News

ಇಸ್ರೇಲ್‌ ಯುದ್ಧ: ನರೇಂದ್ರ ಮೋದಿ - ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಹತ್ವದ ಚರ್ಚೆ!

11 October, 2023 2:29 PM IST By: Hitesh
Israel War: Narendra Modi - Israeli Prime Minister Benjamin Netanyahu important discussion!

ಹಮಾಸ್ ಉಗ್ರರು ಹಾಗೂ ಇಸ್ರೇಲ್‌ (Hamas terrorists and Israel) ನಡುವೆ ಯುದ್ಧ ನಡೆಯುತ್ತಿರುವ ನಡುವೆಯೇ ಇಸ್ರೇಲ್

 ಪ್ರಧಾನಿ ಬೆಂಜಮಿನ್ ನೆತನ್ಯಾಹು (Israeli Prime Minister Benjamin Netanyahu)

ಹಾಗೂ ಪ್ರಧಾನಿ ನರೇಂದ್ರ  (Prime Minister Narendra Modi) ಮೋದಿ ಅವರ ನಡುವೆ ಮಹತ್ವದ ಚರ್ಚೆ ನಡೆದಿದೆ.   

ಇಸ್ರೇಲ್‌ ಹಾಗೂ ಹಮಾಸ್‌  (Hamas terrorists and Israel) ಉಗ್ರರ ನಡುವೆ ಭೀಕರವಾದ ಯುದ್ಧ ನಡೆಯುತ್ತಿದೆ.

ಈ ಯುದ್ಧದಿಂದ ಸಾವಿರಾರು ಜನ ಮೃತಪಟ್ಟಿದ್ದು, ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಇದೀಗ ಭಾರತದ ಪ್ರಧಾನಿ ನರೇಂದ್ರ ಮೋದಿ

ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ದೂರವಾಣಿಯ ಮೂಲಕ ಮಾತುಕತೆ ನಡೆಸಿದ್ದಾರೆ.

ಇಸ್ರೇಲ್‌ ಹಾಗೂ ಗಾಜಾದಲ್ಲಿ ನಡೆಯುತ್ತಿರುವ ಭಯೋತ್ಪಾದಕ ದಾಳಿಯ ಪರಿಣಾಮವಾಗಿ ಸಾವನ್ನಪ್ಪಿದ ಮತ್ತು ಗಾಯಗೊಂಡವರಿಗೆ

ಪ್ರಧಾನಿ ಮೋದಿ ಅವರು  ಸಂತಾಪ ಮತ್ತು ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ಭಾರತದ ಜನರು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಿಂದ ನಿಂತಿದ್ದಾರೆ ಎಂದು ಹೇಳಿದ್ದಾರೆ.

ಭಾರತವು ಭಯೋತ್ಪಾದನೆಯನ್ನು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ

ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು  ಪುನರುಚ್ಚರಿಸಿದ್ದಾರೆ.

ಇಸ್ರೇಲ್‌ನಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ

ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರು ಪ್ರಧಾನಮಂತ್ರಿಯವರಿಗೆ ಭರವಸೆ ನೀಡಿದ್ದಾರೆ.

ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪರಿಣಾಮವಾಗಿ ಸಾವನ್ನಪ್ಪಿದ ಮತ್ತು ಗಾಯಗೊಂಡವರಿಗೆ

ಆಳವಾದ ಸಂತಾಪ ಮತ್ತು ಸಹಾನುಭೂತಿ ವ್ಯಕ್ತಪಡಿಸಿದ ಪ್ರಧಾನಮಂತ್ರಿ ನರೇಂದ್ರ

ಮೋದಿಯವರು, ಈ ಕಷ್ಟದ ಸಮಯದಲ್ಲಿ ಇಸ್ರೇಲ್ ನೊಂದಿಗೆ ಒಗ್ಗಟ್ಟಿನಿಂದ

ಭಾರತದ ಜನರು ನಿಂತಿದ್ದಾರೆ ಎಂದು ತಿಳಿಸಿದರು.

ಭಯೋತ್ಪಾದನೆಯನ್ನು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ

ಭಾರತವು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸುತ್ತದೆ ಎಂದರು.  

ಇಸ್ರೇಲ್‌ನಲ್ಲಿರುವ ಭಾರತೀಯರ ಸುರಕ್ಷತೆಗೆ ಆದ್ಯತೆ

ಇಸ್ರೇಲ್‌ನಲ್ಲಿರುವ ಭಾರತೀಯರ ಸುರಕ್ಷತೆಗೆ ಆದ್ಯತೆ ನೀಡುವುದಾಗಿ ಇಸ್ರೇಲ್ ಪ್ರಧಾನಿ

ಬೆಂಜಮಿನ್ ನೆತನ್ಯಾಹು ಅವರು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿರುವುದಾಗಿ ಕೇಂದ್ರ ಸರ್ಕಾರ ಖಚಿತಪಡಿಸಿದೆ.

ಇದೇ ಸಂದರ್ಭದಲ್ಲಿ ಇಸ್ರೇಲ್‌ನಲ್ಲಿರುವ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ವಿಷಯವನ್ನು

ನರೇಂದ್ರ ಮೋದಿಯವರು ಚರ್ಚಿಸಿದರು. ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು

ಅವರು ಭಾರತೀಯರ ಸುರಕ್ಷತೆ ಮತ್ತ ಸಂರಕ್ಷಣೆ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ಮತ್ತು ಬೆಂಬಲದ ಭರವಸೆ ನೀಡಿದರು.

ಅಲ್ಲದೇ ಇದೇ ಸಂದರ್ಭದಲ್ಲಿ ಉಭಯ ನಾಯಕರು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡರು.

ಯಾರು ಹಮಾಸ್‌ ಉಗ್ರರು!

ಹಮಾಸ್ ಮೂಲತಃ ಇಸ್ರೇಲ್ ವಿರುದ್ಧ ಸಶಸ್ತ್ರ ಹೋರಾಟವನ್ನು ನಡೆಸುವ ಉಗ್ರ ಸಂಘಟನೆಯಾಗಿದೆ.

ಆದರೆ, ಅದರ ಮಿಲಿಟರಿ ವಿಭಾಗವಾದ ಇಝೆಡಿನ್ ಅಲ್-ಕಸ್ಸಾಮ್ ಬ್ರಿಗೇಡ್ಸ್ ನೇತೃತ್ವದಲ್ಲಿ ಪ್ಯಾಲಿಸ್ಟೈನ್‌ನಲ್ಲಿ

ಹಲವು ಸಮಾಜಸೇವೆ ಕಾರ್ಯವನ್ನೂ ಮಾಡುತ್ತಿದೆ. ಇದು ಅಚ್ಚರಿಯೆಂದರೆ ನಿಜವೇ ಇದು

ರಾಜಕೀಯ ಸಂಘಟನೆಯೂ ಹೌದು! ಇಸ್ರೇಲಿ ಆಕ್ರಮಣದ ವಿರುದ್ಧ ಪ್ಯಾಲೇಸ್ಟಿನಿಯನ್

ದಂಗೆಯ ಮೊದಲ ಭಾಗದಲ್ಲಿ ಹಮಾಸ್ ಸ್ಥಾಪಿಸಲಾಯಿತು.