News

ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023: ಅದ್ಧೂರಿ ಆಚರಣೆಗೆ ಸಿದ್ಧತೆ!

13 November, 2022 12:11 PM IST By: Hitesh
International Year of Cereals-2023: Getting ready for a grand celebration!

 ವಿಶ್ವಸಂಸ್ಥೆಯು 2023ನೇ ಸಾಲಿನ ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಘೋಷಿಸಿದ್ದು, ರಾಜ್ಯದಲ್ಲಿಯೂ ಅದ್ಧೂರಿ ಆಚರಣೆಗೆ ಸಿದ್ಧತೆ ನಡೆಸಲು ಚಿಂತಿಸಲಾಗಿದೆ. 

ಚಿನ್ನದ ದರದಲ್ಲಿ ಮತ್ತೆ ಏರಿಕೆ, ಎಷ್ಟಿದೆ ಮಾರುಕಟ್ಟೆಯಲ್ಲಿ ಚಿನ್ನದ ದರ ?

ರಾಜ್ಯವು ಸಿರಿಧಾನ್ಯಗಳ ಬೆಳೆಗಳಲ್ಲಿ ಮುಂಚೂಣಿ ರಾಜ್ಯವಾಗಿ ಗುರುತಿಸಿಕೊಂಡಿದೆ. ವಿಶ್ವಸಂಸ್ಥೆಯು ಗೊತ್ತುಪಡಿಸಿದ 2023 ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಆಚರಿಸಲಾಗುತ್ತಿದೆ.

ಇದರ ಭಾಗವಾಗಿ ಜನರಲ್ಲಿ ಅದರ ಬಳಕೆಯನ್ನು ಹೆಚ್ಚಿಸುವ ಮೂಲಕ ಬೆಳೆಯನ್ನು ಉತ್ತೇಜಿಸಲು ಸರ್ಕಾರವು ಮುಂದಾಗಿದೆ.  

ಕರ್ನಾಟಕವು ಸಿರಿಧಾನ್ಯಗಳ ಬೆಳೆಗಳಲ್ಲಿ ಈಗಾಗಲೇ ಮುಂಚೂಣಿಯಲ್ಲಿದೆ ಎಂದು ಗುರುತಿಸಿಕೊಂಡಿದೆ.

ವಿಶ್ವಸಂಸ್ಥೆಯು ಗೊತ್ತುಪಡಿಸಿದ 2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ಆಚರಿಸಲಾಗುತ್ತಿದ್ದು, ಇದನ್ನು ರಾಜ್ಯದಲ್ಲೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

MBBS ಪುಸ್ತಕಗಳು ಕನ್ನಡಕ್ಕೆ ಅನುವಾದವಾಗುವುದೇ, ಸರ್ಕಾರದ ನಿಲುವೇನು?

ಜನರಲ್ಲಿ ಸಿರಿಧಾನ್ಯದ ಬಳಕೆಯನ್ನು ಉತ್ತೇಜನ ನೀಡುವುದು ಹಾಗೂ ಅದರ ಉಪಯೋಗಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಇದರ ಉದ್ದೇಶವಾಗಿದೆ.

ನೇಪಾಳದಲ್ಲಿ ಒಂದೇ ವಾರದಲ್ಲಿ ಮೂರನೇ ಬಾರಿ ಭೂಕಂಪನ: ದೆಹಲಿ ಜನಕ್ಕೆ ಆತಂಕ! 

ಮಕ್ಕಳು ಮತ್ತು ಯುವಕರಲ್ಲಿ ಸಿರಿಧಾನ್ಯಗಳ ಬಳಕೆಯ ವಿಶೇಷ ಅರಿವು ಮೂಡಿಸುವುದು ಮತ್ತು ರೈತರು ಉತ್ತಮ ಆದಾಯವನ್ನು ಗಳಿಸಲು ಪ್ರೋತ್ಸಾಹ ನೀಡುವುದು ಇದರ ಹಿಂದಿನ ಉದ್ದೇಶವಾಗಿದೆ.

ಕೃಷಿ ಇಲಾಖೆಯು ಸಾರ್ವಜನಿಕ ಶಿಕ್ಷಣ, ಉನ್ನತ ಶಿಕ್ಷಣ, ಸಮಾಜ ಕಲ್ಯಾಣ ಇಲಾಖೆಗಳು ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಸೇರಿದಂತೆ

ವಿವಿಧ ಇಲಾಖೆಗಳನ್ನು ಸಂಪರ್ಕಿಸಿ ಸಿರಿಧಾನ್ಯಗಳ ಬಳಕೆಯನ್ನು ದೊಡ್ಡ ರೀತಿಯಲ್ಲಿ ಉತ್ತೇಜಿಸಲು ಮುಂದಾಗಿದೆ.

