1. ಸುದ್ದಿಗಳು

ಟೈಲರ್ ಮತ್ತು ಹೊಲಿಗೆ ಯಂತ್ರ ಆಪರೇಟರ್ ಹುದ್ದೆಗೆ ಆಗಸ್ಟ್ 7 ರಂದು ಉದ್ಯೋಗ ಮೇಳ

ಕಲಬುರಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಬೆಂಗಳೂರಿನ ಆದಿತ್ಯಾ ಬಿರ್ಲಾ ಫ್ಯಾಷನ್ ಆಂಡ್ ರಿಟೇಲ್ ಲಿಮಿಟೆಡ್ ಮದುರಾ ಕ್ಲಾಥಿಂಗ್ ಯೂನಿಟ್ ಇವುಗಳ ಸಹಯೋಗದೊಂದಿಗೆ ಟೈಲರ್ ಮತ್ತು ಹೊಲಿಗೆ ಯಂತ್ರ ಆಪರೇಟರ್ ಹುದ್ದೆಗಾಗಿ ಶನಿವಾರ ಆಗಸ್ಟ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 4  ಗಂಟೆಯವರೆಗೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಸರ್ಕಾರಿ ಕೈಗಾರಿಕಾ ಸಂಸ್ಥೆ (ಪುರುಷ), ಕೇಂದ್ರ ಬಸ್‌ನಿಲ್ದಾಣ ರಸ್ತೆ, ಬಸ್ ಡಿಪೋ ನಂ 1 ಎದುರುಗಡೆ ಕಲಬುರಗಿ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‌ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ತಿಳಿಸಿದ್ದಾರೆ.

ಟೈಲರ್ ಮತ್ತು ಹೊಲಿಗೆ ಯಂತ್ರ ಆಪರೇಟರ್ ಹುದ್ದೆಗೆ 5ನೇ ತರಗತಿ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಅರ್ಹ ಜಿಲ್ಲೆಯ ನಿರುದ್ಯೋಗಿ ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ವಯೋಮಿತಿ 18 ವರ್ಷ ಮೇಲ್ಟಟ್ಟವರಾಗಿರಬೇಕು. ಊಟ ಮತ್ತು ವಸತಿ ಸೌಲಭ್ಯವಿರುತ್ತದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ತರಬೇಕು. ಅಭ್ಯರ್ಥಿಗಳನ್ನು ಮೇಲ್ಕಂಡ ದಿನದಂದು ಸಂದರ್ಶನ ಮೂಲಕ ಅಯ್ಕೆ ಮಾಡಲಾಗುತ್ತದೆ.

 ಅರ್ಹ ಮಹಿಳಾ ಅಭ್ಯರ್ಥಿಗಳು https://tinyurl.com/Tailoring-Jobs-2021 ಲಿಂಕ್‌ಗೆ ಸಂಪರ್ಕಿಸಿ ಆನ್‌ಲೈನ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಆಯ್ಕೆಯಾದ ಮಹಿಳಾ ಅಭ್ಯರ್ಥಿಗಳು ಬೆಂಗಳೂರಿನ ಆದಿತ್ಯಾ ಬಿರ್ಲಾ ಫ್ಯಾಷನ್ ಆಂಡ್ ರಿಟೇಲ್ ಲಿಮಿಟೆಡ್, ಮದುರಾ ಕ್ಲಾತಿಂಗ್ ಯೂನಿಟ್‌ಗಳಲ್ಲಿ ಕಾರ್ಯನಿರ್ವಹಿಸಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‌ನ ಜಿಲ್ಲಾ ಸಂಯೋಜಕರ ಮೊಬೈಲ್ ಸಂಖ್ಯೆ 8317384664ಗೆ ಸಂಪರ್ಕಿಸಲು ಕೋರಲಾಗಿದೆ.

ಅರ್ಹ ನಿರುದ್ಯೋಗ ಪುರುಷ/ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಪರಿಚಯ ಪತ್ರ (BIO-DATA) ದೊಂದಿಗೆ ಹಾಜರಾಗಬೇಕು.

ಸೂಚನೆ: ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಸೂಚಿಸಲಾಗಿದೆ.

Published On: 05 August 2021, 08:51 PM English Summary: Job fair in kalaburgi on 7th august

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.