News

ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 29 ರಂದು ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ

27 July, 2021 6:46 PM IST By:

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ವಿವಿಧ ಕಂಪನಿಗಳಲ್ಲಿ ವಿವಿಧ ಹುದ್ದೆಗಳ ಭರ್ತಿಗಾಗಿ ಇದೇ ಜುಲೈ 29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಲಬುರಗಿ ನಗರದ ಜೇವರ್ಗಿ ಕ್ರಾಸ್ ಹತ್ತಿರದ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಕಲಬುರಗಿಯ ಕರುಣಾ ಟೊಯೊಟಾದಲ್ಲಿ ರಿಸೆಪ್‌ನಿಸ್ಟ್, ಶೋರೂಂ ಸೆಲ್ಸ್ ಎಕ್ಸಿಕ್ಯೂಟಿವ್, ಇನ್ಸುರೆನ್ಸ್ ಎಕ್ಸಿಕ್ಯೂಟಿವ್ ಹಾಗೂ ಸೇಲ್ಸ್ ಟ್ರೇನರ್ ಹುದ್ದೆಗಳಿಗೆ ಅಭ್ಯರ್ಥಿಗಳು ಪಿ.ಯು.ಸಿ. ಮತ್ತು ಪದವಿ, ಡಿಪ್ಲೋಮಾ ಅಟೋಮೊಬೈಲ್‌ದಲ್ಲಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಅದೇ ರೀತಿ ಸೆಲ್ಸ್ ಆಫೀಸರ್, ಟೀಮ್ ಲಿಡರ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಡಿಪ್ಲೋಮಾ ಅಟೋಮೊಬೈಲ್, ಪಿಯುಸಿ ಹಾಗೂ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು.

ಭಾರತ ಫೈನಾನ್‌ಶಿಯಲ್ ಪೈ.ಲಿಮಿಟೆಡ್‌ದಲ್ಲಿ ಭಾರತ ಮನಿ ಆಫೀಸರ್, ಲೋನ್ ಆಫೀಸರ್ ಹಾಗೂ ಫೀಲ್ಡ್ ಅಸಿಸ್ಟಂಟ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ ಹಾಗೂ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು.

ಬೆಂಗಳೂರಿನ ನಿಡ್ಸ್ ಮ್ಯಾನ್‌ಪವರ್ ಎಜೆನ್ಸಿಯಲ್ಲಿ ಆಪರೇಟರ್ ಹುದ್ದೆಗೆ ಪಿ.ಯು.ಸಿ., ಐಟಿಐ, ಡಿಪ್ಲೋಮಾ, ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ತಮ್ಮ (ರೆಸ್ಯೂಮ್) ಬಯೋಡಾಟಾ ಹಾಗೂ ಆಧಾರ ಕಾರ್ಡ್ ಸೇರಿದಂತೆ ಅವಶ್ಯಕ ದಾಖಲೆಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.  

ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಬೇಕು. ಸಂದರ್ಶನಕ್ಕೆ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯ: ಎಂ.ಫಿಲ್. ಹಾಗೂ ಪಿ.ಎಚ್.ಡಿ ಪ್ರವೇಶಾತಿಗೆ ಅರ್ಜಿ ಅಹ್ವಾನ

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ವಿವಿಧ ಅಧ್ಯಯನ ಹಾಗೂ ಸಂಶೋಧನಾ ವಿಭಾಗಗಳಲ್ಲಿ ಎಂ.ಫಿಲ್. ಹಾಗೂ ಪಿಹೆಚ್.ಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್‌ಸೈಟ್‌ದಲ್ಲಿ ಲಭ್ಯವಿರುವ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2021ರ ಆಗಸ್ಟ್ 21 ರೊಳಗಾಗಿ ಸಂಬAಧಪಟ್ಟ ಅಧ್ಯಯನ ವಿಭಾಗದ ಮುಖ್ಯಸ್ಥರಿಗೆ ಅರ್ಜಿ ಸಲ್ಲಿಸಬೇಕು.  ಅರ್ಜಿ ಶುಲ್ಕ 1,000 ರೂ. ಇದ್ದು, ಪರಿಶಿಷ್ಟ ಜಾತಿ., ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ಇರುತ್ತದೆ.  ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.  ಎಂ.ಫಿಲ್./ಪಿಹೆಚ್.ಡಿ. ಪ್ರವೇಶ ಪರೀಕ್ಷೆ ದಿನಾಂಕವು ನಂತರ ತಿಳಿಸಲಾಗುವುದು.

ಅಭ್ಯರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಸಂಬAಧಪಟ್ಟ ಅಧ್ಯಯನ ವಿಭಾಗದ ಮುಖ್ಯಸ್ಥರನ್ನು ಹಾಗೂ ಗುಲಬರ್ಗಾ ವಿಶ್ವವಿದ್ಯಾಲಯದ www.gug.ac.inವೆಬ್‌ಸೈಟ್‌ನ್ನು ಸಂಪರ್ಕಿಸಲು ಕೋರಲಾಗಿದೆ.