1. ಸುದ್ದಿಗಳು

ಜೆಡಿಎಸ್‌- ಬಿಜೆಪಿ ಮೈತ್ರಿ; ಕಾಂಗ್ರೆಸ್‌ ಬಗ್ಗೆ ಜೆಡಿಎಸ್‌ನಿಂದ ವ್ಯಂಗ್ಯ!

Hitesh
Hitesh
JDS-BJP alliance; Sarcasm from JDS about Congress!

ರಾಜ್ಯದಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ನಡುವೆ ಮೈತ್ರಿ ಬಹುತೇಕ ಫಿಕ್ಸ್‌ ಆಗಿದೆ.

ಬಿಜೆಪಿ ಹಾಗೂ ಜೆಡಿಎಸ್‌ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದನ್ನು ಇದೀಗ ಜೆಡಿಎಸ್‌ ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ.

ಜೆಡಿಎಸ್-ಬಿಜೆಪಿ ಮೈತ್ರಿ ಮಾತು ಕೇಳಿ ಮತಿಗೆಟ್ಟು ಕೂತ ಕಾಂಗ್ರೆಸ್‌ ಲೋಕಸಭೆ

ಚುನಾವಣೆಯಲ್ಲಿ ಸಿಂಗಲ್ ಸೀಟಿಗೂ ದಿಕ್ಕಿಲ್ಲದ ಸ್ಥಿತಿ ನೆನೆದು ಕೈಕೈ ಪರಚಿಕೊಳ್ಳುತ್ತಿದೆ.

ಪಕ್ಷ ವಿಸರ್ಜನೆ ಬಗ್ಗೆ ಎಚ್‌.ಡಿ ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಯನ್ನೇ ತಿರುಚುತ್ತಿರುವ ಕೂಗುಮಾರಿ,

ಈಗ ಮಾರಿ ಉಳಿಸಿಕೊಳ್ಳಲು ಸತ್ಯ ತಿರುಚುತ್ತಿದೆ ಎಂದು ಜೆಡಿಎಸ್‌ ತನ್ನ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಹೇಳಿದೆ.  

75 ವರ್ಷಗಳ ಸ್ವಾತಂತ್ರ್ಯ ಭಾರತದಲ್ಲಿ ಜಾತ್ಯತೀತತೆ ಜಪ ಮಾಡಿಕೊಂಡೇ ಅಧಿಕಾರದ ಅಮಲಿನಲ್ಲಿ

ತೇಲಿ 'ಜಲ್ಸಾ' ಹೊಡೆದ ಆ ಪಕ್ಷಕ್ಕೆ ತನ್ನ ಕೊಳಕು ಬೆನ್ನೇ ಕಾಣುತ್ತಿಲ್ಲ. ಶಿವಸೇನೆ, ಜೆಡಿಯು, ಡಿಎಂಕೆಯಂಥ ಪ್ರಾದೇಶಿಕ ಪಕ್ಷಗಳ

'ಬಾಲ'ದಲ್ಲಿಯೇ ಬದುಕು ಕಂಡುಕೊಂಡು ಏದುಸಿರು ಬಿಡುತ್ತಾ ದೇಶದ ಉದ್ದಗಲಕ್ಕೂ 'ಹಸ್ತವ್ಯಸ್ತ'ವಾಗಿದೆ ಎಂದಿದೆ.

ಕಾಶ್ಮೀರದಿಂದ ಕೇರಳವರೆಗೆ, ಗುಜರಾತಿನಿಂದ ಓಡಿಶಾವರೆಗೆ ಕೈ ಪಕ್ಷ ಪಾತಾಳ ಕಚ್ಚಿರುವುದು ಆಸತ್ಯವೇ? ನಡುನೀರಿನಲ್ಲಿ ಮುಳುಗಿಹೋಗಿ,

403 ಕ್ಷೇತ್ರಗಳ ಉತ್ತರ ಪ್ರದೇಶದಲ್ಲಿ ಎರಡೇ ಕ್ಷೇತ್ರಗಳಿಗೆ ರನ್ ಔಟ್ ಆಗಿ ಮಕಾಡೆ ಮಲಗಿದ್ದೂ,

ಅಲ್ಲೂ ಬಿಎಸ್ಪಿ ಬಾಲ ಹಿಡಿದು ನೇತಾಡಿದ್ದು ಇಷ್ಟು ಬೇಗ ಮರೆತೇ ಹೋಯಿತೇ? ಎಂದು ಪ್ರಶ್ನೆ ಮಾಡಿದೆ.  

2014, 2019ರ ಲೋಕಸಭೆಯ ಚುನಾವಣೆಗಳಲ್ಲಿ ತಳಮುಟ್ಟಿದ

ಪಕ್ಷಕ್ಕೆ 2024ರಲ್ಲಾದರೂ ಅವಕಾಶ ಸಿಕ್ಕೀತೇ ಎನ್ನುವ ಚಿಂತೆ.

ಕಾಡಿ, ಬೇಡಿ ಕಟ್ಟಿಕೊಂಡ I.N.D.I.A ಮೈತ್ರಿಕೂಟಕ್ಕೆ ಸೇರಿಕೊಂಡ

ವೀರಾಧಿವೀರರೆಲ್ಲ ಬೆಂಗಳೂರಿಗೆ ಬರುವುದಕ್ಕೆ ಮೊದಲು ಎಲ್ಲೆಲ್ಲಿದ್ದರು?

ಚುನಾವಣೆ ಮುಗಿದ ಮೇಲೆ ಎಲ್ಲೆಲ್ಲಿ ಹೋಗುತ್ತಾರೆ? ಬಲ್ಲಿರಾ.. ಬಲ್ಲಿರಾ?? ಎಂದು ಪ್ರಶ್ನೆ ಮಾಡಿದ್ದು,

ಗೆದ್ದಲು ಹಿಡಿದ ಕಾಂಗ್ರೆಸ್ ಪಕ್ಷದ ಮೈತ್ರಿಕೂಟಕ್ಕೆ ಮೈಯ್ಯೆಲ್ಲಾ ರಂಧ್ರಗಳೇ ಎನ್ನುವ ಅರಿವಿಲ್ಲವೇ? 

ಶಿಲಾಯುಗದ ಪಳಿಯುಳಿಕೆಯಂತೆ ಅಳಿವಿನ ಅಂಚಿನಲ್ಲಿರುವ ಕಾಂಗ್ರೆಸ್ ಪಕ್ಷ ಕಾಣದ ಕಡಲಿಗೆ ಹಂಬಲಿಸುತ್ತಿದೆ!

ಕಂಡವರ ಆಸರೆಯಲ್ಲಿ ಚಳಿ ಕಾಯಿಸಿಕೊಳ್ಳಲು ಅವರಿವರಿಗೆಲ್ಲ ಕರ ಮುಗಿಯುತ್ತಿದೆ ಎಂದು ವ್ಯಂಗ್ಯವಾಡಿದೆ.   

Published On: 12 September 2023, 04:18 PM English Summary: JDS-BJP alliance; Sarcasm from JDS about Congress!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.