News

ಕಲಬುರಗಿಯಲ್ಲಿ ಫೆ. 24 ರಂದು ಉದ್ಯೋಗ ಮೇಳ

18 February, 2021 1:58 PM IST By:

ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಹಾಗೂ ಮಾದರಿ ವೃತ್ತಿ ಕೇಂದ್ರದ ಅಡಿಯಲ್ಲಿ ಕಲಬುರಗಿಯ ಎಂ.ಎಸ್.ಕೆ. ಮಿಲ್ ರಸ್ತೆಯಲ್ಲಿರುವ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಫೆಬ್ರವರಿ 24 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

      ಈ ಉದ್ಯೋಗ ಮೇಳದಲ್ಲಿ ರಾಜ್ಯದ 10ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಬಿ.ಫಾರ್ಮಾ, ಎಂ.ಹೆಚ್.ಎ. ಇಂಜಿನಿಯರಿಂಗ್ (ಸಿವಿಲ್ ಬ್ರ್ಯಾಂಚ್ ಹೊರತುಪಡಿಸಿ) ಹಾಗೂ ಪದವೀಧರ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. 

ಮತ್ತಿತರ  ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ  ಕಚೇರಿಯನ್ನು  ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.