ಪ್ರಸಕ್ತ 2020-21ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ (Diploma) ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರರು ಹಾಗೂ ಮಾಜಿ ಸೈನಿಕರ (Ex-serviceman) ಮಕ್ಕಳಿಗೆ ಶಿಷ್ಯವೇತನ (Scholarship) ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾಸಲಾಗಿದೆ ಎಂದು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಕಚೇರಿ ವ್ಯಾಪ್ತಿಯಲ್ಲಿ ಬರುವ ಬೀದರ, ರಾಯಚೂರ, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಮಾಜಿ ಸೈನಿಕರು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿಗಳನ್ನು (Application) ಪಡೆದು ಭರ್ತಿ ಮಾಡಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 2020ರ ಸೆಪ್ಟೆಂಬರ್ 30 ರೊಳಗಾಗಿ ಹಾಗೂ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು 2020ರ ನವೆಂಬರ್ 30 ರೊಳಗಾಗಿ ಸಲ್ಲಿಸಬೇಕು. ಕೆ.ಎಸ್.ಬಿ. ಆನ್‍ಲೈನ್‍ನಲ್ಲಿ ಶಿಷ್ಯವೇತನದ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಈ ಶಿಷ್ಯವೇತನ ಪಡೆಯಲು ಅರ್ಹರಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
Share your comments