News

ಕೊರೋನಾ ಹೆಚ್ಚಳ ಹಿನ್ನೆಲೆ IPL 2021 ರದ್ದುಗೊಳಿಸಿದ ಬಿಸಿಸಿಐ!

04 May, 2021 3:01 PM IST By:

ವಿವಿಧ ಫ್ರಾಂಚೈಸಿಗಳ ಆಟಗಾರರಿಗೆ ಕೋವಿಡ್‌-19 ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ 2021ರ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಅಮಾನತು ಮಾಡಲಾಗಿದೆ  ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಹೇಳಿದ್ದಾರೆ.

ಸನ್‌ರೈಸರ್ಸ್ ಹೈದರಾಬಾದ್‌ ತಂಡದ ವೃದ್ದಿಮಾನ್ ಸಹಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹಿರಿಯ ಸ್ಪಿನ್ನರ್‌ ಮೂರು ಫ್ರಾಂಚೈಸಿಯ ನಾಲ್ಕು ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣದಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಭಾಗವಹಿಸಿರುವ ಕೆಲವು ತಂಡದ ಆಟಗಾರರಿಗೆ ಸೋಂಕು ತಗುಲಿರುವ ಹಿನ್ನಲೆಯಲ್ಲಿ ಐಪಿಎಲ್ ಪಂದ್ಯಗಳನ್ನು ಅನಿರ್ದಿಷ್ಟಾವಧಿಗೆ ಬಿಸಿಸಿಐ ಮುಂದೂಡಿದೆ.
ಬಯೋಬಬಲ್ ನಲ್ಲಿದ್ದರೂ ಆಟಗಾರರಿಗ ಸೋಂಕು ತಗಲುತ್ರಿದೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿದ್ದು ಪಂದ್ಯಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ತಿಳಿಸಿದ್ದಾರೆ.
ಇಂದು ನಡೆಯಬೇಕಾಗಿದ್ದ ಮಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತ ನೈಟ್ ರೈಡರ್ಸ್ ತಂಡದ ನಡುವೆ ನಡೆಯಬೇಕಾಗಿದ್ದ ಪಂದ್ಯವನ್ನು ಮುಂದೂಡಲಾಗಿತ್ತು.
ದೇಶದಲ್ಲಿ ಸೋಂಕು ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಐಪಿಎಲ್ ಟೂರ್ನಿಯನ್ನು ರದ್ದುಪಡಿಸುವಂತೆ ವ್ಯಾಪಕ ಒತ್ತಾಯಗಳು ಕೇಳಿಬಂದಿದ್ದವು.
ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯಬ್ ಅಖ್ತರ್ ಐಪಿಎಲ್ ರದ್ದು ಪಡಿಸಿ ಈ ಹಣವನ್ನು ಆಕ್ಸಿಜನ್ ಪೂರೈಕೆಗೆ ನೀಡುವಂತೆ ಒತ್ತಾಯಿಸಿದ್ದರು.
ಈ ನಡುವೆ ಸೋಂಕಿನಿಂದಾಗಿ ಆರ್. ಆಶ್ವಿನ್, ಆಡಂ ಜಂಪಾ ಸೇರಿದಂತೆ ಇತರ ಆಟಗಾರರು ಹಾಗೂ ಪಂದ್ಯಕ್ಕೆ ನಿಯೋಜನೆಗೊಂಡಿದ್ದ ಅಂಪೈರ್ ಗಳು ಟೂರ್ನಿಯಿಂದ ಹಿಂದೆ ಸರಿದಿದ್ದರು.
ಆದರೆ ಬಿಸಿಸಿಐ ಐಪಿಎಲ್ ರದ್ದುಪಡಿಸುವುದಿಲ್ಲ ಹಾಗೂ ಟೂರ್ನಿ ಮುಗಿದ ಬಳಿಕ ವಿದೇಶಿ ಆಟಗಾರರನ್ನು ಸುರಕ್ಷಿತವಾಗಿ ಕಳುಹಿಸಲಾಗುವುದು ಎಂದು ಬಿಸಿಸಿಐ ಭರವಸೆ ನೀಡಿತ್ತು.

ಈಗ ಆಟಗಾರರು ಬಯೋಬಬಲ್ ನಲ್ಕಿದ್ದರೂ ಅವರಿಗೆ ಸೋಂಕು ತಗುಲಿರುವುದು ಆತಂಕ ಸೃಷ್ಟಿಸಿದೆ. ಹೀಗಾಗಿ ಟೂರ್ನಿಯನ್ಬು ಹಠಾತ್ತನೆ ಅನಿರ್ದಿಷ್ಟಾವಧಿಗೆ ಮುಂದೂಡಿದೆ.
ಕಳೆದ ಬಾರಿ ಕೋವಿಡ್ ಸೋಂಕಿನಿಂದಾಗಿ ಸಾಕಷ್ಟು ಅಳೆದು ತೂಗಿ ಐಪಿಎಲ್ ಟೂರ್ನಿಯನ್ನು ಯುಎಇಗೆ ಸ್ಥಳಾಂತರ ಮಾಡಿತ್ತು.