News

ಅ.12ರಿಂದ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆ

11 October, 2020 2:53 PM IST By:

ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮೂರು ವಾರ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಇತ್ತೀಚೆಗೆ ಶಿಕ್ಷಕರು ಮತ್ತು ಮಕ್ಕಳಿಗೂ ಕೊರೋನಾ ಸೋಂಕು ಹೆಚ್ಚಾಗುತ್ತರುವ ಹಿನ್ನೆಲೆಯಲ್ಲಿ  ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಅಕ್ಟೋಬರ್​ 12ರಿಂದ 30ರವರೆಗೆ ಮೂರು ವಾರಗಳ ಕಾಲ ಮಧ್ಯಂತರ ರಜೆಯನ್ನು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಅಕ್ಟೋಬರ್​ 12 ರಿಂದ ಅ.30ರ ವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ನೀಡಲು ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅನೇಕ ಶಿಕ್ಷಕರು ಕೊರೊನಾಗೆ ತುತ್ತಾಗಿರುವುದನ್ನು ಗಮನಿಸಿದ್ದೇನೆ. ಹೀಗಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಕೋವಿಡ್-19 ಹಿನ್ನೆಲೆ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಹಾಗೂ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಈಗ ಮೂರು ವಾರಗಳ ಕಾಲ ಶಾಲೆಗಳಿಗೆ ಮಧ್ಯಂತರ ರಜೆ ನೀಡಲು ಸರ್ಕಾರ ನಿರ್ಧರಿಸಿದೆ.

ವಿದ್ಯಾಗಮ ಕಾರ್ಯಕ್ರಮ ಅಡಿಯಲ್ಲಿ ರಾಜ್ಯಾದ್ಯಂತ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿತ್ತು. ಆದರೆ ಇತ್ತೀಚೆಗೆ ವಿದ್ಯಾಗಮ ಕಾರ್ಯಕ್ರಮದಡಿ ಶಿಕ್ಷಣ ಪಡೆಯುತ್ತಿರುವ ಮಕ್ಕಳಿಗೂ ಕೊರೋನಾ ಸೋಕು ತಗುಲಿದ್ದು ದೊಡ್ಡ ಚರ್ಚೆಯಾಗಿ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಮರುದಿನವೇ ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಿಸಲಾಗಿದೆ.