1. ಸುದ್ದಿಗಳು

ಧಾರವಾಡದಲ್ಲಿ ಅಂತರಾಷ್ಟ್ರಿಯ ಟೆನ್ನಿಸ್‌ ಟೂರ್ನಾಮೆಂಟ್‌

Maltesh
Maltesh
International Tennis Tournament at Dharwad

ಅಂತಾರಾಷ್ಟ್ರೀಯ ಟೆನಿಸ್‌ ಫೆಡರೇಶನ್ನಿನ ವಿಶ್ವ ಟೆನಿಸ್‌ ಟೂರ್‌ ಡಾಲರ್‌ 25 ಸಾವಿರ ಬಹುಮಾನ ಮೊತ್ತದ ಪುರುಷರ ಸಿಂಗಲ್ಸ್‌ ಮತ್ತು ಡಬಲ್ಸ್‌ ಟೆನಿಸ್‌ ಪಂದ್ಯಾವಳಿ ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆ (ಡಿಡಿಎಲ್‌ಟಿಎ) ಆಶ್ರಯದಲ್ಲಿ

ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳಲ್ಲಿ ಅ. 15 ರಿಂದ 22ರ ವರೆಗೆ ನಡೆಯಲಿದ್ದು, ಪಂದ್ಯಾವಳಿಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಜಿಲ್ಲಾ ಟೆನ್ನಿಸ್  ಅಸೋಸಿಯೇಷನ್ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.

ಅವರು ಇಂದು ಬೆಳಿಗ್ಗೆ, ಜಿಲ್ಲಾ ಟೆನ್ನಿಸ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ, ಮಾತನಾಡಿದರು. ಪ್ರತಿಷ್ಠಿತ ಅಂತರಾಷ್ಟ್ರೀಯ ಟೆನ್ನಿಸ್ ಪಂದ್ಯಾವಳಿಯನ್ನು ಅ. 17ರಂದು ಬೆಳಿಗ್ಗೆ 8.30ಕ್ಕೆ ಕಾರ್ಮಿಕ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್‌ ಅವರು ಉದ್ಘಾಟಿಸಲಿದ್ದು, ಕೇಂದ್ರ ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ರಾಜ್ಯ ಯುವಜನ ಸೇವಾ ಮತ್ತು ಕ್ರೀಡಾ ಖಾತೆ ಸಚಿವ ಬಿ. ನಾಗೇಂದ್ರ, ಶಾಸಕರಾದ ಅರವಿಂದ ಬೆಲ್ಲದ ಗೌರವ ಅತಿಥಿಗಳಾಗಿ ಭಾಗವಹಿಸುವರು ಎಂದು ಅವರು ತಿಳಿಸಿದರು.

ಜಗತ್ತಿನ ವಿವಿಧ 20 ರಾಷ್ಟ್ರಗಳಿಂದ 44 ಟೆನ್ನಿಸ್ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು, ಇದರಲ್ಲಿ 12 ಜನರು ಭಾರತೀಯ ಆಟಗಾರರು ಇದ್ದಾರೆ.

ಅಂತರಾಷ್ಟ್ರೀಯ ಪಂದ್ಯಾವಳಿಯಲ್ಲಿ ಭಾರತ, ಅಮೇರಿಕಾ, ಫ್ರಾನ್ಸ್‌, ಜಪಾನ, ಮಲೇಶಿಯಾ, ನೆದರಲ್ಯಾಂಡ್‌, ಕೋರಿಯಾ, ಸ್ವೀಡನ್‌, ಗ್ರೇಟ್‌ ಬ್ರಿಟನ್‌, ಇಟಲಿ, ವಿಯಟ್ನಾಂ, ಆಸ್ಟ್ರೇಲಿಯಾ, ನೇಪಾಳ, ಸ್ವೀಜರಲ್ಯಾಂಡ್, ತೈಪೇ, ಅರ್ಜೆಂಟಿನಾ, ಉಕ್ರೇನ್‌, ಜರ್ಮನಿ, ಇರಾಕ ಮತ್ತು ಕೆಮರೂನ್ ರಾಷ್ಟ್ರಗಳ ಆಟಗಾರರು ತಮ್ಮ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ ಎಂದರು.

