತಿಮೆ ಸ್ಥಾಪನೆ – ಸಿಎಂ

16 March, 2023 12:08 PM IST By: Kalmesh T
Installation of 108 feet tall statue of Basavanna on Ghataprabha bank – CM

ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆಯನ್ನು ಸ್ಥಾಪಿಸುವ ಬಗ್ಗೆ ಸೂಕ್ತ ಆದೇಶ ನೀಡಲಾಗುವುದು. ಈ ಪ್ರದೇಶವನ್ನು ವಿಶ್ವಮಟ್ಟದ  ಪ್ರವಾಸಿ ತಾಣವಾಗಿಸುವ ಧ್ಯೇಯ ಸರ್ಕಾರದ್ದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳೆ ನಾಶಕ್ಕೆ ದುಪ್ಪಟ್ಟು ಪರಿಹಾರ: ಕೇವಲ 2 ತಿಂಗಳಲ್ಲಿ ಪರಿಹಾರ!

ಬೆಳಗಾವಿಯಲ್ಲಿ ಬಸವೇಶ್ವರರ ಪ್ರತಿಮೆ ಪ್ರತಿಷ್ಠಾಪಿಸಿರುವುದು ಅತ್ಯಂತ ಸಂತೋಷದ ಸಂಗತಿ. ಬಸವಣ್ಣನವರ ವಿಚಾರಧಾರೆಗಳು ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿದೆ.

12 ನೇ ಶತಮಾನದಲ್ಲಿ ಬಸವಣ್ಣನವರು ಸನ್ಮಾರ್ಗವನ್ನು ತೋರಿದ್ದಾರೆ. ವಿಶ್ವದ ಮೊದಲ ಸಂಸತ್ತು ಎಂದೇ ಕರೆಸಿಕೊಳ್ಳುವ ಅನುಭವ ಮಂಟಪ ಸ್ಥಾಪಿಸಿದರು.

ಅನುಭವ ಮಂಟಪದಲ್ಲಿ ಚರ್ಚಿಸಲಾಗುತ್ತಿದ್ದ ಎಲ್ಲ ವಿಷಯಗಳು ಇಂದಿಗೂ ಪ್ರಸ್ತುತ.  ಅಸಮಾನತೆ, ಲಿಂಗಭೇದ, ಮೂಢನಂಬಿಕೆ, ಅನಿಷ್ಟ ಪದ್ಧತಿಗಳನ್ನು ವಿರೋಧಿಸಿದ್ದರು.

ರೈತರಿಗೆ ಜೀವವಿಮೆ ಸೌಲಭ್ಯ ಜಾರಿ: ಸರ್ಕಾರವೇ ಭರಿಸಲಿದೆ ಬರೋಬ್ಬರಿ 180 ಕೋಟಿ ಪ್ರೀಮಿಯಂ!

ಈ ವಿಷಯಗಳ ಬಗ್ಗೆ ಸಮಾಜದಲ್ಲಿ ಸ್ಪಷ್ಟತೆ ದೊರೆಯುವ ತನಕ ಬಸವಣ್ಣನವರೂ ಪ್ರಸ್ತುತರಾಗಿಯೇ ಇರುತ್ತಾರೆ. ಬಸವಣ್ಣನವರ ತತ್ವಾದರ್ಶಗಳನ್ನು ಪಾಲಿಸುವ ಕೆಲಸವಾಗಬೇಕು ಎಂದರು.

ನಮ್ಮ ದೇಶಕ್ಕೆ ಚರಿತ್ರೆ ಇದೆ, ಚಾರಿತ್ರ್ಯ ಬೇಕಾಗಿದೆ, ಸಂಘರ್ಷವಿದೆ, ಸಮನ್ವಯ ಬೇಕಾಗಿದೆ.  ಸಾಮಾಜಿಕ ಪರಿವರ್ತನೆಯಾಗುವಂತಹ, ವೈಚಾರಿಕವಾಗಿ  ಮುನ್ನಡೆಯಲು ಬಸವ ತತ್ವಗಳು ಪ್ರೇರಣೆ ನೀಡಲಿದೆ ಎಂದರು.

ಕೆ.ಎಲ್.ಇ ಸಂಸ್ಥೆಗಳ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್,  ಅಭಯ್ ಪಾಟೀಲ್ ಮೊದಲಾದವರು ಉಪಸ್ಥಿತರಿದ್ದರು.

ಕುರಿಗಾಹಿಗಳ ಸಂಘಕ್ಕೆ 20 ಕುರಿ 1 ಮೇಕೆ, ಮನೆ ಮತ್ತು ಶೆಡ್‌ಗಳ ನಿರ್ಮಾಣಕ್ಕೆ ಸಹಾಯ

ಎಸ್.ಸಿ/ಎಸ್.ಟಿ, ಹಿಂದುಳಿದ ವರ್ಗದವರ ಏಳಿಗೆಗೆ ಕ್ರಮ :

ಈ ಹಿಂದೆ ಸಾಮಾಜಿಕ ನ್ಯಾಯ ಕೇವಲ ಬಾಯಿ ಮಾತಿನಲ್ಲಿತ್ತು. ನಮ್ಮ ಸರ್ಕಾರ ಎಸ್.ಸಿ/ಎಸ್.ಟಿ ಮೀಸಲಾತಿಯನ್ನು ಹೆಚ್ಚಿಸಲಾಯಿತು. ಎಸ್ ಸಿ ಎಸ್ ಟಿ, ಹಿಂದುಳಿದ ವರ್ಗದವರ ಏಳಿಗೆಗೆ ಹತ್ತು ಹಲವಾರು ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. 

ಪ್ರಧಾನಿ ಮೋದಿಯವರ ಸಬ್ ಕಾ ಸಾಥ್ , ಸಬ್ ಕಾ ವಿಶ್ವಾಸ್, ಸಬ್ ಕಾ ಪ್ರಯಾಸ್ ಆಶಯದಂತೆ ರಾಜ್ಯ ಸರ್ಕಾರ ನಡೆದುಕೊಳ್ಳುತ್ತಿದೆ.

ಹಿಂದುಳಿದ ವರ್ಗದವರು, ಕುಶಲಕರ್ಮಿಗಳು ಸೇರಿದಂತೆ ಕಾಯಕ ಸಮಾಜದವರಿಗೆ ‘ಕಾಯಕ’ ಯೋಜನೆಯಡಿ 50 ಸಾವಿರ ರೂ.ಗಳ ಧನಸಹಾಯ ನೀಡಲಾಗುತ್ತಿದೆ.