ರಾಜ್ಯದಲ್ಲಿ ಧಾರಾಕಾರ ಮಳೆ ಸಾಧ್ಯತೆ: ಆರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌!  

International Year of Cereals-2023: Getting ready for a grand celebration!

 

ಪ್ರಸ್ತುತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ರಾಗಿ ಮತ್ತು ಜೋಳದಂತಹ ಧಾನ್ಯಗಳನ್ನು ಪೂರೈಸುತ್ತಿದೆ.

ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ರಾಗಿಯನ್ನು ನೀಡಲು ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗಿದೆ.

ಇದನ್ನೂ ಓದಿರಿ: ರಾಜೀವ್‌ ಗಾಂಧಿ ಹಂತಕರ ಬಿಡುಗಡೆ: ಸೋನಿಯಾಗಾಂಧಿ ಕ್ಷಮಾಪಣೆ, ಬಿಡುಗಡೆ ಹಿನ್ನೆಲೆ ಗೊತ್ತೆ? 

International Year of Cereals-2023: Getting ready for a grand celebration!

ರಾಜ್ಯದಲ್ಲಿ ಆಯಾ ಪ್ರದೇಶಗಳಿಗೆ ಅನುಗುಣವಾಗಿ ರಾಗಿ ಮುದ್ದೆಯಿಂದ ಜೋಳದ ರೊಟ್ಟಿಯವರೆಗೆ ಆಹಾರವನ್ನು ಪರಿಚಯಿಸುವುದಾಗಿ ಅವರು ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ನಡೆಸುತ್ತಿರುವ ಹಾಸ್ಟೆಲ್‌ಗಳಲ್ಲಿ ಸಿರಿಧಾನ್ಯಗಳ ಬಳಕೆಯನ್ನು ಉತ್ತೇಜಿನ ನೀಡಲು ಈಗಾಗಲೇ ನಿರ್ದೇಶನ ನೀಡಿದೆ.

ಅದೇ ರೀತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಂಗನವಾಡಿ ಕೇಂದ್ರಗಳಲ್ಲಿ ಸಿರಿಧಾನ್ಯಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ.

ಯುವ ಪೀಳಿಗೆ ಪೌಷ್ಟಿಕ ಆಹಾರ ಸೇವಿಸಬೇಕು ಎಂಬುದು ನಮ್ಮ ಕಾಳಜಿ . ಬಲಿಷ್ಠ ಮುಂದಿನ ಪೀಳಿಗೆಯನ್ನು ನಿರ್ಮಿಸಬೇಕು. 

ನಮ್ಮ ರೈತರಿಗೂ ಉತ್ತಮ ಆದಾಯ ಸಿಗುವಂತೆ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಬಿ.ಸಿ ಪಾಟೀಲ್‌ ಅವರು ತಿಳಿಸಿದ್ದಾರೆ.

ಕಾಲೇಜು ಕ್ಯಾಂಟೀನ್‌ಗಳಲ್ಲಿಯೂ ವಿದ್ಯಾರ್ಥಿಗಳಿಗೆ ನೀಡುವ ಆಹಾರದಲ್ಲಿ ಸಿರಿಧಾನ್ಯಗಳನ್ನು ಸೇರಿಸುವಂತೆ ಒತ್ತಾಯಿಸಲು ಖಾಸಗಿ ಕಾಲೇಜುಗಳನ್ನು ಸಂಪರ್ಕಿಸಲು ಸರ್ಕಾರ ನಿರ್ಧರಿಸಿದೆ.

ಸಿರಿಧಾನ್ಯಗಳಿಂದ ಮಾಡಬಹುದಾದ ಅನೇಕ ಪಾಕವಿಧಾನಗಳಿವೆ.

ಈ ಪ್ರಸ್ತಾವನೆಯನ್ನು ಖಾಸಗಿ ಕಾಲೇಜುಗಳು ಒಪ್ಪಿಕೊಂಡರೆ ನಮ್ಮ ರೈತರಿಗೆ ಹೊಸ ಮಾರುಕಟ್ಟೆ ತೆರೆದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.   

ಇದನ್ನೂ ಓದಿರಿ ನೇಪಾಳದಲ್ಲಿ ಭೂಕಂಪನ: ದೆಹಲಿಯಲ್ಲಿ ಭೂಮಿ ಕಂಪಿಸಿದ ಅನುಭವ!