ಪಂದ್ಯಾವಳಿಯಲ್ಲಿ ಒಟ್ಟು 32 ಸಿಂಗಲ್ಸ್‌ ಅರ್ಹತಾ ಸುತ್ತಿನ ಪಂದ್ಯಗಳು ಮತ್ತು 32 ಮೇನ್‌ ಡ್ರಾ ಪಂದ್ಯಗಳು ನಡೆಯಲಿದ್ದು, ಈ ಪಂದ್ಯಗಳು ಅಕ್ಟೋಬರ್‌ 15, 16ರಂದು ನಡೆಯಲಿವೆ. ಅರ್ಹತಾ ಸುತ್ತಿನಲ್ಲಿ ಭಾರತದ 18 ಸೇರಿದಂತೆ ಒಟ್ಟು 27 ಆಟಗಾರರು ಪಾಲ್ಗೊಳ್ಳಲಿದ್ದಾರೆ. ಮುಖ್ಯ ಡ್ರಾ ಪಂದ್ಯಗಳು ಅಕ್ಟೋಬರ್‌ 17 ರಿಂದ ನಡೆಯಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಡಬಲ್ಸ್‌ ಪಂದ್ಯಗಳಲ್ಲಿ ನೇರವಾಗಿ ಮೇನ್‌ ಡ್ರಾ ಇರುತ್ತವೆ. 16 ಜೋಡಿಗಳು ಡಬಲ್ಸ್‌ ನಲ್ಲಿ ಭಾಗವಹಿಸುತ್ತವೆ. ಪ್ರತಿ ಪಂದ್ಯ ಬೆಸ್ಟ್‌ ಆಫ್‌ ಫೈವ್‌ ಸೆಟ್ಸ್‌ ಇರಲಿದೆ. ಅಂತಿಮ ಪಂದ್ಯಗಳು ಡಬಲ್ಸ್‌ ಹಾಗೂ ಸಿಂಗಲ್ಸ್‌ ಕ್ರಮವಾಗಿ ಅ. 21 ಹಾಗೂ 22ರಂದು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಜಿ.ಆರ್‌. ಅಮರನಾಥ ಅವರು ಈ ಪಂದ್ಯಾವಳಿಯ ನಿರ್ದೇಶಕರಾಗಿದ್ದು, ಐಟಿಎಫ್‌ ಮತ್ತು ಕೆಎಸ್‌ಎಲ್‌ಟಿಎ ಉಸ್ತುವಾರಿಯಲ್ಲಿ ಪಂದ್ಯಾವಳಿ ಜರುಗಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಬಹುಮಾನ ಮೊತ್ತ ಮತ್ತು ಪಂದ್ಯಾವಳಿಯ ಖರ್ಚಿಗಾಗಿ ಪ್ರಾಯೋಜಕರಿಂದ ನಿಧಿ ಸಂಗ್ರಹಿಸಲಾಗಿದ್ದು, ಈ ನಿಧಿಯ ಸದ್ಬಳಕೆ ಮಾಡಲಾಗುವುದು.  ಕ್ರೀಡಾ ಪ್ರೇಮಿಗಳಿಗೆ ಪಂದ್ಯ ವೀಕ್ಷಿಸಲು ಮತ್ತು ಕ್ರೀಡಾಪಟುಗಳಿಗೆ ವಸತಿ ಹಾಗೂ ಇತರ ಸೌಲಭ್ಯಗಳಿಗಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದರು.

ಈಗಾಗಲೇ ಎರಡು ಅಂತಾರಾಷ್ಟ್ರೀಯ ಎಟಿಪಿ ಪಂದ್ಯಾವಳಿಗಳನ್ನು ಸಂಘಟಿಸಿರುವ ಡಿಡಿಎಲ್‌ಟಿಎ ಆವರಣ ಈಗ ಐದು ಸುಸಜ್ಜಿತ ಸಿಂಥೆಟಿಕ್‌ ಕೋರ್ಟ್‌, ಹೊನಲು ಬೆಳಕು, ಜಿಮ್, ಆಟಗಾರರ ಡ್ರೆಸ್ಸಿಂಗ್‌ ರೂಂ, ಕ್ಲಬ್‌ ಹೌಸ್‌ ಇತ್ಯಾದಿ ಅತ್ಯಾಧುನಿಕ ಸೌಕರ್ಯಗಳಿಂದ ಸುಸಜ್ಜಿತವಾಗಿದ್ದು ಕ್ರೀಡಾ ಪ್ರೇಮಿಗಳಿಗೆ

ಐಟಿಎಫ್‌ ಪಂದ್ಯಾವಳಿ ಶ್ರೇಷ್ಠ ಟೆನಿಸ್‌ ರಸದೌತಣ ನೀಡಲು ಸಿದ್ಧವಾಗಿದೆ. ನಗರದ ಹಾಗೂ ಟೆನ್ನಿಸ್ ಆಸಕ್ತ ಕ್ರೀಡಾಪ್ರೀಮಿಗಳು ಆಟವನ್ನು ನೋಡಿ, ಆನಂದಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಪಂದ್ಯಾವಳಿಗಳು ಪ್ರತಿದಿನ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿವೆ. ಪ್ರೇಕ್ಷಕರಿಗೆ ಮುಕ್ತ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಟೆನ್ನಿಸ್ ಪಂದ್ಯಾವಳಿ ನಿರ್ದೇಶಕ ಅಮರನಾಥ ಜಿ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಬಿಬಿಎಂಪಿ ವಲಯ ಆಯುಕ್ತ ಇಬ್ರಾಹಿಂ ಮೈಗೂರ, ಮಹಾನಗರಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ.ಸಂತೋಷಕುಮಾರ ಬಿರಾದಾರ, ಟೆನ್ನಿಸ್ ಅಸೋಸಿಯೇಷನ್ ಕಾರ್ಯದರ್ಶಿ ಸಂದೀಪ ಬಣವಿ, ಪಂದ್ಯಾವಳಿ ಮಾಧ್ಯಮ ಸಮಿತಿ ಮುಖ್ಯಸ್ಥ ಗುರುರಾಜ ಜಮಖಂಡಿ ಸೇರಿದಂತೆ ಇತರರು ಇದ್ದರು. Source @ Dharwad_DIPR

Published On: 14 October 2023, 02:53 PM English Summary: International Tennis Tournament at Dharwad

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.